ಬಿಜೆಪಿಗೆ ಸೇರದಿದ್ದರೆ ಕ್ರಮ ಎನ್ನುತ್ತಿರುವ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ ಆರೋಪ

Date:

ಬಿಜೆಪಿ ಸೇರಿ ಅಥವಾ ಕ್ರಮಕ್ಕೆ ಸಿದ್ಧರಾಗಿ ಎಂದು ಕೇಂದ್ರಿಯಾ ತನಿಖಾ ಸಂಸ್ಥೆಗಳು ನಮ್ಮ ಟಿಎಂಸಿ ನಾಯಕರನ್ನು ಬೆದರಿಸುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಇ.ಡಿ, ಸಿಬಿಐ, ಎನ್‌ಐಎ ಹಾಗೂ ಐಟಿ ಇಲಾಖೆಗಳು ಬಿಜೆಪಿಯ ಶಸ್ತ್ರಗಳಂತೆ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಎನ್‌ಐಎ,ಇ.ಡಿ ಹಾಗೂ ಸಿಬಿಐ ರೀತಿಯ ತನಿಖಾ ಸಂಸ್ಥೆಗಳು ಟಿಎಂಸಿ ನಾಯಕರನ್ನು ಬೆದರಿಸುತ್ತಿವೆ. ಅವರು ಪೂರ್ವ ಮಾಹಿತಿಯಿಲ್ಲದೆ ದಾಳಿಗಳನ್ನು ನಡೆಸಿ ಮನೆಗಳಿಗೆ ನುಗ್ಗುತ್ತಿದ್ದಾರೆ. ರಾತ್ರಿ ನುಸುಕಿನಲ್ಲಿ ಎಲ್ಲರು ಮಲಗಿದ್ದಾಗ ಯಾರಾದರೂ ಮನೆಗೆ ಪ್ರವೇಶಿಸಿದರೆ ಮಹಿಳೆ ಏನು ಮಾಡಬೇಕು” ಎಂದು ಮಮತಾ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಜನರು ಯಾವುದೇ ಪ್ರಚೋದನೆಗೆ ಒಳಗಾಗಬಾರದು.ಬಿಜೆಪಿಯು ರಾಮ ನವಮಿಯ ಸಂದರ್ಭದಲ್ಲಿ ಕೋಮು ಭಾವನೆಗಳನ್ನು ಕೆರಳಿಸುತ್ತಿದೆ ಎಂದು ಮಮತಾ ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನ್‌ರೇಗ ಹಾಗೂ ಪಿ ಎಂ ಆವಾಸ್‌ ಯೋಜನೆಗೆ ಪಶ್ಚಿಮ ಬಂಗಾಳಕ್ಕೆ ಹಣ ನೀಡದೆ ವಂಚಿಸಿದೆ. ರಾಜ್ಯ ಸರ್ಕಾರ ಬಡವರಿಗೆ ಮನೆ ಕಟ್ಟಲು 1.2 ಲಕ್ಷ ರೂ. ನೀಡುತ್ತಿದೆ ಎಂದು ಮಮತಾ ತಿಳಿಸಿದರು.

“ಆದರೆ ಚುನಾವಣಾ ಆಯೋಗ ಹಣ ಒದಗಿಸಲು ನಮಗೆ ಅನುಮತಿ ನೀಡಿಲ್ಲ. ಆದರೆ ಚುನಾವಣೆ ನಂತರ ನಾವು ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ” ಎಂದುಮಮತಾ ಬ್ಯಾನರ್ಜಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...

ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ನೀತಿ ಜಾರಿ: ಆದೇಶ ಪಾಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ...

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...