ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಪಶ್ಚಿಮ ಬಂಗಾಳ ಸಿಐಡಿ ವಶದಿಂದ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದರು.
ಕಲ್ಕತ್ತಾ ಹೈಕೋರ್ಟ್ ನಿರ್ದೇಶನದಂತೆ ಸಿಬಿಐ ಅಧಿಕಾರಿಗಳ ತಂಡ ಕೊಲ್ಕತ್ತಾದ ಸಿಐಡಿ ಮುಖ್ಯ ಕಚೇರಿ ಭವಾನಿ ಭವನ್‌ಗೆ ಇಂದು ಸಂಜೆ 4 ಗಂಟೆಗೆ ಆಗಮಿಸಿ 6.48ರ ವೇಳೆಗೆ ತಮ್ಮ ವಶಕ್ಕೆ ಪಡೆದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!
ಸಿಐಡಿ ಅಧಿಕಾರಿಗಳು ಸಹ ಶೇಖ್ ಶಹಜಹಾನ್‌ನನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಿದರು. ಸಿಬಿಐ ಶೇಖ್ ಶಹಜಹಾನ್ ವಿರುದ್ಧ ಇತ್ತೀಚಿಗೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿತ್ತು.
ಕಲ್ಕತ್ತಾ ಹೈಕೋರ್ಟ್ ಶಹಜಹಾನ್‌ನನ್ನು ಸಿಬಿಐ ವಶಕ್ಕೆ ನೀಡಬೇಕೆಂದು ಆದೇಶದ ನಂತರ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
