ಜಾತಿ ದೌರ್ಜನ್ಯ | ದಲಿತ ಯುವಕನಿಗೆ ಶೂ ನೆಕ್ಕಿಸಿ, ಸವರ್ಣೀಯರಿಂದ ಹಲ್ಲೆ

Date:

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನಿಗೆ ಶೂ ನೆಕ್ಕುವಂತೆ ಮಾಡಿ ಪ್ರಬಲ ಜಾತಿಗರು ಜಾತಿ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ.  ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 15 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

- Advertisement -

ವೈರಲ್ ವೀಡಿಯೋದಲ್ಲಿ ಜಾತಿ ದೌರ್ಜನ್ಯಕ್ಕೆ ಒಳಗಾಗಿರುವ ಯುವಕನನ್ನು ರಾಯ್‌ಬರೇಲಿ ಬಳಿಯ ಉಂಚಾಹರ್ ಕೊತ್ವಾಲಿ ಪ್ರದೇಶದ ಸವಯ್ಯ ರಾಜೇ ಗ್ರಾಮದ ನಿವಾಸಿ ಅಮನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ಕೆಲವರು ಅಮಾನುಷವಾಗಿ ಥಳಿಸಿ ಶೂ ನೆಕ್ಕುವಂತೆ ಮಾಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿಡಿಯೋ ಸಂಬಂಧ ಸಾಮಾಜಿಕ ಜಾಲತಾನದಲ್ಲಿ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ ಡಾಲ್ಮೌ ಅರುಣ್ ನೌಹರ್, “ಈ ಘಟನೆ ಹಳೆಯದು.  ಉಂಚಹಾರ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಂತ್ರಸ್ತ ಯುವಕ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 12 ಮಂದಿ ಮತ್ತು 3 ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ” ಎಂದು ಹೇಳಿದ್ದಾರೆ.

ಒಂದೆಡೆ, ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ‘ಬುಲ್ಡೋಜರ್ ಆಕ್ಷನ್’ ಹೆಸರಿನಲ್ಲಿ ಹಿಂದುಳಿದ, ದಲಿತ ಸಮುದಾಯಕ್ಕೆ ಸೇರಿದ ಆರೋಪಿಗಳ ಮನೆ, ಅಂಗಡಿ, ಆಸ್ತಿಗಳನ್ನು ಕೆಡವುತ್ತಿದೆ. ಇನ್ನೊಂದೆಡೆ, ದಲಿತರ ಮೇಲೆ ಜಾತಿ ದೌರ್ಜನ್ಯಗಳು ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ದಲಿತರಿಗೆ ರಕ್ಷಣೆ ಮರೀಚಿಕೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರಕಾರ, ಆಗಸ್ಟ್ 21 ರಂದು ಘಟನೆ ನಡೆದಿದೆ. ಸಂತ್ರಸ್ತ ಅಮನ್ ಸಿಂಗ್ ಅವರು ಕೆಲಸದ ನಿಮಿತ್ತ ಉಂಚಹಾರ್‌ಗೆ ಬೈಕ್‌ನಲ್ಲಿ ತೆರಳಿದ್ದರು. ಅಲ್ಲಿ, ಅವರ ಬೈಕ್‌ಗೆ ಕಾರಿನಲ್ಲಿ ಬಂದ ನಾಲ್ಕೈದು ಮಂದಿ ಡಿಕ್ಕಿ ಹೊಡೆದು, ಅಪಹರಿಸಿ ಹಲ್ಲೆಗೈದು, ಮತ್ತೆ ಸುಂಕದಕಟ್ಟೆ ಬಳಿ ಎಸೆದು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...