ಆಪರೇಷನ್ ಸಿಂಧೂರ್‌ ಚರ್ಚೆಗೆ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಪಕ್ಷಗಳು ಸಜ್ಜು

Date:

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂಲಕ ಕದನ ವಿರಾಮ ಘೋಷಣೆ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನಿಸಲು ಇಂಡಿಯಾ ಬಣ ಸಜ್ಜಾಗಿದೆ.

ಸಂಸತ್ತಿನ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಆಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಸಬೇಕೆಂಬ ವಿರೋಧ ಪಕ್ಷಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

- Advertisement -

ಆದರೆ ಚುನಾವಣೆಗೆ ಸಜ್ಜಾಗುತ್ತಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆ ನಡೆಸಬೇಕೆಂಬ ಆಗ್ರಹವೂ ಬಂದಿತ್ತು. ಈ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜುಲೈ 21ರಿಂದ ಪ್ರಾರಂಭವಾಗುವ ಮಳೆಗಾಲದ ಅಧಿವೇಶನ ಆಗಸ್ಟ್ 21ರಂದು ಮುಕ್ತಾಯಗೊಳ್ಳಲಿದೆ.

ವಿರೋಧ ಪಕ್ಷಗಳ ಇಂಡಿಯಾ ಬಣವು ತನ್ನ 24 ಘಟಕಗಳ ವರ್ಚುವಲ್ ಸಭೆಯನ್ನು ಶನಿವಾರ ನಡೆಸಿತು. ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂಲಕ ಕದನ ವಿರಾಮ ಘೋಷಣೆ, ಭಾರತದ ವಿದೇಶಾಂಗ ನೀತಿ ಮತ್ತು ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನೆಗಳನ್ನು ಎತ್ತಲು ಸಭೆ ನಿರ್ಧರಿಸಿದೆ.

ಇದನ್ನೂ ಓದಿರಿ: ಶಾಂತಿಯುತ ಪ್ರತಿಭಟನೆ ಮಾಡಿದರೂ ಜೈಲಿಗೆ ಹಾಕುವ ಕಾಯ್ದೆ ತರುತ್ತಿದೆ ಬಿಜೆಪಿ!

ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್‌ನ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಭಾಗವಹಿಸಿದ್ದರು. ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್; ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ; ಶಿವಸೇನೆ (ಯುಬಿಟಿ)ಯ ಉದ್ಧವ್ ಠಾಕ್ರೆ, ಸಂಜಯ್ ರಾವತ್; ಎನ್‌ಸಿಪಿ (ಎಸ್‌ಪಿ)ಯ ಶರದ್ ಪವಾರ್, ಜಯಂತ್ ಪಾಟೀಲ್; ನ್ಯಾಷನಲ್ ಕಾನ್ಫರೆನ್ಸ್‌ನ ಓಮರ್ ಅಬ್ದುಲ್ಲಾ; ಜೆಎಂಎಂನ ಹೇಮಂತ್ ಸೊರೆನ್; ಆರ್‌ಜೆಡಿಯ ತೇಜಸ್ವಿ ಯಾದವ್; ಡಿಎಂಕೆಯ ತಿರುಚಿ ಎನ್ ಶಿವ, ಸಿಪಿಐ, ಸಿಪಿಐ (ಎಂ) ಮತ್ತು ಸಿಪಿಐ (ಎಂಎಲ್) ಲಿಬರೇಶನ್ ಪರ ಕ್ರಮವಾಗಿ ಡಿ ರಾಜಾ, ಎಂ.ಎ. ಬೇಬಿ ಮತ್ತು ದೀಪಂಕರ್ ಭಟ್ಟಾಚಾರ್ಯ ಪ್ರತಿನಿಧಿಸಿದ್ದರು. ಕೇರಳ ಕಾಂಗ್ರೆಸ್ (ಎಂ) ಸಂಸದ ಜೋಸ್ ಕೆ.ಮಣಿ, ಆರ್‌ಎಸ್‌ಪಿಯ ಎನ್.ಕೆ. ಪ್ರೇಮಚಂದ್ರನ್, ವಿಡುತಲೈ ಚಿರುತೈಗಲ್ ಕಚ್ಚಿಯ ತಿರುಮಾವಲವನ್ ಮತ್ತು ಐಯುಎಂಎಲ್‌ನ ಕೆ.ಎಂ. ಖಾದರ್ ಮೊಹಿದೀನ್ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿರಿ: ಜಾರಿ ನಿರ್ದೇಶನಾಲಯ ವಿರುದ್ಧ ಮದ್ರಾಸ್ ಹೈಕೋರ್ಟ್ ತರಾಟೆ

ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ಕುದುರೆವಾಲಾ ಸಾವನ್ನಪ್ಪಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಭಯೋತ್ಪಾದನಾ ಕೃತ್ಯದ ಬಳಿಕ ಭಾರತ ಸರ್ಕಾರವು ಆಪರೇಷನ್ ಸಿಂಧೂರ್ ನಡೆಸಿತ್ತು. ಭಾರತ- ಪಾಕಿಸ್ತಾನ ನಡುವಿನ ಕದನದಲ್ಲಿ ಟ್ರಂಪ್‌ ಮಧ್ಯ ಪ್ರವೇಶ, ಪಹಲ್ಗಾಮ್ ದಾಳಿ ಮೊದಲಾದವುಗಳ ಸಂಬಂಧ ವಿಶೇಷ ಅಧಿವೇಶನ ಕರೆಯುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...