ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಯತ್ನ: ಎಎಪಿ ಆರೋಪ

Date:

ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ದೆಹಲಿ ಸಚಿವೆ ಅತಿಶಿ ಈ ಬಗ್ಗೆ ಹೇಳಿಕೆ ನೀಡಿದ್ದು, ಅರವಿಂದ್‌ ಕೇಜ್ರಿವಾಲ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಯುತ್ತಿರುವ ಬಗ್ಗೆ ನಂಬಲಾರ್ಹ ಮೂಲಗಳಿಂದ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.

- Advertisement -

ದೆಹಲಿ ಸರ್ಕಾರದ ಹಲವು ಇಲಾಖೆಗಳಲ್ಲಿ ಹಲವಾರು ಹುದ್ದೆಗಳು ಖಾಲಿಯಿದ್ದರೂ ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿಲ್ಲ ಎಂದು ಅತಿಶಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಯಾವುದೇ ಪುರಾವೆಗಳಿಲ್ಲದಿದ್ದರೂ ಸುಳ್ಳು ಪ್ರಕರಣದ ಮೇಲೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದ್ದು, ದೆಹಲಿಯ ಚುನಾಯಿತ ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆಯುತ್ತಿದೆ. ಹಿಂದಿನ ಕೆಲವು ಘಟನೆಗಳನ್ನು ನೋಡಿದಾಗ ಪಿತೂರಿಯನ್ನು ಚೆನ್ನಾಗಿಯೇ ನಡೆಸಲಾಗುತ್ತಿದೆ ಎಂಬುದು ಕಂಡುಬರುತ್ತಿದೆ” ಎಂದು ಅತಿಶಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

“ದೆಹಲಿಗೆ ಯಾವುದೇ ಅಧಿಕಾರಿಗಳನ್ನು ನಿಯೋಜಿಸಿಲ್ಲ, ಯಾವುದೇ ವರ್ಗಾವಣೆಯನ್ನು ಕೂಡ ಮಾಡಿಲ್ಲ. ಚುನಾವಣೆ ಪ್ರಕಟವಾದ ದಿನದಿಂದ ಇಲ್ಲಿನ ಅಧಿಕಾರಿಗಳು ಸಭೆಗಳಿಗೆ ಹಾಜರಾಗುತ್ತಿಲ್ಲ”ಎಂದು ಅತಿಶಿ ತಿಳಿಸಿದ್ದಾರೆ.

ದೆಹಲಿಯ ಆಪ್ತ ಸಹಾಯಕನನ್ನು ಪದಚ್ಯುತಗೊಳಿಸಿದ್ದು ಕೂಡ ಪಿತೂರಿಯಾಗಿದೆ ಎಂದು ಅತಿಶಿ ಆರೋಪಿಸಿದ್ದಾರೆ.

ಅತಿಶಿ ನೀಡಿರುವ ಎಲ್ಲ ಹೇಳಿಕೆಗಳನ್ನು ಬಿಜೆಪಿ ನಿರಾಕರಿಸಿದ್ದು, ನಿತ್ಯವೂ ಒಂದೊಂದು ಹೊಸ ಕತೆಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...