ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

Date:

ಪರೀಕ್ಷೆ ಬರೆಯುವಾಗ ‘ಚಾಟ್ ಜಿಪಿಟಿ’ (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ ಬಾಂಬೆಯ (IIT Bombay) ಎನರ್ಜಿ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಶುಕ್ರವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

- Advertisement -

​ಶುಕ್ರವಾರ ಬೆಳಿಗ್ಗೆ ನಡೆದ ಪರೀಕ್ಷೆಯ ವೇಳೆ ಈ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸುತ್ತಿರುವುದು ಮೇಲ್ವಿಚಾರಕರ ಗಮನಕ್ಕೆ ಬಂದಿತ್ತು. ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಚಾಟ್ ಜಿಪಿಟಿಗೆ ಅಪ್‌ಲೋಡ್ ಮಾಡಿ, ಆ ಮೂಲಕ ಉತ್ತರಗಳನ್ನು ಹುಡುಕಲು ಆತ ಯತ್ನಿಸಿದ್ದ ಎಂದು ಐಐಟಿ ಬಾಂಬೆ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

​ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸಿರಲಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಬದಲಾಗಿ, ಬೋಧಕರು ಮತ್ತು ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿಯೊಂದಿಗೆ ಮಾತನಾಡಿ, ಆಪ್ತಸಮಾಲೋಚನೆ (ಕೌನ್ಸೆಲಿಂಗ್) ನಡೆಸಿದ್ದರು. ಅಲ್ಲದೆ, ಈ ಘಟನೆಯಿಂದ ನಿನ್ನ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಧೈರ್ಯ ತುಂಬಿದ್ದರು.

​ಸಮಾಲೋಚನೆಯ ಬಳಿಕ ಹಾಸ್ಟೆಲ್ ಕೊಠಡಿಗೆ ಮರಳಿದ್ದ ವಿದ್ಯಾರ್ಥಿ, ಅಂದು ಸಂಜೆ ಶವವಾಗಿ ಪತ್ತೆಯಾಗಿದ್ದಾನೆ. ಘಟನೆಯ ಕುರಿತು ತೀವ್ರ ಸಂತಾಪ ಸೂಚಿಸಿರುವ ಐಐಟಿ, ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದೆ. ಈ ದುರಂತದ ಬೆನ್ನಲ್ಲೇ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

​ಐಐಟಿ ಕ್ಯಾಂಪಸ್‌ನಲ್ಲಿ ನಡೆದ ಇಂಥದ್ದೇ ಮತ್ತೊಂದು ದುರಂತದಲ್ಲಿ, ನವದೆಹಲಿಯ ಐಐಟಿಯಲ್ಲಿ (IIT Delhi) ಎಂಎಸ್‌ಸಿ ಭೌತಶಾಸ್ತ್ರ ಓದುತ್ತಿದ್ದ ಬಿಹಾರ ಮೂಲದ 31 ವರ್ಷದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಆಗಸ್ಟ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದನು.

​ಅಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕ್ಯಾಂಪಸ್ ಪ್ರವೇಶಿಸಿದ್ದ ಆ ವಿದ್ಯಾರ್ಥಿ, ಲೆಕ್ಚರ್ ಹಾಲ್ ಕಾಂಪ್ಲೆಕ್ಸ್‌ನ 6ನೇ ಮಹಡಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿರಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿಗೆ ನಿಖರ ಕಾರಣವನ್ನು ಪತ್ತೆಹಚ್ಚುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...