ಸಿಬಿಎಸ್‌ಇ: ಜುಲೈ 1ರಿಂದ 9ನೇ ತರಗತಿಗೆ ಮೂರು ಭಾಷೆಗಳ ಅಧ್ಯಯನ ಕಡ್ಡಾಯ

Date:

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಹೊಸ ಸುತ್ತೋಲೆಯೊಂದನ್ನು ಹೊರಡಿಸಿದ್ದು, 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಈ ಹೊಸ ನಿಯಮವು 2026ರ ಜುಲೈ 1ರಿಂದ ಜಾರಿಗೆ ಬರಲಿದೆ.

- Advertisement -

ಆದರೆ, 10ನೇ ತರಗತಿಯಲ್ಲಿ ಮೂರನೇ ಭಾಷೆಗೆ (R3) ಯಾವುದೇ ಬೋರ್ಡ್ ಪರೀಕ್ಷೆ ಇರುವುದಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ. “ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಹೆಚ್ಚು ಗಮನಹರಿಸುವಂತೆ ಮಾಡಲು ಹಾಗೂ ಅವರ ಮೇಲಿನ ಅನಗತ್ಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ 10ನೇ ತರಗತಿ ಮಟ್ಟದಲ್ಲಿ ‘ಆರ್-3’ (R3) ಭಾಷೆಗೆ ಯಾವುದೇ ಬೋರ್ಡ್ ಪರೀಕ್ಷೆ ನಡೆಸಲಾಗುವುದಿಲ್ಲ” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಅಸಹಿಷ್ಣುಗಳ ಬಾಯಿ ಮುಚ್ಚಿಸಿದ ಕಲಾಭಿವ್ಯಕ್ತಿ: ಝಾರ್ಖಂಡ್‌ನಲ್ಲಿ ಪ್ರೇಕ್ಷಕರ ಮನ ಸೂರೆಗೊಂಡ ‘ಸೆರಂಗ್’ ಸಿನೆಮಾ

ಮೇ 15ರಂದು ಮಂಡಳಿ ಹೊರಡಿಸಿರುವ ಅಧಿಕೃತ ಸುತ್ತೋಲೆಯ ಪ್ರಕಾರ, ವಿದ್ಯಾರ್ಥಿಗಳು ಕಲಿಯುವ ಮೂರು ಭಾಷೆಗಳ ಪೈಕಿ ಕನಿಷ್ಠ ಎರಡು ಭಾಷೆಗಳು ಮೂಲ ಭಾರತೀಯ ಭಾಷೆಗಳಾಗಿರಬೇಕು ಎಂದು ಘೋಷಿಸಲಾಗಿದೆ. ಈ ನಿರ್ಧಾರವನ್ನು ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಹಾಗೂ ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿಗೆ (NCF-SE 2023) ಅನುಗುಣವಾಗಿ ಕೈಗೊಳ್ಳಲಾಗಿದೆ.

“2026ರ ಜುಲೈ 1ರಿಂದ ಅನ್ವಯವಾಗುವಂತೆ, 9ನೇ ತರಗತಿಗೆ ಮೂರು ಭಾಷೆಗಳ (R1, R2, R3) ಅಧ್ಯಯನ ಕಡ್ಡಾಯವಾಗಿರಲಿದ್ದು, ಇದರಲ್ಲಿ ಕನಿಷ್ಠ ಎರಡು ಭಾಷೆಗಳು ಮೂಲ ಭಾರತೀಯ ಭಾಷೆಗಳಾಗಿರಬೇಕು” ಎಂದು ಸಿಬಿಎಸ್‌ಇ ತನ್ನ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...