ಜಾತಿ ದೌರ್ಜನ್ಯ | ಅಕ್ರಮ ಗಣಿಗಾರಿಕೆ ವಿರೋಧಿಸಿದ್ದಕ್ಕೆ ದಲಿತನ ಮೇಲೆ ಸರಪಂಚ್‌ನಿಂದ ವಿಕೃತ ಹಲ್ಲೆ

Date:

ಅಕ್ರಮ ಮರಳು ಗಣಿಗಾರಿಕೆಯನ್ನು ವಿರೋಧಿಸಿದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತಿ ಸರಪಂಚ್‌ ಮತ್ತು ಸಹಾಯಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಮತ್ವಾರಾ ಗ್ರಾಮದಲ್ಲಿ ಘಟನೆ ನಡೆದಿದೆ, ಗ್ರಾಮದ ದಲಿತ ವ್ಯಕ್ತಿ ರಾಜ್‌ಕುಮಾರ್ ಚೌಧರಿ ಮೇಲೆ ಸರಪಂಚ್‌ ರಾಮಾನುಜ ಪಾಂಡೆ ಮತ್ತು ಆತನ ಸಹಾಯಕರು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಆತನ ಮೇಲೆ ರಾಮಾನುಜ ಪಾಂಡೆಯ ಮಗ ಪವನ್‌ ಪಾಂಡೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಸಂತ್ರಸ್ತ ರಾಜ್‌ಕುಮಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಗ್ರಾಮದ ಸರಪಂಚ್‌ ರಾಮಾನುಜ್ ಪಾಂಡೆ ಗ್ರಾಮದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಅವರ ಅಕ್ರಮವನ್ನು ನಾನು ವಿರೋಧಿಸಿದಕ್ಕೆ, ಪಾಂಡೆ, ಅವರ ಮಗ ಹಾಗೂ ಸಹಚರರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಸರಪಂಚ್‌ ಅವರ ಮಗ ಪವನ್ ಪಾಂಡೆ ನನ್ನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ನನ್ನ ಮೇಲೆ ನಡೆಯುತ್ತಿದ್ದ ಕ್ರೌರ್ಯವನ್ನು ನನ್ನ ತಾಯಿ ಪ್ರಶ್ನಿಸಿದ್ದಕ್ಕೆ, ಆಕೆಯ ಕೂದಲನ್ನು ಹಿಡಿದು ಎಳೆದಾಡಿ ಆಕೆಯ ಮೇಲೂ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಅವರ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ನಿ ಜಿಲ್ಲೆಯ ಹೆಚ್ಚುವರಿ ಎಸ್‌ಪಿ (ಎಎಸ್‌ಪಿ) ಸಂತೋಷ್ ಡೆಹ್ರಿಯಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...