ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

Date:

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಸಿಒಎಂ) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿಗೆ ನಿವಾಸ ಸೇರಿ, ಸಂಬಂಧಿಸಿದ ಸ್ಥಳಗಳಿಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದೆ. ಹಾಗೆಯೇ ಶನಿವಾರ ಎಫ್‌ಐಆರ್ ದಾಖಲಿಸಿದೆ ಎಂದು ವರದಿಯಾಗಿದೆ.

- Advertisement -

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 2,000 ಕೋಟಿ ರೂ. ನಷ್ಟ ಉಂಟುಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಸಿಬಿಐ ತಂಡವು ಮುಂಬೈನಲ್ಲಿರುವ ಅನಿಲ್ ಅಂಬಾನಿ ನಿವಾಸದಲ್ಲಿ ಬೆಳಗಿನ ಜಾವ ಶೋಧ ನಡೆಸಿದ್ದು, ತಂಡ ಬಂದಾಗ ಅನಿಲ್ ಅಂಬಾನಿ, ಅವರ ಪತ್ನಿ ಮತ್ತು ಅವರ ಮಕ್ಕಳು ಮನೆಯಲ್ಲಿದ್ದರು. ಎಸ್‌ಬಿಐ ದೂರಿನ ನಂತರ ಜೂನ್ 13ರಂದು ಸಂಸ್ಥೆ ಮತ್ತು ಅದರ ಮಾಲೀಕರುಗಳ ಮೇಲೆ ದಾಳಿ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಮೈಸೂರು | ಹಿರಿಯರ ತ್ಯಾಗದಿಂದ ಬ್ಯಾರಿ ಸಮುದಾಯ ಗೌರವದಿಂದ ಬದುಕುತಿದೆ : ಯು ಟಿ ಖಾದರ್

“ಜೂನ್ 24ರಂದು ಬ್ಯಾಂಕ್ ವಂಚನೆಯ ಬಗ್ಗೆ ಆರ್‌ಬಿಐಗೆ ವರದಿ ಮಾಡಿದ್ದು, ಸಿಬಿಐಗೆ ದೂರು ನೀಡುವ ಪ್ರಕ್ರಿಯೆಯಲ್ಲಿದೆ” ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಕಳೆದ ತಿಂಗಳು ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದರು.

ಇನ್ನು ಬ್ಯಾಂಕ್ ಅನಿಲ್ ಅಂಬಾನಿ ವಿರುದ್ಧ ಐಬಿಸಿ ಅಡಿಯಲ್ಲಿ ವೈಯಕ್ತಿಕ ದಿವಾಳಿತನ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಿದೆ. ಆಗಸ್ಟ್ 5ರಂದು ಜಾರಿ ನಿರ್ದೇಶನಾಲಯ (ಇಡಿ) ಸುಮಾರು 10 ಗಂಟೆಗಳ ಕಾಲ ಅಂಬಾನಿಯನ್ನು ಪ್ರಶ್ನಿಸಿದೆ. ಹಾಗೆಯೇ 17,000 ಕೋಟಿ ರೂ.ಗೂ ಹೆಚ್ಚು ಒಳಗೊಂಡ ಬಹು ಬ್ಯಾಂಕ್ ಸಾಲ ವಂಚನೆಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯಲ್ಲಿ ಅನಿಲ್ ಅಂಬಾನಿ ನಿವಾಸ ಇತರೆಡೆ ದಾಳಿ ನಡೆಸಿದೆ.

ಅಂಬಾನಿ ದಾಖಲೆಗಳನ್ನು ಸಲ್ಲಿಸಲು 10 ದಿನಗಳ ಕಾಲಾವಕಾಶ ಕೋರಿದ್ದರು. ಆದರೆ ತನಿಖಾಧಿಕಾರಿಗಳು ಯೆಸ್ ಬ್ಯಾಂಕ್ ನೀಡಿದ ಸಾಲಗಳಲ್ಲಿನ ಅಕ್ರಮಗಳು ಮತ್ತು ಶೆಲ್ ಕಂಪನಿಗಳ ಮೂಲಕ ಹಣವನ್ನು ಬೇರೆಡೆಗೆ ವರ್ಗಾಯಿಸುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...