ಸಿಜೆಪಿ ಜೊತೆ ಕೇಂದ್ರ ಸರ್ಕಾರ ಮಾತುಕತೆ; ನಡ್ಡಾ ಭೇಟಿಗೆ ತೆರಳಲಿದ್ದಾರೆ ಇಬ್ಬರು ಕಾಕ್ರೋಚ್‌ಗಳು

Date:

ಪರೀಕ್ಷಾ ಅಕ್ರಮದ ವಿರುದ್ಧ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆ ಇಂದು (ಸೋಮವಾರ) ನಿರ್ಣಾಯಕ ಹಂತಕ್ಕೆ ತಲುಪಿದೆ. ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿ ಯುವಜನರು ಸಂಸತ್ ಚಲೋ ಮೆರವಣಿಗೆ ನಡೆಯುತ್ತಿವೆ ನಡುವೆಯೇ, ಸಿಜೆಪಿಯೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸರ್ಕಾರದಿಂದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾಯ ಮಾತುಕತೆಗೆ ಬರಲಿದ್ದು, ಅವರೊಂದಿಗೆ ಸಿಜೆಪಿ ವಕ್ತಾರರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಸಭೆ ನಡೆಸಲಿದ್ದಾರೆ ಎಂದು ಸಿಜೆಪಿ ತಿಳಿಸಿದೆ.

- Advertisement -

ಸೋಮವಾರ ಬೆಳಿಗ್ಗೆ ಸರ್ಕಾರವು ಮಾತುಕತೆಗೆ ಸಿದ್ಧವಿರುವ ಸಂದೇಶವನ್ನು ದೆಹಲಿ ಪೊಲೀಸರ ಮೂಲಕ ಸಿಜೆಪಿಗೆ ತಲುಪಿಸಿತ್ತು. ಈ ಹಿನ್ನೆಲೆಯಲ್ಲಿ ಸೌರವ್ ದಾಸ್ ಅವರು ನವದೆಹಲಿ ವಿಭಾಗದ ಡಿಸಿಪಿ ಸಚಿನ್ ಶರ್ಮಾ ಅವರನ್ನು ಭೇಟಿ ಮಾಡಿದ ಬಳಿಕ, ತಾವು ಮತ್ತು ಆಶುತೋಷ್ ರಂಕಾ ಇಬ್ಬರೂ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲು ತೆರಳುತ್ತಿರುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಸರ್ಕಾರ ಇಂದು ಬೆಳಿಗ್ಗೆ ಮಾತುಕತೆಗೆ ಮುಂದಾಗಿದೆ. ನಮ್ಮ ಬೇಡಿಕೆಗಳು ಸ್ಪಷ್ಟವಾಗಿವೆ. ದೇಶದ ಯುವಜನರು ದೊಡ್ಡ ಸಂಖ್ಯೆಯಲ್ಲಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ನಾವು ಗೆಲ್ಲುತ್ತೇವೆ” ಎಂದು ಸೌರವ್ ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಆಶುತೋಷ್ ರಂಕಾ ಅವರು, “ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರೂ ಹಲವು ಗಂಟೆಗಳ ಕಾಲ ಯಾವುದೇ ಪ್ರಗತಿ ಕಾಣಿಸಲಿಲ್ಲ. ಮಾತುಕತೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆಯೇ” ಎಂದು ಪ್ರಶ್ನಿಸಿದ್ದರು.

ಮೂಲಗಳ ಪ್ರಕಾರ, ಸಿಜೆಪಿ ಮೊದಲಿನಿಂದಲೂ ಕೇಂದ್ರ ಸಚಿವ ಸಂಪುಟದ ಹಿರಿಯ ಸಚಿವರೊಂದಿಗೆ ನೇರ ಮಾತುಕತೆಗೆ ಒತ್ತಾಯಿಸಿತ್ತು. ಯಾವ ಸಚಿವರೊಂದಿಗೆ ಚರ್ಚೆಗೆ ಸಿದ್ಧವಿದೆ ಎಂಬ ಪಟ್ಟಿಯನ್ನೂ ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ಆ ಪ್ರಸ್ತಾವವನ್ನು ಸರ್ಕಾರ ಒಪ್ಪಿರಲಿಲ್ಲ. ಬದಲಾಗಿ ಜಿಲ್ಲಾಧಿಕಾರಿ, ಕೇಂದ್ರ ಸರ್ಕಾರದ ಕಾರ್ಯದರ್ಶಿ ಅಥವಾ ರಾಜ್ಯ ಸಚಿವರೊಂದಿಗೆ ಸಭೆ ನಡೆಸುವ ಪ್ರಸ್ತಾವವನ್ನು ಮುಂದಿಟ್ಟಿತು. ಇದನ್ನು ಸಿಜೆಪಿ ನಿರಾಕರಿಸಿತ್ತು. ಇದೀಗ, ಜೆ.ಪಿ ನಡ್ಡಾರನ್ನು ಮಾತುಕತೆಗೆ ಕಳಿಸಲು ಸರ್ಕಾರ ನಿರ್ಧರಿಸಿದೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...