ಜಾತಿ ದೌರ್ಜನ್ಯ | ಪೊಲೀಸ್‌ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಹಲ್ಲೆ

Date:

ಪೊಲೀಸ್‌ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್‌ ಮುಖಂಡನೊಬ್ಬ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ದಲಿತ ಯುವಕ ಆಗ್ರಹಿಸಿದ್ದಾರೆ.

- Advertisement -

ತೆಲಂಗಾಣದ ಖಮ್ಮಮ್ ಜಿಲ್ಲೆಯ ಚಿಂತಕಣಿ ಪೊಲೀಸ್‌ ಠಾಣೆಯಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಚಿಂತಕಣಿ ಸಮೀಪದ ಬೋನಕಲ್ ನಿವಾಸಿ, ದಲಿತ ಯುವಕ ಬುಡಲ ಮನೋಜ್ ಎಂಬವರು ಕಾಂಗ್ರೆಸ್‌ ಮುಖಂಡ ಉಮ್ಮಿನೇನಿ ರಮೇಶ್ ಎಂಬವರ ವಿರುದ್ಧ ಜಾತಿ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಚಿಂತಕಣಿ ಬಳಿಯ ನಾಗುಲವಂಚದಲ್ಲಿ ತನ್ನ ವಾಹನಕ್ಕೆ ಪೆಟ್ರೀಲ್ ತುಂಬಿಸಲು ಪ್ರೆಟ್ರೋಲ್‌ ಬಂಕ್‌ಗೆ ಮನೋಜ್ ತೆರಳಿದ್ದರು. ಈ ವೇಳೆ, ಕೆಲವು ಯುವಕರು ಪೆಟ್ರೋಲ್ ಬಂಕ್ ಸಿಬ್ಬಂದಿಯ ಜೊತೆ ಗಲಾಟೆ ಮಾಡುತ್ತಿದ್ದರು. ಜಗಳವನ್ನು ತಡೆಯಲು ಮನೋಜ್ ಪ್ರಯತ್ನಿಸಿದ್ದಾರೆ. ಆ ಬಳಿಕ, ಗಲಾಟೆ ಮಾಡಿದ ಯುವಕರ ವಿರುದ್ಧ ಪೆಟ್ರೋಲ್ ಬಂಕ್ ಮಾಲೀಕ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದ ಪೊಲೀಸರು ವಿಚಾರಣೆಗಾಗಿ ಮನೋಜ್ ಅವರನ್ನು ಪೊಲೀಸ್ ಠಾಣೆಗೆ ಕರೆಸಿದ್ದಾರೆ. ಅದರಂತೆ, ಎಸ್‌ಐ ನಾಗುಲ್ ಮೀರಾ ಅವರೊಂದಿಗೆ ಮಾತನಾಡಲು ಪೊಲೀಸ್ ಠಾಣೆಗೆ ಮನೋಜ್ ತೆರಳಿದ್ದಾರೆ. ಈ ವೇಳೆ, ಮನೋಜ್ ಮೇಲೆ ಕಾಂಗ್ರೆಸ್ ನಾಯಕ ಉಮ್ಮಿನೇನಿ ರಮೇಶ್ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಾವು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರ ಅನುಯಾಯಿಗಳೆಂದು ಹೇಳಿಕೊಂಡಿದ್ದು, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಮನೋಜ್ ಅವರು ಚಿಂತಕಣಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...