ಜಾತಿ ದೌರ್ಜನ್ಯ | ದಲಿತನ ಮದುವೆ ಮೆರವಣಿಗೆಯಲ್ಲಿ ಡಿಜೆ ಹಾಕಿದ್ದಕ್ಕೆ ದಾಳಿ

Date:

ದಲಿತ ಯುವಕನ ಮದುವೆ ಮೆರವಣಿಗೆಯಲ್ಲಿ ಡಿಜೆ ಮ್ಯೂಸಿಕ್ ಹಾಕಿದ್ದಕ್ಕೆ ದಲಿತರ ಮೇಲೆ ಪ್ರಬಲ ಜಾತಿಯ ದುರುಳರ ಗುಂಪು ದಾಳಿ ನಡೆಸಿ, ಕಲ್ಲು ತೂರಾಟ ಡನೆಸಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಸುನಾನಾ ಗ್ರಾಮದಲ್ಲಿ ಬುಧವಾರ ರಾತ್ರಿ ದಲಿತ ವರನ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆಯಲ್ಲಿ ಡಿಜೆ ಮ್ಯೂಸಿಕ್ ಹಾಕಲಾಗಿತ್ತು. ಈ ವೇಳೆ, ಜಾತಿ ಆಧಾರಿತ ಮತ್ತು ಆಕ್ಷೇಪಾರ್ಹ ಹಾಡನ್ನು ಹಾಕಲಾಗಿದೆ ಎಂದು ಆರೋಪಿಸಿ ಪ್ರಬಲ ಜಾತಿಗೆ ಸೇರಿದ ಗುಂಪು ದಾಂಧಲೆ ನಡೆಸಿದೆ. ಕೆಲವೇ ಕ್ಷಣಗಳಲ್ಲಿ ಗಲಾಟೆಯು ಹಿಂಸಾಚಾರಕ್ಕೆ ತಿರುಗಿದೆ. ಎರಡೂ ಸಮುದಾಯದವರು ಕೋಲು ಮತ್ತು ಕಲ್ಲುಗಳಿಂದ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಮೃಗಾಂಕ್ ಶೇಖರ್ ಪಾಠಕ್, “ಬರಾತ್‌ನ (ಮೆರವಣಿಗೆ) ಸದಸ್ಯರೊಬ್ಬರು ಜಾತಿ ಆಧಾರಿತ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಹಾಡನ್ನು ಹಾಕಿದಾಗ, ಅಲ್ಲಿದ್ದ ಇತರರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕೆ ತಲುಪಿ, ಎರಡೂ ಕಡೆಯವರನ್ನು ಸಮಾಧಾನಪಡಿಸಿ, ಮೆರವಣಿಗೆಗೆ ಭದ್ರತೆ ಒದಗಿಸಿದರು” ಎಂದು ತಿಳಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಘನಶ್ಯಾಮ್ ಸಿಂಗ್, “ಮೆರವಣಿಗೆಯಲ್ಲಿ ಹಾಕಿದ್ದ ಹಾಡು ಆಕ್ಷೇಪಾರ್ಹವಾಗಿತ್ತು ಎಂಬುದಾಗಿ ಕೆಲವರು ವಾದಿಸಿದ್ದಾರೆ. ಕೆಲವು ಅಪರಿಚಿತ ವ್ಯಕ್ತಿಗಳು ಪರಸ್ಪರ ದಾಳಿ ಮಾಡಿದರು, ಪರಸ್ಪರ ನಿಂದಿಸಿದರು, ಕೋಲುಗಳನ್ನು ಬಳಸಿದರು. ಹತ್ತಿರದ ಮನೆಗಳನ್ನು ಸಹ ಧ್ವಂಸಗೊಳಿಸಲಾಯಿತು. ಈ ಘಟನೆಯು ಭೀತಿಯನ್ನು ಸೃಷ್ಟಿಸಿತು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡಿತು” ಎಂದು ಹೇಳಿದ್ದಾರೆ.

ಪ್ರಕರಣ ದಾಖಲಿಸಲಾಗಿದ್ದು, ತನಿಖೆಗಾಗಿ ಘಟನೆಗೆ ಸಂಬಂಧಿಸಿದ ವಿಡಿಯೋ ದೃಶ್ಯಾವಳಿ ಮತ್ತು ಆಡಿಯೋ ಟ್ರ್ಯಾಕ್ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ರಾಜ್ಯ ಬಜೆಟ್ | ಯಾಲಕ್ಕಿ ನಾಡು ಹಾವೇರಿಯ ನಿರೀಕ್ಷೆಗಳೇನು?

“ಮೆರವಣಿಗೆಯ ಮೇಲೆ ಪ್ರಚೋದನೆಯಿಲ್ಲದೆ ದಾಳಿ ಮಾಡಲಾಗಿದೆ. ಹರಿತವಾದ ಆಯುಧಗಳನ್ನು ಹೊಂದಿದ್ದ ದುಷ್ಕರ್ಮಿಗಳು ಬರಾತ್ ಅನ್ನು ಗುರಿಯಾಗಿಸಿಕೊಂಡಿದ್ದಾರೆ. ಪೊಲೀಸರ ಮಧ್ಯಪ್ರವೇಶಿಕೆಯಿಂದಾಗಿ ಮದುವೆ ಮುಂದುವರಿಯಲು ಸಾಧ್ಯವಾಯಿತು” ಎಂದು ವಧುವಿನ ಸಹೋದರ ಅನೀಸ್ ಕುಮಾರ್ ಹೇಳಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರ ಶೇಖರ್ ಆಜಾದ್ ಈ ಘಟನೆಯನ್ನು ಖಂಡಿಸಿದ್ದಾರೆ. ಮೆರವಣಿಗೆಯ ಮೇಲೆ ಕೋಲುಗಳು ಮತ್ತು ಇತರ ಆಯುಧಗಳಿಂದ ದಾಳಿ ಮಾಡಲಾಗಿದೆ, ಜಾತಿವಾದಿ ನಿಂದನೆಗಳನ್ನು ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಗ್ರಾಮದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ಘರ್ಷಣೆಯಲ್ಲಿ ಭಾಗಿಯಾದವರನ್ನು ಗುರುತಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...