ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

Date:

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತಳೆಯುತ್ತಿದೆ ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ, ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಪ್ರತಿಭಟನಾಕಾರರನ್ನು ಬಂಧಿಸುವ ಕೇಂದ್ರ ಸರ್ಕಾರದ ನಡವಳಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

“ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನ ನಮಗೆ ನೀಡಿದ ಹಕ್ಕು. ಸರ್ಕಾರವು ಜನರ ಧ್ವನಿಯನ್ನು ಆಲಿಸಬೇಕೇ ಹೊರತು ಅದನ್ನು ಹತ್ತಿಕ್ಕುವ ಕೆಲಸ ಮಾಡಬಾರದು. ನೀವು ಈ ದೇಶದ ಮಾಲೀಕರಲ್ಲ, ಸಾರ್ವಜನಿಕರು ನಿಮ್ಮನ್ನು ಐದು ವರ್ಷಗಳ ಅವಧಿಗೆ ಆಡಳಿತ ನಡೆಸಲು ಆಯ್ಕೆ ಮಾಡಿದ್ದಾರೆ. ಶಾಂತಿಯುತವಾಗಿ ಆಡಳಿತ ನಡೆಸಿ, ಸರ್ವಾಧಿಕಾರದ ಹಾದಿ ತುಳಿಯಬೇಡಿ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಇದೇ ವೇಳೆ, ಬಂಧನ ಅಥವಾ ಕಾನೂನು ಕ್ರಮಗಳಿಗೆ ಹೆದರದೆ ಹೋರಾಟವನ್ನು ಮುಂದುವರಿಸುವಂತೆ ಪ್ರತಿಭಟನಾಕಾರರಿಗೆ ಅವರು ಕರೆ ನೀಡಿದ್ದಾರೆ. ಈ ಪ್ರತಿಭಟನೆಯ ಭಾಗವಾಗಿ ದಕ್ಷಿಣ ಮುಂಬೈನ ಹುತಾತ್ಮ ಚೌಕ್‌ನಲ್ಲೂ ಬೆಂಬಲ ಸಭೆ ನಡೆಸಲು ಕರೆ ನೀಡಿದ್ದಾರೆ.

ದೆಹಲಿಯ ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಭಾರಿ ಭದ್ರತೆ ಒದಗಿಸಿದ್ದು, ದೆಹಲಿ ಮೆಟ್ರೋ ಬಂದ್ ಮಾಡಲಾಗಿದೆ, ತಪಾಸಣೆಗಳನ್ನು ಬಿಗಿಗೊಳಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವಾರು ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಅನೇಕ ಪ್ರತಿಪಕ್ಷ ನಾಯಕರು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಮನಾಬಾದ್‌ | ಒಗ್ಗಟ್ಟಿನಿಂದ ಹೂಗಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿ: ಶಾಸಕ ಸಿದ್ದಲಿಂಗಪ್ಪ ಪಾಟೀಲ

ಹೂಗಾರ ಸಮಾಜವು ಸಂಘಟನೆ, ಪ್ರೀತಿ ಮತ್ತು ಸೌಹಾರ್ದತೆಯ ಮೂಲಕ ಶೈಕ್ಷಣಿಕ, ಸಾಮಾಜಿಕ...

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...