ಜಾತಿ ದೌರ್ಜನ್ಯ | ದಲಿತ ಯುವಕನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿ ಸವರ್ಣೀಯರಿಂದ ಹಲ್ಲೆ

Date:

ದಲಿತ ಯುವಕನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿರುವ ಸವರ್ಣೀಯ ದುರುಳರು, ಆತನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ದಲಿತ ಸಮುದಾಯದ ಸಂತ್ರಸ್ತನು ಬೊಲೆರೊ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅವರು ಈ ಹಿಂದೆ, ಭಿಂಡ್‌ನ ನಿವಾಸಿ ಸೋನು ಬರು ಎಂಬಾತನ ಬಳಿ ಕೆಲಸ ಮಾಡಿದ್ದರು. ಇತ್ತೀಚೆಗೆ ಕೆಲಸ ತೊರೆದಿದ್ದರು. ಗ್ವಾಲಿಯರ್‌ನಲ್ಲಿರುವ ತನ್ನ ಪತ್ನಿಯ ತವರು ಮನೆಯಲ್ಲಿ ನೆಲೆಸಿದ್ದರು. ಅವರನ್ನು ಮೂವರು ಸವರ್ಣೀಯರು ಗ್ವಾಲಿಯರ್‌ನಿಂದ ಅಪಹರಿಸಿ, ದೌರ್ಜನ್ಯ ಎಸಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮ್ಮ ಮೇಲಾದ ದೌರ್ಜನ್ಯ/ಹಲ್ಲೆ ಕುರಿತು ಪೊಲೀಸರಿಗಡ ದೂರು ನೀಡಿರುವ ಸಂತ್ರಸ್ತ, “ಮೂರು ದಿನಗಳ ಹಿಂದೆ ಸೋನು ಬರುವಾ ಅವರು ಅಲೋಕ್ ಪಾಠಕ್ ಹಾಗೂ ಛೋಟು ಓಝಾ ಎಂಬವರ ಜೊತೆ ತನ್ನ ಪತ್ನಿಯ ತವರು ಮನೆಗೆ ಬಂದಿದ್ದರು. ತಮ್ಮ ಜೊತೆಯಲ್ಲೇ ಕೆಲಸ ಮಾಡುವಂತೆ ಒತ್ತಾಯಿಸಿದರು. ಆದರೆ, ನಾನು ನಿರಾಕರಿಸಿದೆ. ಬಳಿಕ ಅವರು ನನ್ನನ್ನು ಬೊಲೆರೊದಲ್ಲಿ ಬಲವಂತವಾಗಿ ಕೂಡಿ ಹಾಕಿ ಕರೆದೊಯ್ದರು” ಎಂದು ಆರೋಪಿಸಿದ್ದಾರೆ.

“ಭಿಂಡ್‌ಗೆ ನನ್ನನ್ನು ಎಳೆದೊಯ್ದು, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದ್ದಾರೆ. ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ಬಳಿಕ, ಮೂತ್ರವನ್ನು ಕುಡಿಯುವಂತೆ ಬಲವಂತಪಡಿಸಿದ್ದಾರೆ. ಅಲ್ಲದೆ ಅಕುಟುಪುರಾ ಗ್ರಾಮಕ್ಕೆ ನನ್ನನ್ನು ಕರೆದೊಯ್ದು ನನ್ನನ್ನು ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಿ, ರಾತ್ರಿಯಿಡೀ ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ಆರೋಪಿಸಿದ್ದಾರೆ.

ಕೊನೆಗೂ ಸಂತ್ರಸ್ತನು ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದರು. ಆತ ಭಿಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪೊಲೀಸರು ತಿಳಿಸಿದ್ದಾರೆ.

ಭೀಮ್ ಆರ್ಮಿಯ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದು, ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ ಘೋಷಣೆಗಳನ್ನು ಕೂಗಿದ್ದಾರೆ. ಒಂದು ವೇಳೆ ಸೂಕ್ತ ನ್ಯಾಯ ದೊರೆಯದೇ ಇದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...