ನೆಹರು ಸ್ಮಾರಕದ ಮರುನಾಮಕರಣ : ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

Date:

  • 59 ವರ್ಷಗಳ ಇತಿಹಾಸವಿರುವ ಪಂಡಿತ್‌ ಜವಾಹರ್‌ಲಾಲ್‌ ನೆಹರು ಸ್ಮಾರಕ
  • ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಸೊಸೈಟಿ ಎಂದು ಮರುನಾಮಕರಣ

ದೆಹಲಿಯ ತೀನ್‌ಮೂರ್ತಿ ಮಾರ್ಗದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬದಲಿಸಿದೆ. ಕೇಂದ್ರದ ಈ ನಡೆಗೆ ಕಾಂಗ್ರೆಸ್‌ ನಾಯಕರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ದ್ವೇಷದ ರಾಜಕಾರಣಕ್ಕೆ ಇದೊಂದು ಉದಾಹರಣೆ ಎಂದಿದ್ದಾರೆ.

- Advertisement -

ಇತ್ತೀಚೆಗೆ ನೆಹರು ಸ್ಮಾರಕದ ಹೆಸರನ್ನು ಬದಲಿಸಿರುವ ಕೇಂದ್ರ ಸರ್ಕಾರ, ʼಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಸೊಸೈಟಿʼ ಎಂದು ಮರು ನಾಮಕರಣ ಮಾಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಈ ಸೊಸೈಟಿಯ ಉಪಾಧ್ಯಕ್ಷರಾಗಿದ್ದು, ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಮರುನಾಮಕರಣದ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜವಾಹರ್‌ಲಾಲ್‌ ನೆಹರು ಅವರು ಭಾರತದ ಪ್ರಧಾನಿ ಆಗಿದ್ದಾಗ 16 ವರ್ಷಗಳ ಕಾಲ ತೀನ್‌ಮೂರ್ತಿ ಮಾರ್ಗದಲ್ಲಿರುವ ಇದೇ ಕಟ್ಟಡದಲ್ಲಿ ವಾಸವಿದ್ದರು. ಅವರ ನಿಧನದ ನಂತರ ಈ ಕಟ್ಟಡವನ್ನು ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯವನ್ನಾಗಿ ಮಾರ್ಪಡಿಸಲಾಗಿತ್ತು.

ಕೇಂದ್ರ ಸರ್ಕಾರ ನೆಹರು ಸ್ಮಾರಕದ ಹೆಸರು ಬದಲಿಸುತ್ತಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಟ್ವೀಟ್‌ ಮಾಡಿದ್ದು, “ತಮ್ಮ ಸ್ವಂತ ಇತಿಹಾಸವೇ ಇಲ್ಲದವರು ಇನ್ನೊಬ್ಬರ ಹಿನ್ನೆಲೆಯನ್ನು ಹತ್ತಿಕ್ಕುವುದರಲ್ಲೇ ತೊಡಗಿಕೊಂಡಿರುತ್ತಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರ ಈ ರೀತಿಯ ನಡೆಯಿಂದ ಅವರ ಕೀಳುಮಟ್ಟದ ಮನಸ್ಥಿತಿ ಮತ್ತು ಸರ್ವಾಧಿಕಾರಿ ಧೋರಣೆಯ ಪರಿಚಯವಾಗುತ್ತಿದೆ” ಎಂದು ಕೇಂದ್ರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಹಿರಿಯ ಕಾಂಗ್ರೆಸ್‌ ವಕ್ತಾರ ಜೈರಾಮ್‌ ರಮೇಶ್‌ ಕೂಡ ಟ್ವೀಟ್‌ ಮಾಡಿದ್ದು, “ಸಂಕುಚಿತ ಮನೋಭಾವ ಮತ್ತು ದ್ವೇಷ ರಾಜಕಾರಣಕ್ಕೆ ಇನ್ನೊಂದು ಹೆಸರೇ ಮೋದಿ. 59 ವರ್ಷಗಳ ಇತಿಹಾಸವಿರುವ ನೆಹರು ಸ್ಮಾರಕ ಜಗತ್ತಿಗೆ ಬೌದ್ಧಿಕ ಜ್ಞಾನವನ್ನು ಪಸರಿಸುವ ಮತ್ತು ಪುಸ್ತಕಗಳ ಭಂಡಾರವಾಗಿತ್ತು. ಈ ಸ್ಮಾರಕದ ಹೆಸರನ್ನು ಬದಲಿಸುವ ಮೂಲಕ ಮೋದಿ ಅವರು ಭಾರತವನ್ನು ಕಟ್ಟಿದ ಶಿಲ್ಪಿಯ ಇತಿಹಾಸವನ್ನು ನಾಶಪಡಿಸಲು ಯತ್ನಿಸುತ್ತಿದ್ದಾರೆ. ಅಭದ್ರತೆಯಿಂದ ಬದುಕುತ್ತಿರುವ ಈ ವ್ಯಕ್ತಿ ಜಗತ್ತಿನ ಎದುರು ತನ್ನನ್ನು ತಾನು ವಿಶ್ವಗುರು ಎಂದು ಹೇಳಿಕೊಂಡು ತಿರುಗುತ್ತಿದ್ದಾನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...