ಅಜಿತ್ ದೋವಲ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮುಂದುವರಿಕೆ

Date:

ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಕೇಂದ್ರ ಸರ್ಕಾರ ಪುನರ್‌ನೇಮಕ ಮಾಡಿದೆ. ಹಾಗೆಯೇ ಸಂಪುಟದ ನೇಮಕಾತಿ ಸಮಿತಿ ಡಾ. ಪಿ ಕೆ ಮಿಶ್ರಾ ಅವರನ್ನು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾಗಿ ಮುಂದುವರೆಸಿದೆ.

ಇಬ್ಬರು ನಿವೃತ್ತ ಲೋಕಸೇವಾ ಆಯೋಗದ ಅಧಿಕಾರಿಗಳು ದೀರ್ಘ ಕಾಲದಿಂದ ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ ಮುಂದುವರೆಯುತ್ತಿದ್ದಾರೆ.

ಮಿಶ್ರಾ ಅವರು ಪ್ರದಾನ ಮಂತ್ರಿ ಕಾರ್ಯಾಲಯದ ಆಡಳಿತಾತ್ಮಕ ವಿಷಯಗಳು ಹಾಗೂ ನೇಮಕಾತಿಗಳನ್ನು ನಿರ್ವಹಿಸಿದರೆ, ದೋವಲ್‌ ಅವರು ರಾಷ್ಟ್ರೀಯ ಭದ್ರತೆ, ಮಿಲಿಟರಿ ವ್ಯವಹಾರ ಹಾಗೂ ಗುಪ್ತಚರ ವಿಭಾಗಗಳನ್ನು ನಿರ್ವಹಿಸುತ್ತಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

1968 ಬ್ಯಾಚಿನ ಐಪಿಎಸ್‌ ಅಧಿಕಾರಿಯಾದ ಅಜಿತ್‌ ದೋವಲ್ ಭಯೋತ್ಪಾದನಾ ನಿಗ್ರಹ ತಜ್ಞ ಹಾಗೂ ಪರಮಾಣು ಸಮಸ್ಯೆಗಳ ಪರಿಣಿತರಾಗಿದ್ದಾರೆ. ವಿವಿಧ ರೀತಿಯ ಭದ್ರತೆ ವಿಷಯಗಳ ಬಗ್ಗೆ ಪ್ರಧಾನಿಯ ಸಲಹೆಗಾರರಾಗಿದ್ದಾರೆ. ಈ ಮೊದಲು ಗುಪ್ತಚರ ಅಧಿಕಾರಿಯಾಗಿ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಮಧ್ಯ ಏಷ್ಯಾದ ರಾಷ್ಟ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಡಾ. ಪಿ ಕೆ ಮಿಶ್ರಾ ಅವರು 1972ರ ಬ್ಯಾಚಿನ ಅಧಿಕಾರಿಯಾಗಿದ್ದು, ಕಳೆದ ಒಂದು ದಶಕದಿಂದ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ. ನಿವೃತ್ತಿಯಾಗುವ ಮುನ್ನ ಇವರು ಕೇಂದ್ರ ಸರ್ಕಾರದ ಕೃಷಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ...

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...