ಶಬರಿಮಲೆಗೆ ಮಹಿಳೆಯರ ಪ್ರವೇಶ; ನಿರ್ಬಂಧ ಹೇರುವಂತೆ ಸುಪ್ರೀಂಗೆ ಕೇಂದ್ರ ಸರ್ಕಾರ ಮನವಿ

Date:

ಕೇರಳದ ಶಬರಿಮಲೆ ದೇವಸ್ಥಾನಕ್ಕೆ ನಿರ್ದಿಷ್ಟ ವಯೋಮಾನದ (ಋತುಚಕ್ರವಾಗುವ) ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ. “ಈ ನಿರ್ಬಂಧದ ವಿಷಯವು ಸಂಪೂರ್ಣವಾಗಿ ಧಾರ್ಮಿಕ ನಂಬಿಕೆ ಮತ್ತು ಪಂಥೀಯ ಸ್ವಾಯತ್ತತೆಯ ವ್ಯಾಪ್ತಿಗೆ ಬರುತ್ತದೆ. ಇದು ನ್ಯಾಯಾಂಗ ವಿಮರ್ಶೆಯ ವ್ಯಾಪ್ತಿಯಿಂದ ಹೊರಗಿದೆ” ಎಂದು ವಾದಿಸಿದೆ.

- Advertisement -

ಈ ಹಿಂದೆ, 2018ರ ಸೆಪ್ಟೆಂಬರ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು, ಮುಟ್ಟಿನ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಪ್ರವೇಶ ನಿರಾಕರಿಸುವುದು ಸಂವಿಧಾನ ಬಾಹಿರ ಎಂದು ತೀರ್ಪು ನೀಡಿತ್ತು. ಎಲ್ಲ ಮಹಿಳೆಯರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ, ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿಚಾರವು ಚರ್ಚೆಯಿಂದ ಹಿಂದೆ ಸರಿದಿತ್ತು. ಇದೀಗ, ಕೇರಳದಲ್ಲಿ ಇನ್ನೆರಡು ದಿನಗಳಲ್ಲಿ (ಏಪ್ರಿಲ್ 9) ವಿಧಾನಸಭಾ ಚುನಾವಣೆ ನಡೆಯಲಿರುವ ಸಮಯದಲ್ಲಿ, ಈ ವಿಷಯವನ್ನು ಕೇಂದ್ರ ಸರ್ಕಾರ ಮತ್ತೆ ಮುನ್ನೆಲೆಗೆ ತಂದಿದೆ.  

ಈ ಲೇಖನ ಓದಿದ್ದೀರಾ?: ಸ್ನೂಪ್‌ಗೇಟ್ ರಹಸ್ಯ: ಸುಪ್ರೀಂ ಕೋರ್ಟ್‌ನಲ್ಲಿ ಬಲವಂತವಾಗಿ ಹೂತುಹೋಯ್ತಾ ಮೋದಿಯ ‘ಆ’ ಸಿಡಿ ಪ್ರಕರಣದ ಸತ್ಯ?

ಇದೇ ಸಮಯದಲ್ಲಿ, ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಸೇರಿದಂತೆ 9 ಸದಸ್ಯರ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ. ಈ ಪೀಠದಲ್ಲಿ ಸೂರ್ಯ ಕಾಂತ್ ಅವರ ಜೊತೆಗೆ, ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ, ಎಂ.ಎಂ. ಸುಂದರೇಶ್, ಅಶಾನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಎ.ಜಿ. ಮಸಿಹ್, ಆರ್. ಮಹದೇವನ್, ಪ್ರಸನ್ನ ಬಿ. ವರಾಳೆ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರು ಇರಲಿದ್ದಾರೆ.

ಕೇಂದ್ರ ಸರ್ಕಾರವು ತನ್ನ ವಿವರವಾದ ಲಿಖಿತ ಸಲ್ಲಿಕೆಗಳಲ್ಲಿ 2018ರ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಗಳನ್ನು ಬೆಂಬಲಿಸಿದೆ. “ಆರಾಧನಾ ಸ್ಥಳಕ್ಕೆ ಯಾರು ಪ್ರವೇಶಿಸಬಹುದು ಎಂಬ ಪ್ರಶ್ನೆಗಳು ಲಿಂಗ ತಾರತಮ್ಯದ ಅಂಶಗಳಲ್ಲ. ಬದಲಿಗೆ ಅವು ಧಾರ್ಮಿಕ ಆಚರಣೆಗಳು, ನಂಬಿಕೆಗಳು ಹಾಗೂ ದೇವಸ್ಥಾನದ ದೇವತೆಯ ನಿರ್ದಿಷ್ಟ ಸ್ವರೂಪದೊಂದಿಗೆ ಬೇರೂರಿವೆ” ಎಂದು ಸರ್ಕಾರ ವಾದಿಸಿದೆ.

ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದ ಸಲ್ಲಿಸಿದ್ದು, “ಧಾರ್ಮಿಕ ಆಚರಣೆಗಳನ್ನು ತರ್ಕಬದ್ಧತೆ, ಆಧುನಿಕತೆ ಅಥವಾ ವೈಜ್ಞಾನಿಕ ಸಮರ್ಥನೆಯಂತಹ ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಬಾರದು” ಎಂದು ಕೋರ್ಟ್‌ಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...