ಕೇಂದ್ರ ಚುನಾವಣಾ ಆಯೋಗದಿಂದ ಎಲ್ಲ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಎರಡು ದಿನಗಳ ಸಮ್ಮೇಳನ

Date:

Advertisements

ಕೇಂದ್ರ ಚುನಾವಣಾ ಆಯೋಗದಿಂದ ಎಲ್ಲ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.

ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲ ರಾಜ್ಯ / ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ. ಅಲ್ಲದೆ ಎರಡು ದಿನಗಳ ಈ ಸಮ್ಮೇಳನವು ಪರಸ್ಪರರ ಅನುಭವಗಳಿಂದ ಬುದ್ದಿಮತ್ತೆ ಮತ್ತು ಪರಸ್ಪರ ಕಲಿಕೆಗೆ ರಾಜ್ಯಗಳು / ಕೇಂದ್ರಾಡಳಿತ ಚುನಾವಣಾ ಅಧಿಕಾರಿಗಳಿಗೆ ಒಂದು ವೇದಿಕೆಯನ್ನು ನೀಡುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಭದ್ರ ಸರ್ಕಾರವನ್ನು ಅಭದ್ರಗೊಳಿಸುತ್ತಿರುವ ಕಾಂಗ್ರೆಸ್ಸಿಗರು

ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.

ಎರಡನೇ ದಿನ, ರಾಜ್ಯಗಳು/ಕೇಂದ್ರಾಡಳಿತದ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು ಕೇಂದ್ರ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X