ಯುವಜನರು ಉದ್ಯೋಗ ಕಳೆದುಕೊಳ್ಳಲು ಕೇಂದ್ರದ ನೀತಿಗಳೇ ಕಾರಣ: ಜಾರ್ಖಂಡ್‌ ಸಿಎಂ ಸೊರೇನ್

Date:

“ಯುವಜನರ ಭವಿಷ್ಯದ ಬಗ್ಗೆ ತಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ಮತ್ತು ಉದ್ಯೋಗ ನೀತಿಗಳಿಂದಾಗಿ ಲಕ್ಷಾಂತರ ಯುವಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳು ಮುಚ್ಚುತ್ತಿರುವುದೇ ಉದ್ಯೋಗ ನಷ್ಟಕ್ಕೆ ಮೂಲ ಕಾರಣ” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಪ್ರತಿಪಾದಿಸಿದ್ದಾರೆ.

- Advertisement -

ಜಾರ್ಖಂಡ್‌ನಲ್ಲಿನ ಆಪಾದಿತ ನೇಮಕಾತಿ ಪರೀಕ್ಷಾ ಅಕ್ರಮಗಳ ವಿರುದ್ಧದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೊರೇನ್, “ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಲ್ಲಿ 75ರಿಂದ100%ರಷ್ಟು ಉದ್ಯೋಗಿಗಳು ಜಾರ್ಖಂಡ್ ಮೂಲದವರೇ ಇದ್ದಾರೆ. ಆದರೆ, ಹಿಂದಿನ ಬಿಜೆಪಿ ಆಡಳಿತದಲ್ಲಿದ್ದಾಗ ಹೊರರಾಜ್ಯಗಳ ಅಭ್ಯರ್ಥಿಗಳಿಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನೀಡಲಾಗಿತ್ತು ಎಂಬುದು ಬಹಿರಂಗ ಸತ್ಯ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಹಣವೇ ಬಿಜೆಪಿ ರಾಜಕಾರಣದ ಮೂಲ

ವಿಧಾನಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವಿಚಾರವನ್ನು ಪ್ರಸ್ತಾಪಿಸಿದ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹಣದ ನೋಟುಗಳನ್ನು ಎಸೆದಿದ್ದಾರೆ. ಬಿಜೆಪಿ ಶಾಸಕರ ಈ ಕ್ರಮವನ್ನು ಖಂಡಿಸಿದ ಸೊರೇನ್, “ಬಿಜೆಪಿಗರ ರಾಜಕಾರಣದ ಮೂಲವೇ ಹಣ” ಎಂದಿದ್ದಾರೆ.

 “ವಿಧಾನಸಭೆ ಕಲಾಪವನ್ನು ಸುಗಮವಾಗಿ ನಡೆಯಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ನಡೆಸಿದೆ. ಆದರೂ, ಬಿಜೆಪಿ ಶಾಸಕರು ಸದನದಲ್ಲಿ ನೋಟುಗಳನ್ನು ತೂರಿ ಅಸಭ್ಯವಾಗಿ ವರ್ತಿಸಿದ್ದಾರೆ. ಸದನದಲ್ಲಿ ಕರೆನ್ಸಿ ನೋಟುಗಳನ್ನು ಎಸೆದು ಪ್ರದರ್ಶಿಸಿರುವುದೇ ಬಿಜೆಪಿ ರಾಜಕಾರಣದ ಅಡಿಪಾಯಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಬಡವರು, ನಿರ್ಗತಿಕರು ಹಾಗೂ ಯುವಜನರ ಜೇಬಿನಿಂದ ಹಣ ಹೊರಹೋಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರತಿಪಕ್ಷ ಎತ್ತುವ ಪ್ರತಿಯೊಂದು ಪ್ರಶ್ನೆಗೂ ಸರ್ಕಾರದ ಬಳಿ ಸೂಕ್ತ ಉತ್ತರವಿದೆ. ಬಿಜೆಪಿಗೆ ಸತ್ಯವನ್ನು ಎದುರಿಸಲು ಸಾಧ್ಯವಾಗದೆ ಹತಾಶೆಯಿಂದ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...