ದಾಭೋಲ್ಕರ್ ಹತ್ಯೆ ಪ್ರಕರಣ: ಅಂತಿಮ ವರದಿಯಲ್ಲಿ ಮೂವರು ಆರೋಪಿಗಳ ಬಿಡುಗಡೆಗೆ ಸಿಬಿಐ ಶಿಫಾರಸ್ಸು

Date:

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಬುಧವಾರ ಪುಣೆಯ ವಿಶೇಷ ನ್ಯಾಯಾಲಯಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ್ದು, ಮೂವರು ಆರೋಪಿಗಳಾದ ಅಮೋಲ್ ಕಾಳೆ, ರಾಕೇಶ್ ಬಂಗೇರಾ ಮತ್ತು ಅಮಿತ್ ದಿಗ್ವೇಕರ್ ವಿರುದ್ಧ ಯಾವುದೇ “ವಿಚಾರಣೆಗೆ ಒಳಪಡುವ ಸಾಕ್ಷ್ಯ” ಸಿಗಲಿಲ್ಲ ಎಂಬ ಕಾರಣ ನೀಡಿ ಬಿಡುಗಡೆ ಮಾಡಲು ಶಿಫಾರಸು ಮಾಡಿದೆ.

- Advertisement -

ಹಿರಿಯ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20ರಂದು ಪುಣೆಯಲ್ಲಿ ಬೆಳಗಿನ ನಡಿಗೆಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ತನಿಖಾ ಸಂಸ್ಥೆಯು ಸೆಪ್ಟೆಂಬರ್ 2018 ರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿತ್ತು. ಆದರೆ, ಅವರನ್ನು ಬಂಧಿಸಿದ 90 ದಿನಗಳಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಲು ವಿಫಲವಾದ ಮೂರು ತಿಂಗಳ ನಂತರ ಪುಣೆ ನ್ಯಾಯಾಲಯವು ಅವರಿಗೆ ಡೀಫಾಲ್ಟ್ ಜಾಮೀನು ಮಂಜೂರುಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಮೂವರು ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಫೆಬ್ರವರಿ 20, 2015 ರಂದು ಕೊಲ್ಹಾಪುರದಲ್ಲಿ ಹಿರಿಯ ಕಮ್ಯುನಿಸ್ಟ್ ನಾಯಕ ಗೋವಿಂದ್ ಪನ್ಸಾರೆ ಹತ್ಯೆಯಲ್ಲಿ ಕಾಳೆ ಮತ್ತು ದಿಗ್ವೇಕರ್ ಆರೋಪಿಗಳಾಗಿದ್ದಾರೆ. ಮೂವರು ಆರೋಪಿಗಳು ಸದ್ಯ ಬೆಂಗಳೂರು ಜೈಲಿನಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶೇ. 40 ಹಾಲಿ ಸಂಸದರಿಗೆ ಕ್ರಿಮಿನಲ್ ಆರೋಪ, ಶೇ. 7 ಮಂದಿ ಶತ ಕೋಟ್ಯಾಧೀಶರು: ಎಡಿಆರ್ ವರದಿ

ಸಿಬಿಐನ ಡೆಪ್ಯುಟಿ ಎಸ್ಪಿ ವಿಕಾಸ್ ಕುಮಾರ್ ಮೀನಾ ಅವರ ಸಹಿ ಮತ್ತು ಡಿಐಜಿ ಸದಾನಂದ ದಾಟೆ ಅವರು ಪ್ರತಿ ಸಹಿ ಮಾಡಿದ ಅಂತಿಮ ವರದಿಯು ಪ್ರಕರಣದ ಮುಂದಿನ ತನಿಖೆಯನ್ನು ಮುಕ್ತಾಯಗೊಳಿಸಲು ತನಿಖಾ ಸಂಸ್ಥೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದೆ. ಹೊಸ ಸಾಕ್ಷ್ಯಾಧಾರಗಳು ಬೆಳಕಿಗೆ ಬಂದರೆ, ನ್ಯಾಯಾಲಯದ ಅನುಮತಿಯೊಂದಿಗೆ ಸಿಬಿಐ ಹೆಚ್ಚಿನ ತನಿಖೆ ನಡೆಸುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ತಲೆಮರೆಸಿಕೊಂಡಿರುವ ಆರೋಪಿಗಳಾದ ಸಾರಂಗ್‌ ಅಕೋಲ್ಕರ್‌ ಮತ್ತು ವಿನಯ್‌ ಪವಾರ್‌ ಅವರ ವಿಚಾರಣೆಯು ಈ ಪ್ರಕರಣದ ಹಿಂದಿನ ಸಂಚನ್ನು ಅನಾವರಣಗೊಳಿಸಲು ಅಗತ್ಯವಾಗಿದೆ, ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ವರದಿ ಹೇಳಿದೆ. ಈ ತಲೆಮರೆಸಿಕೊಂಡಿರುವ ಇಬ್ಬರನ್ನೂ ದಾಭೋಲ್ಕರ್‌ ಅವರನ್ನು ಹತ್ಯೆಗೈದ ಶೂಟರ್‌ಗಳು ಎಂದು ಗುರುತಿಸಲಾಗಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಸೂರ್ಯವಂಶಿ ಕೂಡ ಸಿಬಿಐ ಪರವಾಗಿ ಲಿಖಿತ ಹೇಳಿಕೆ ಸಲ್ಲಿಸಿದರು. ಪ್ರಮುಖ ಆರೋಪಿ ವೀರೇಂದ್ರಸಿಂಹ ತಾವ್ಡೆ, ಆರೋಪಿ ಶೂಟರ್‌ಗಳಾದ ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯಗಳನ್ನು ಮುಕ್ತಾಯಗೊಳಿಸಿರುವ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿದರು.

ವಿಶೇಷ ನ್ಯಾಯಾಧೀಶರಾದ ಪಿಪಿ ಜಾಧವ್ ಅವರು ಮುಂದಿನ ವಿಚಾರಣೆಯ ದಿನಾಂಕವಾದ ಸೆಪ್ಟೆಂಬರ್ 18 ರೊಳಗೆ ಸಿಬಿಐ ಅಂತಿಮ ವರದಿಯ ಬಗ್ಗೆ ತಮ್ಮ ಲಿಖಿತ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಪ್ರತಿವಾದಿ ವಕೀಲರಿಗೆ ಸೂಚಿಸಿದರು.

ದಾಭೋಲ್ಕರ್ ಪ್ರಕರಣದಲ್ಲಿ ಭಾಗಿಯಾಗಿರುವ ಕಾಳೆ, ಬಂಗೇರ ಮತ್ತು ದಿಗ್ವೇಕರ್ ಸೆಪ್ಟೆಂಬರ್ 5, 2017 ರಂದು ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದಾರೆ. ಮಹಾರಾಷ್ಟ್ರ ಎಟಿಎಸ್ ನಾಲಾಸೋಪಾರ ಶಸ್ತ್ರಾಸ್ತ್ರ ಸಾಗಣೆ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...