ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ಭಿಲಾಯಿ ಮತ್ತು ರಾಯಪುರದಲ್ಲಿರುವ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಮಹಾದೇವ್ ಆನ್‌ಲೈನ್ ಆ್ಯಪ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಘೇಲ್ ನಿವಾಸದ ಮೇಲೆ ದಾಳಿ ನಡೆದಿದೆ. ಇನ್ನು ಸಿಬಿಐ ತಂಡವು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಾದ ಆನಂದ್ ಛಾಬ್ರಾ, ಅಭಿಷೇಕ್ ಪಲ್ಲವ ಮತ್ತು ಆರಿಫ್ ಶೇಖ್, ಕಾಂಗ್ರೆಸ್ ಭಿಲಾಯಿ ಶಾಸಕ ದೇವೇಂದ್ರ ಯಾದವ್, ಮಾಜಿ ಐಎಎಸ್ ಅಧಿಕಾರಿ ಅನಿಲ್ ತುತೇಜಾ ಮತ್ತು ಇತರ ಅಧಿಕಾರಿಗಳ ನಿವಾಸಗಳ ಮೇಲೂ ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಗೋಡ್ಸೆ ಭಾರತದ ಸುಪುತ್ರ ಎನ್ನಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಭೂಪೇಶ್ ಬಘೇಲ್ ಟೀಕೆ
ಮಾರ್ಚ್ 10ರಂದು ಅಬಕಾರಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಭಿಲಾಯಿಯಲ್ಲಿರುವ ಬಘೇಲ್ ನಿವಾಸದಲ್ಲಿ ಶೋಧ ನಡೆಸಿತ್ತು.
2023ರ ಡಿಸೆಂಬರ್‌ನಲ್ಲಿ ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಮಹಾದೇವ್ ಆ್ಯಪ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಶಿಫಾರಸು ಮಾಡಿದ್ದು, ಪೊಲೀಸರು ಈ ವರ್ಷದ ಜನವರಿಯಲ್ಲಿ ಸಿಬಿಐಗೆ ವರ್ಗಾಯಿಸಿದ್ದಾರೆ.
ಇನ್ನು ತನ್ನ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ ಭೂಪೇಶ್ ಬಘೇಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ. “ಈಗ ಸಿಬಿಐ ಬಂದಿದೆ. ಅಹಮದಾಬಾದ್‌ನಲ್ಲಿ ಏಪ್ರಿಲ್ 8-9ರಂದು ನಡೆಯಲಿರುವ ಎಐಸಿಸಿ ಸಭೆಗೆ ಹಾಜರಾಗಲು ಇಂದು ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ದೆಹಲಿಗೆ ತೆರಳಬೇಕಾಗಿತ್ತು. ಅದಕ್ಕೂ ಮುನ್ನವೇ ಸಿಬಿಐ ರಾಯಪುರ ಮತ್ತು ಭಿಲಾಯಿ ನಿವಾಸಕ್ಕೆ ತಲುಪಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.
अब CBI आई है.
— Bhupesh Baghel (@bhupeshbaghel) March 26, 2025
आगामी 8 और 9 अप्रैल को अहमदाबाद (गुजरात) में होने वाली AICC की बैठक के लिए गठित “ड्राफ़्टिंग कमेटी” की मीटिंग के लिए आज पूर्व मुख्यमंत्री भूपेश बघेल का दिल्ली जाने का कार्यक्रम है.
उससे पूर्व ही CBI रायपुर और भिलाई निवास पहुँच चुकी है.
(कार्यालय-भूपेश बघेल)
ಇನ್ನು ದಾಳಿಯನ್ನು ಮಾಜಿ ಉಪ ಮುಖ್ಯ ಕಾರ್ಯದರ್ಶಿ ಟಿ ಎಸ್ ಸಿಂಗ್‌ದಿಯೊ ಖಂಡಿಸಿದ್ದಾರೆ. “ಈ ದಾಳಿಯು ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡುವ ಪ್ರಯತ್ನ” ಎಂದಿದ್ದಾರೆ.
ಮಹಾದೇವ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಬೇನಾಮಿ ಬ್ಯಾಂಕ್ ಖಾತೆಗಳಿಗೆ ವೆಬ್ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುತ್ತದೆ. ಆ್ಯಪ್ ಬೆಟ್ಟಿಂಗ್ ಹಗರಣವು 6000 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ.
