ಎನ್‌ಆರ್‌ಸಿ ಜಾರಿಗೆ ಪಟ್ಟು: ಮಣಿಪುರದಲ್ಲಿ ಜನಗಣತಿ ಪ್ರಕ್ರಿಯೆ ಮುಂದೂಡಿಕೆ

Date:

‘ರಾಷ್ಟ್ರೀಯ ಪೌರತ್ವ ನೋಂದಣಿ’ (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಮೊದಲು ನಡೆಸಬೇಕು ಎಂಬ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಮಣಿಪುರದಲ್ಲಿ ಮಂಗಳವಾರದಿಂದ (ಸೆಪ್ಟೆಂಬರ್ 1) ಆರಂಭವಾಗಬೇಕಿದ್ದ ಜನಗಣತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯವು ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಡಿಸುವ ನಿರೀಕ್ಷೆಯಿದೆ.

- Advertisement -

ಈ ನಡುವೆ, ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಅವರ ಸೂಚನೆಯ ಮೇರೆಗೆ ರಾಜ್ಯದಲ್ಲಿ ಜನಗಣತಿಯನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ ಎಂದು ಮಣಿಪುರ ಹೈಕೋರ್ಟ್ ಕೂಡ ಗಮನಿಸಿದೆ. “ಮನೆಗಳ ಪಟ್ಟಿಯ (ಹೌಸ್‌ಲಿಸ್ಟಿಂಗ್) ಜನಗಣತಿ ಹಂತವನ್ನು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಸಲಾಗುವುದು ಎಂಬ ಜನವರಿ 7ರ ಅಧಿಸೂಚನೆಗೆ ತಿದ್ದುಪಡಿ ತಂದು ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಲಿದೆ,” ಎಂದು ಡೆಪ್ಯುಟಿ ಸಾಲಿಸಿಟರ್ ಜನರಲ್ ಕೆ. ಸಮರ್ಜಿತ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಮಾಹಿತಿ ಆಧರಿಸಿ ಮುಖ್ಯ ನ್ಯಾಯಮೂರ್ತಿ ಎಂ. ಸುಂದರ್ ಮತ್ತು ನ್ಯಾಯಮೂರ್ತಿ ಎ. ಗುಣೇಶ್ವರ್ ಶರ್ಮಾ ಅವರಿದ್ದ ಪೀಠವು, ಮುಂದಿನ ವಿಚಾರಣೆ ನಡೆಯಲಿರುವ ಅಕ್ಟೋಬರ್ 12 ರವರೆಗೆ ಜನಗಣತಿ ಪ್ರಕ್ರಿಯೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ದೇಶಾದ್ಯಂತ ಆರು ವರ್ಷಗಳ ವಿಳಂಬದ ನಂತರ ಜನಗಣತಿ ನಡೆಯುತ್ತಿದ್ದರೆ, ಮಣಿಪುರದಲ್ಲಿ ಜನಗಣತಿ ಮತ್ತಷ್ಟು ವಿಳಂಬವಾಗಲಿದ್ದು, 2011ರ ಬಳಿಕ ಇದೇ ಮೊದಲ ಬಾರಿಗೆ ದಶಕದ ಗಣತಿಯಲ್ಲಿ ಅತಿ ದೊಡ್ಡ ಅಂತರ ಸೃಷ್ಟಿಯಾಗಿದೆ. ಜನಗಣತಿಗೂ ಮುನ್ನ ಎನ್‌ಆರ್‌ಸಿ ಜಾರಿಗೊಳಿಸುವಂತೆ ಆಗ್ರಹಿಸಿ ಇಂಫಾಲ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಜನಗಣತಿ ತರಬೇತಿ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದ್ದ ಪ್ರತಿಭಟನಾಕಾರರು ಬಂದ್ ಕೂಡ ಆಚರಿಸಿದ್ದರು.

‘ಮೂಲ ಭಾರತೀಯ ನಾಗರಿಕರನ್ನು’ ಗುರುತಿಸಲು ಮತ್ತು ಪ್ರಸ್ತುತ ನಡೆಯುತ್ತಿರುವ ಜನಾಂಗೀಯ ಸಂಘರ್ಷದಿಂದಾದ ವಲಸೆಯ ಹಿನ್ನೆಲೆಯಲ್ಲಿ ಜನಗಣತಿಗಿಂತ ಮೊದಲು ಎನ್‌ಆರ್‌ಸಿ ನಡೆಸುವುದು ಅತ್ಯಗತ್ಯ ಎಂದು ಒತ್ತಾಯಿಸಿ ನಾಗರಿಕ ಸಮಾಜದ ಪ್ರತಿನಿಧಿಗಳ ನಿಯೋಗವೊಂದು ಕಳೆದ ವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು, ಗೃಹ ಸಚಿವಾಲಯದ ಅಧಿಕಾರಿಗಳು ಹಾಗೂ ನಿತಿನ್ ನವೀನ್ ಅವರನ್ನು ಭೇಟಿಯಾಗಿತ್ತು.

ಬಹುಸಂಖ್ಯಾತ ಮೈತೇಯಿ ಮತ್ತು ನಾಗಾ ಸಮುದಾಯದ ಒಂದು ವರ್ಗವು ಎನ್‌ಆರ್‌ಸಿ ಜಾರಿಗೆ ಪಟ್ಟು ಹಿಡಿದಿದೆ.ಮಣಿಪುರದಲ್ಲಿ 2023ರ ಮೇ ತಿಂಗಳಿನಿಂದ ಮೈತೇಯಿ ಮತ್ತು ಕುಕಿಗಳ ನಡುವೆ ಹಾಗೂ ಈ ವರ್ಷದ ಫೆಬ್ರವರಿಯಿಂದ ಕುಕಿ ಮತ್ತು ನಾಗಾಗಳ ನಡುವೆ ಜನಾಂಗೀಯ ಸಂಘರ್ಷ ಮುಂದುವರಿದಿದೆ. ಆರ್‌ಟಿಐ ಮಾಹಿತಿಯ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ 43,000ಕ್ಕೂ ಹೆಚ್ಚು ನಿರಾಶ್ರಿತರು ಪರಿಹಾರ ಶಿಬಿರಗಳಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...