ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರ ವಿರುದ್ಧ ಸಿಬಿಐ ಎಫ್‌ಐಆರ್

Date:

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಸಿಬಿಐ ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂ. ಲಂಚ ಪಡೆಯಲಾಗುತ್ತಿತ್ತು ಎಂಬುದು ಆರೋಪ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಗರಣದಲ್ಲಿ ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್ ಹೆಸರೂ ಕೇಳಿಬಂದಿದ್ದು, ಕೆಲವು ಹಿರಿಯ ಆಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ. ಅವರಲ್ಲಿ ಮಾಜಿ ಯುಜಿಸಿ ಅಧ್ಯಕ್ಷ ಡಿ.ಪಿ. ಸಿಂಗ್ ಮತ್ತು ರಿಯಲ್‌ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ ಕೂಡ ಸೇರಿದ್ದಾರೆ.

ದೇಶಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಈ ಬಹುಕೋಟಿ ಹಗರಣವು ರಾಜಸ್ಥಾನ, ಗುರುಗ್ರಾಮ, ಇಂದೋರ್, ವಾರಂಗಲ್, ವಿಶಾಖಪಟ್ಟಣಂ ಸಹಿತ ಅನೇಕ ರಾಜ್ಯಗಳಲ್ಲಿ ವ್ಯಾಪಿಸಿದೆ. ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ ಈಗ ರಾಷ್ಟ್ರಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

ಛತ್ತೀಸ್‌ಗಢದ ಶ್ರೀರಾಮಪುರ ಸರ್ಕಾರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಗೆ ನಿಯೋಜಿಸಲಾದ ಎನ್‌ಎಂಪಿ ತಪಾಸಣೆ ತಂಡದಲ್ಲಿ ಡಾ. ಮಂಜಪ್ಪ ಅವರಿದ್ದರು. ಈ ಸಂಸ್ಥೆಯ ಪರವಾಗಿ ವರದಿ ನೀಡಲು ತಂಡವು 55 ಲಕ್ಷ ರೂ. ಲಂಚ ಪಡೆದಿತ್ತು. ಮಂಜಪ್ಪ ಅವರು ಈ ಹಣವನ್ನು ಪಡೆಯುವಂತೆ ಬೆಂಗಳೂರಿನ ಸತೀಶ್‌ಗೆ ತಿಳಿಸಿದ್ದರು. ಬೆಂಗಳೂರಿನಲ್ಲಿ ಲಂಚದ ಹಣ ಸ್ವೀಕರಿಸುವ ಸಮಯದಲ್ಲೇ ಸಿಬಿಐ ಆರೋಪಿಗಳನ್ನು ಬಂಧಿಸಿತು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...