ಜಾತಿ ದೌರ್ಜನ್ಯ | ಕುದುರೆ ಮೇಲೆ ಮೆರವಣಿಗೆ: ದಲಿತ ವರನ ಮೇಲೆ 40 ಮಂದಿ ಪ್ರಬಲ ಜಾತಿಯ ದುರುಳರಿಂದ ಹಲ್ಲೆ

Date:

ದಲಿತ ಸಮುದಾಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಮೆರವಣಿಗೆಯಲ್ಲಿ ಕುದುರೆ ಮೇಲೆ ಸವಾರಿ ಮಾಡುತ್ತಿದ್ದ ವರನ ಮೇಲೆ ಪ್ರಬಲ ಜಾತಿಯ 40 ಮಂದಿ ದುರುಳರು ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

- Advertisement -

ಬುಲಂದ್‌ಶಹರ್‌ನ ಧಮ್ರಾವಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ದಲಿತ ವರ ಸೇರಿದಂತೆ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಪ್ರಬಲ ಜಾತಿಯ ದುರುಳರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ವರನನ್ನು ಕುದುರೆಯಿಂದ ಎಳೆದು ಬೀಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೆರವಣಿಗೆ ಸಮಯದಲ್ಲಿ ಡಿಜೆ ಹಾಕಲಾಗಿತ್ತು. ವರನನ್ನು ಕುದುರೆ ಮೇಲೆ ಮೆರವಣಿಗೆ ಮಾಡಲಾಗುತ್ತಿತ್ತು. ಇದನ್ನು ಸಹಿಸದ ಪ್ರಬಲ ಜಾತಿಯವರು ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

ವರನ ಕುಟುಂಬಸ್ಥರಾದ ಭಗವತ್ ಸಿಂಗ್ ಅವರ ಪ್ರಕಾರ, ರಾತ್ರಿ 8 ಗಂಟೆ ಸುಮಾರಿಗೆ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆ ಸಂಗೀತವನ್ನು ವಿರೋಧಿಸಿದ ಠಾಕೂರ್ ಸಮುದಾಯದವರು ಗಲಾಟೆ ಮಾಡಿದರು. ಮದುವೆಗೆ ಬಂದಿದ್ದ ಅತಿಥಿಗಳಿಗೆ ಜಾತಿ ನಿಂದನೆ ಮಾಡಿ, ಕೋಲುಗಳು, ಕಬ್ಬಿಣದ ರಾಡ್‌ಗಳು ಮತ್ತು ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿದರು. ಹಲವರಿಗೆ ಗಾಯಗಳಾಗಿವೆ. ಗಾಯಾಳಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ರಿಜುಲ್ ಕುಮಾರ್ ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈವರೆಗೆ ಐದು ಜನರನ್ನು ಬಂಧಿಸಲಾಗಿದೆ. ಗುರುತಿಸಲಾದ 30 ವ್ಯಕ್ತಿಗಳು ಮತ್ತು ಕೆಲವು ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

“ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 191(2) (ಗಲಭೆ), 126(2) (ಚಲನೆಗೆ ತಡೆ), 324 (4) (ಕಿಡಿಗೇಡಿತನ), 115 (2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 352 (ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (1) (ಬಿ) (ಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ರಿಜುಲ್ ಕುಮಾರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...