ತ್ವಿಶಾ ಶರ್ಮಾ ಪ್ರಕರಣ: ಜಾಮೀನು ರದ್ದಾದ ಬೆನ್ನಲ್ಲೇ ಅತ್ತೆ, ನಿವೃತ್ತ ನ್ಯಾಯಾಧೀಶರ ಬಂಧನ

Date:

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ (33) ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಅತ್ತೆ ಹಾಗೂ ಮಾಜಿ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ಅವರನ್ನು ಸಿಬಿಐ ಇಂದು (ಮೇ 28) ಬಂಧಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

- Advertisement -

ಮೇ 12ರಂದು ಭೋಪಾಲ್‌ನಲ್ಲಿರುವ ಪತಿಯ ಮನೆಯಲ್ಲಿ ತ್ವಿಶಾ ಶರ್ಮಾ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಮೇ 15ರಂದು ಎಫ್‌ಐಆರ್ ದಾಖಲಾಗಿತ್ತು. ವರದಕ್ಷಿಣೆ ಕಿರುಕುಳ, ದೈಹಿಕ ಹಿಂಸೆ ಹಾಗೂ ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ತ್ವಿಶಾ ಪೋಷಕರು ದೂರು ನೀಡಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ತನಿಖೆ ಚುರುಕುಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೇ 15ರಂದು ಭೋಪಾಲ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಗಿರಿಬಾಲಾ ಸಿಂಗ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ದೇವನಾರಾಯಣ್ ಮಿಶ್ರಾ ಅವರ ಪೀಠವು, ಜಾಮೀನು ರದ್ದುಗೊಳಿಸಿ ಬುಧವಾರ ತೀರ್ಪು ನೀಡಿದೆ.

ಸಾಕ್ಷ್ಯಾಧಾರಗಳ ಕೊರತೆ, ತನಿಖೆಗೆ ಅಸಹಕಾರ, ಆರೋಪಗಳ ಗಂಭೀರತೆ ಹಾಗೂ ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿರುವ ಗಾಯದ ಗುರುತುಗಳು ಮತ್ತು ವಾಟ್ಸಾಪ್ ಸಂದೇಶಗಳನ್ನು ಪರಿಗಣಿಸಿ ಜಾಮೀನು ರದ್ದುಪಡಿಸಲಾಗಿದೆ. ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಸೂಕ್ತವಾಗಿ ಪರಿಶೀಲಿಸದೆ ರಕ್ಷಣೆ ನೀಡಿತ್ತು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಗರ್ಭಪಾತ ಮಾಡಿಸುವಂತೆ ತ್ವಿಶಾ ಅವರ ಮೇಲೆ ಒತ್ತಡ ಹೇರಿದ್ದ ಬಗ್ಗೆಯೂ ಉಲ್ಲೇಖಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಹಾಗೂ ತ್ವಿಶಾ ಅವರ ಪತಿ, ವೃತ್ತಿಯಲ್ಲಿ ವಕೀಲರಾಗಿರುವ ಸಮರ್ಥ್ ಸಿಂಗ್ 10 ದಿನಗಳ ಕಾಲ ತಲೆಮರೆಸಿಕೊಂಡಿದ್ದರು. ಬಳಿಕ ಮೇ 22ರಂದು ಜಬಲ್‌ಪುರದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಪ್ರಸ್ತುತ ಅವರು ಕೂಡ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಈಗ ಅತ್ತೆಯನ್ನು ಕೂಡ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು, ಭೋಪಾಲ್‌ನಲ್ಲಿರುವ ಕಚೇರಿಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ​ಹಸದೇವ್ ಅರಣ್ಯದ ಒಡಲಿಗೆ ಕಲ್ಲಿದ್ದಿಲು ಕೊಳ್ಳಿ: ನಾಲ್ಕೂವರೆ ಲಕ್ಷ ಮರಗಳ ಮಾರಣಹೋಮ

ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 80(2) (ವರದಕ್ಷಿಣೆ ಸಾವು), 85 (ಮಹಿಳೆಗೆ ಕ್ರೌರ್ಯ), 3(5) ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಇತ್ತೀಚೆಗಷ್ಟೇ ಮಧ್ಯಪ್ರದೇಶ ಹೈಕೋರ್ಟ್ ನಿರ್ದೇಶನದ ಮೇರೆಗೆ ದೆಹಲಿಯ ಏಮ್ಸ್ ವೈದ್ಯರ ತಂಡವು ಭೋಪಾಲ್‌ನಲ್ಲಿ ತ್ವಿಶಾ ಅವರ ಎರಡನೇ ಮರಣೋತ್ತರ ಪರೀಕ್ಷೆಯನ್ನು ನಡೆಸಿತ್ತು.

ಹೈಕೋರ್ಟ್ ಆದೇಶದ ಬಳಿಕ ಪ್ರತಿಕ್ರಿಯಿಸಿರುವ ತ್ವಿಶಾ ಶರ್ಮಾ ಅವರ ತಂದೆ ನವನಿಧಿ ಶರ್ಮಾ, “ನಮ್ಮ ನ್ಯಾಯದ ಹೋರಾಟದಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಕೃತಜ್ಞತೆಗಳು. ಇದು ಕೇವಲ ಮೊದಲ ಹೆಜ್ಜೆಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಧನ್ಯವಾದಗಳು. ಸಿಬಿಐ ತನಿಖೆಯ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ. ಹೈಕೋರ್ಟ್ ತೀರ್ಪು ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...