ಜಾತಿ ವಿಕೃತಿ | ದಲಿತ ಯುವಕರ ಅರ್ಧ ತಲೆ ಬೋಳಿಸಿ, ದನಗಳಂತೆ ನಡೆಸಿ, ಹುಲ್ಲು ತಿನ್ನಿಸಿ ದೌರ್ಜನ್ಯ

Date:

ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ ಬಜರಂಗದಳದ ಕಾರ್ಯಕರ್ತರು ದಲಿತ ಯುವಕರ ಮೇಲೆ ಕ್ರೌರ್ಯ ಮೆರೆದಿದ್ದಾರೆ.

- Advertisement -

ಬಿಜೆಪಿ ಆಡಳಿತವಿರುವ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದ ಜಹ್ದಾದಲ್ಲಿ ವಿಕೃತ ಘಟನೆ ನಡೆದಿದೆ. ದನ ಕಳ್ಳಸಾಗಣೆದಾರರು ಎಂಬ ಆರೋಪದ ಮೇಲೆ ದಲಿತ ಯುವಕರನ್ನು ಬಜರಂಗದಳದ ಕಾರ್ಯಕರ್ತರು ಥಳಿಸಿ, ಅಮಾನವೀಯ ದೌರ್ಜನ್ಯ ಎಸಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಸೋಮವಾರ, ಇಬ್ಬರು ದಲಿತರನ್ನು ಹಿಡಿದ ಬಜರಂಗದಳದ ಪುಂಡರು, ಅವರ ಅರ್ಧ ಕೂದಲನ್ನು ಬೋಳಿಸಿದ್ದಾರೆ. ಅಮಾನವೀಯವಾಗಿ ಥಳಿಸಿದ್ದಾರೆ. ಮಂಡಿಯೂರಿ ಮೊಣಕಾಲುಗಳ ಮೇಲೆ ನಡೆಸಿದ್ದು, ದನಗಳ ಮೇವನ್ನು ತಿನ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋ ವೈರಲ್ ಆದ ಬಳಿಕ, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಧರಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತರನ್ನು ಗಂಜಾಂ ಜಿಲ್ಲೆಯ ಸಿಂಗಾಪುರದ ನಿವಾಸಿ ಬಾಬುಲಾ ನಾಯಕ್ (54) ಮತ್ತು ಬುಲು ನಾಯಕ್ (42) ಎಂದು ಹೆಸರಿಸಲಾಗಿದೆ. ಇಬ್ಬರೂ ಹರಿಯೋರ್‌ನಿಂದ ತಮ್ಮ ಗ್ರಾಮಕ್ಕೆ ಎರಡು ಹಸುಗಳು ಮತ್ತು ಒಂದು ಕರುವನ್ನು ಆಟೋದಲ್ಲಿ ಕೊಂಡೊಯ್ಯುತ್ತಿದ್ದರು. ಈ ವೇಳೆ, ಗೋರಕ್ಷಣೆಯ ಹೆಸರಿನಲ್ಲಿ ಬಜರಂಗದಳದ ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿ, ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಗೋರಕ್ಷಕ ಪುಂಡರ ಗುಂಪು ಸಂತ್ರಸ್ತ ದಲಿತ ಯುವಕರ ಬಳಿ 30,000 ರೂ.ಗೆ ಬೇಡಿಕೆ ಇಟ್ಟಿದೆ. ಸಂತ್ರಸ್ತರು ಹಣ ಕೊಡಲು ನಿರಾಕರಿಸಿದಾಗ, ಅವರ ಮೇಲೆ ಹಲ್ಲೆ ನಡೆಸಿ ಅವಮಾನಿಸಲಾಗಿದೆ. ಅವರ ಅರ್ಧ ತಲೆ ಬೋಳಿಸಿ, ಸುಮಾರು 1 ಕಿ.ಮೀಗೂ ಹೆಚ್ಚು ದೂರ ಮೊಣಕಾಲುಗಳ ಮೇಲೆ ನಡೆಸಿದ್ದಾರೆ. ದನಗಳ ಮೇವು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಸುವೇಂದು ಕುಮಾರ್ ಪಾತ್ರ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...