ನೀಟ್, ಯುಜಿಸಿ ಅಕ್ರಮ: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದಿಂದ ಕಠಿಣ ಕಾನೂನು

Date:

ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ(ಅಕ್ರಮಗಳ ವಿಧಾನಗಳ ತಡೆಗಟ್ಟುವಿಕೆ)2024 ಕಾನೂನಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನೀಟ್ ಹಾಗೂ ಯುಜಿಸಿ ನೆಟ್ ಪರೀಕ್ಷೆಗಳಲ್ಲಿ ಅಕ್ರಮಗಳ ಬಗ್ಗೆ ದೂರು ದಾಖಲಾದ ನಂತರ ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ.

ಈ ವರ್ಷದ ಫೆಬ್ರವರಿಯಲ್ಲಿ ಸಂಸತ್ತಿನಲ್ಲಿ ಕಾಯ್ದೆಯನ್ನು ಅಂಗೀಕರಿಸಲಾಗಿತ್ತು. ಕಾನೂನಿನ ಅನ್ವಯ ಪರೀಕ್ಷೆಯಲ್ಲಿ ವಂಚನೆಯೆಸಗಿದರೆ ಕನಿಷ್ಠ ಮೂರರಿಂದ ಐದು ವರ್ಷಗಳವರೆಗೆ ಶಿಕ್ಷೆ ವಿಧಿಸಲಾಗುತ್ತದೆ. ಅಕ್ರಮದಲ್ಲಿ ಭಾಗಿಯಾದ ಸಂಘಟಿತ ಅಪರಾಧಕ್ಕೆ 10 ವರ್ಷಗಳ ಜೈಲು ಹಾಗೂ 1 ಕೋಟಿವರೆಗೂ ದಂಡ ವಿಧಿಸಲಾಗುತ್ತದೆ.

ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು, ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಸಂಘಟಿತ ಅಪರಾಧವನ್ನು ಮಾಡಿದರೆ, ಅವರಿಗೆ ಐದು ವರ್ಷಗಳಿಗಿಂತ ಕಡಿಮೆಯಿಲ್ಲದ ಹಾಗೂ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು 1 ಕೋಟಿ ರೂ.ಗಿಂತ ಕಡಿಮೆಯಿಲ್ಲದ ದಂಡವನ್ನು ವಿಧಿಸಲಾಗುತ್ತದೆ ಎಂದು ಕಾನೂನು ಹೇಳುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂಭವನೀಯ ಅಪರಾಧದ ಬಗ್ಗೆ ಜ್ಞಾನವಿದ್ದರೂ ಅದನ್ನು ವರದಿ ಮಾಡದ ಪರೀಕ್ಷಾ ಸೇವಾ ಪೂರೈಕೆದಾರರಿಗೆ 1 ಕೋಟಿ ರೂ. ವರೆಗೆ ದಂಡ ವಿಧಿಸಬಹುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳಪೆ ಫಲಿತಾಂಶಕ್ಕೆ ಸಿ ಎಂ ಸಿಟ್ಟಾದರೆ ಸಾಲದು, ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು

ಅಧಿಸೂಚನೆಯು ಭಾರತೀಯ ನ್ಯಾಯ ಸಂಹಿತೆಯನ್ನು ಉಲ್ಲೇಖಿಸುತ್ತದೆ ಆದರೆ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳು ಅದನ್ನು ಕಾರ್ಯಗತಗೊಳಿಸುವವರೆಗೆ ಜಾರಿಯಲ್ಲಿರುತ್ತವೆ ಎಂದು ತಿಳಿಸಲಾಗಿದೆ. ಸಂಹಿತಾ ಮತ್ತು ಇತರ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ.

ಪ್ರಶ್ನೆ ಪತ್ರಿಕೆಗಳು ಅಥವಾ  ಕೀ ಉತ್ಗತರಗಳನ್ನು ಸೋರಿಕೆ ಮಾಡುವುದು, ಅನಧಿಕೃತ ಸಂವಹನದ ಮೂಲಕ ಅಭ್ಯರ್ಥಿಗಳಿಗೆ ಸಹಾಯ ಮಾಡುವುದು ಅಥವಾ ಪರಿಹಾರಗಳನ್ನು ಒದಗಿಸುವುದು, ಕಂಪ್ಯೂಟರ್ ನೆಟ್‌ವರ್ಕ್‌ಗಳು ಅಥವಾ ಸಂಪನ್ಮೂಲಗಳನ್ನು ತಿದ್ದುವುದು, ನಕಲಿ ಪರೀಕ್ಷೆಗಳನ್ನು ನಡೆಸುವುದು ಅಥವಾ ನಕಲಿ ದಾಖಲೆಗಳನ್ನು ನೀಡುವುದು ಮುಂತಾದವುಗಳು ಕಾನುನಿನಲ್ಲಿ ಒಳಗೊಂಡಿವೆ.

ಕಾಯ್ದೆಯಡಿ ಬರುವ ಅಪರಾಧಗಳು ಜಾಮೀನು ರಹಿತ ಅಪರಾಧವಾಗಿದ್ದು, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಯಾವುದೇ ಅಧಿಕಾರಿಯು ತನಿಖೆ ಮಾಡಬಹುದು. ಹೆಚ್ಚುವರಿಯಾಗಿ, ಯಾವುದೇ ತನಿಖೆಯನ್ನು ಕೇಂದ್ರದ ಏಜೆನ್ಸಿಗಳಿಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ.

ಈ ಕಾಯ್ದೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಟಿಎ) ನಡೆಸುವ ಎಲ್ಲ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಒಳಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...

ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂಧನ

ಪಿಸ್ತೂಲ್‌ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ...

ಆಂಧ್ರ ಪ್ರದೇಶ | ಜನನಿಬಿಡ ಮುಖ್ಯ ರಸ್ತೆಯಲ್ಲೇ ವೈಎಸ್‌ಆರ್‌ಸಿಪಿ ಯುವ ಮುಖಂಡನ ಬರ್ಬರ ಹತ್ಯೆ

ವೈಎಸ್‌ಆರ್‌ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ...