ಯುಜಿಸಿ ನಿಯಮಗಳ ಬಗ್ಗೆ ಜಾತಿವಾದಿ ಹೇಳಿಕೆ; JNU ಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

Date:

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಯುಜಿಸಿ ನಿಯಮಗಳ ಕುರಿತು ‘ಜಾತಿವಾದಿ ಹೇಳಿಕೆ’ ನೀಡಿದ್ದಾರೆ. ಅವರ ಹೇಳಿಕೆಯನ್ನು ಜೆಎನ್‌ಯು ವಿದ್ಯಾರ್ಥಿ ಸಂಘ ಖಂಡಿಸಿದ್ದು, ರಾಜೀನಾಮೆಗೆ ಆಗ್ರಹಿಸಿದೆ.

- Advertisement -

ಫೆಬ್ರವರಿ 16ರಂದು 52 ನಿಮಿಷಗಳ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ್ದ ಪಂಡಿತ್, “ಶಾಶ್ವತ ಬಲಿಪಶುವಾಗಿ ಅಥವಾ ಸಂತ್ರಸ್ತರೆಂಬ ಕಾರ್ಡ್‌ ಬಳಸುವ ಮೂಲಕ ನೀವು ಪ್ರಗತಿ ಹೊಂದಲು ಸಾಧ್ಯವಿಲ್ಲ. ಅಮೆರಿಕಾದಲ್ಲಿ ಕಪ್ಪು ಜನರಿಗಾಗಿ ನೀತಿಗಳನ್ನು ರೂಪಿಸಿದಂತೆಯೇ ಭಾರತದಲ್ಲಿ ದಲಿತರಿಗೂ ‘ಬಲಿಪಶು ಕಾರ್ಡ್‌’ಅನ್ನು ಜಾರಿಗೆ ತಂದಿದ್ದಾರೆ. ಇದರಿಂದ, ದಲಿತರು ಸದಾ ಸಂತ್ರಸ್ತರಾಗಿ ಉಳಿಯುವ ಮನೋಭಾವವನ್ನು ಬೆಳೆಸಿಕೊಳ್ಳುತ್ತಾರೆ. ಯಾರನ್ನಾದರೂ ದೆವ್ವವನ್ನಾಗಿ ಮಾಡುವ ಮೂಲಕ, ಪ್ರಗತಿ ಸಾಧಿಸುವುದು ಸುಲಭವಲ್ಲ. ಇದು ತಾತ್ಕಾಲಿಕ ಮಾದಕವಸ್ತು ಇದ್ದಂತೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅವರ ಈ ಹೇಳಿಕೆಯು ಸ್ಪಷ್ಟವಾಗಿ ಜಾತಿವಾದಿ ಹೇಳಿಕೆಯಾಗಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘ ಆರೋಪಿಸಿದೆ. ಶುಕ್ರವಾರ ಪ್ರತಿಭಟನೆ ನಡೆಸಿದೆ. ಉಪಕುಲಪತಿಗಳು ಪಾಡ್‌ಕ್ಯಾಸ್ಟ್‌ನಲ್ಲಿ ಮಾಡಿದ ಸ್ಪಷ್ಟ ಜಾತಿವಾದಿ ಹೇಳಿಕೆಗಳಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಎಂದಿರುವ ಸಂಘವು, ಉಪಕುಲಪತಿ ಹುದ್ದೆಗೆ ಪಂಡಿತ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದೆ.

ಆದರೆ, ಆರೋಪವನ್ನು ನಿರಾಕರಿಸಿರುವ ಪಂಡಿತ್, “ನಾನು ಜಾತಿವಾದಿ ಹೇಳಿಕೆ ನೀಡಿಲ್ಲ. ವೋಕ್ಸ್ ಇತಿಹಾಸವನ್ನು ಈ ರೀತಿ ಬರೆದಿದ್ದಾರೆ ಎಂಬುದನ್ನು ವಿವರಿಸಿದ್ದೆ” ಎಂದು ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...