ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅಧಿಸೂಚನೆ ಹೊರಡಿಸಿದ ಕೇಂದ್ರ

Date:

ಪ್ರಧಾನ ಮಂತ್ರಿ ಕಾರ್ಯಾಲಯ(ಪಿಎಂಒ) 2019ರ ಪೌರತ್ವ ತಿದ್ದುಪಡಿ ಕಾಯ್ದೆವನ್ನು(ಸಿಎಎ) ಇಂದು ಅಧಿಸೂಚನೆ ಹೊರಡಿಸಿದ್ದು,ಕಾಯ್ದೆಯು ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ತಿಳಿಸಿದೆ.

“ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನವನ್ನು ಘೋಷಿಸಿದೆ.ಇದು 2019ರ ಬಿಜೆಪಿ ಪ್ರಣಾಳಿಕೆಯ ಅವಿಭಾಜ್ಯ ಅಂಗವಾಗಿತ್ತು. ಇದು ಭಾರತದಲ್ಲಿ ಶೋಷಣೆಗೆ ಒಳಗಾದವರಿಗೆ ಸುಗಮ ದಾರಿ ಮಾಡಿಕೊಡುತ್ತದೆ” ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಅಧಿಸೂಚನೆಯನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಶೀಘ್ರದಲ್ಲೇ ಹೊರಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಯ್ದೆಯು 2019ರ ಡಿಸೆಂಬರ್ 9 ರಂದು ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಡಿಸೆಂಬರ್‌ 11 ರಂದು ಅಂಗೀಕಾರಗೊಂಡಿತ್ತು. ಕಾಯ್ದೆ ಜಾರಿಗೆ 2019ರ ಡಿಸೆಂಬರ್ 12ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

1955ರ ಪೌರತ್ವ ಕಾಯ್ದೆಯನ್ನು ಮಾರ್ಪಡಿಸಲಾಗಿದ್ದು, ಅಫ್ಘಾನ್‌, ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ದಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಪೌರತ್ವ ಪಡೆಯಲು ದಾರಿ ಮಾಡಿಕೊಡುತ್ತದೆ. ವಿಶೇಷವಾಗಿ ಹಿಂದೂ, ಸಿರ್ಖ, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರು 2014 ಡಿಸೆಂಬರ್‌ 31ರೊಳಗೆ ದಾರ್ಮಿಕ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಆಗಮಿಸಿದವರು ಪೌರತ್ವ ಪಡೆಯಲು ಅನುಕೂಲ ಮಾಡಿಕೊಡುತ್ತದೆ.

ಆದಾಗ್ಯೂ, ಮುಸ್ಲಿಮ್‌ ಸಮುದಾಯವನ್ನು ಹೊರಗಿಟ್ಟು ಕಾಯ್ದೆಯನ್ನು ಅಂಗೀಕರಿಸಿದ ನಂತರ ವಿವಾದ ಉಂಟಾಗಿ ಭಾರತದಾದ್ಯಂತ ಪ್ರತಿಭಟನೆಗಳು ಜರುಗಿದವು. ಜಾತ್ಯತೀತ ದೇಶದಲ್ಲಿ ಒಂದು ಸಮುದಾಯವನ್ನು ಹೊರಗಿಟ್ಟ ಕಾರಣ ಆಕ್ರೋಶ ವ್ಯಕ್ತವಾಯಿತು. ಗಮನಾರ್ಹವಾಗಿ, ಧರ್ಮವನ್ನು ಬಳಸಿ ಜಾರಿಗೊಳಿಸಿದ ಮೊದಲ ಕಾಯ್ದೆಯ ಉದಾಹರಣೆ ಇದಾಗಿದೆ.

ಅಸ್ಸಾಂ ಒಳಗೊಂಡ ಕೆಲವು ರಾಜ್ಯಗಳಲ್ಲಿ ವಲಸಿಗ ಅಲ್ಪಸಂಖ್ಯಾತರ ಬಗ್ಗೆ ಕಾಯ್ದೆಯು ಆತಂಕ ಸೃಷ್ಟಿ ಮಾಡಿರುವುದು ಸೇರಿದಂತೆ ಹಲವು ವಿವಾದಿತ ಅಂಶಗಳ ಬಗ್ಗೆ ವಿಪಕ್ಷ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವಡ್ ಯಾತ್ರೆ ವಿವಾದ | ಸುಪ್ರೀಂ ಕೋರ್ಟ್ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಕಾವಡ್ ಯಾತ್ರೆಯ ಮಾರ್ಗದಲ್ಲಿರುವ ತಿನಿಸುಗಳ ಸ್ಟಾಲ್‌ಗಳ ಮಾಲೀಕರು ಸ್ಟಾಲ್‌ನಲ್ಲಿ ತಮ್ಮ ಹೆಸರನ್ನು...

ಉಮರ್ ಖಲೀದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ದೆಹಲಿ ಗಲಭೆಗಳ ಪಿತೂರಿ ಪ್ರಕರಣಗಳ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...