Gen Z ಸೆಳೆಯಲು ಕೇಂದ್ರದ ಕಸರತ್ತು; ʼದಿನಕ್ಕೊಂದು ವಿವಿ ಭೇಟಿʼ ಅಭಿಯಾನ

Date:

ಯುವಜನರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಹೊಸ ಕಾರ್ಯಕ್ರಮವೊಂದನ್ನು ರೂಪಿಸುತ್ತಿದೆ. Gen Zಗಳನ್ನ ಸೆಳೆಯಲು ‘ಒಂದು ದಿನ, ಒಂದು ವಿಶ್ವವಿದ್ಯಾಲಯ’ ಎಂಬ ಹೆಸರಿನ ಕಾರ್ಯಕ್ರಮದಡಿ ಪ್ರತಿದಿನ ಒಬ್ಬ ಕೇಂದ್ರ ಸಚಿವರು ಒಂದೊಂದು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಯಾಗಿದೆ.

- Advertisement -

ವಿದ್ಯಾರ್ಥಿಗಳ ಸಮಸ್ಯೆಗಳು, ದೇಶದ ಪ್ರಮುಖ ವಿಚಾರಗಳ ಕುರಿತು ಅವರ ಅಭಿಪ್ರಾಯಗಳನ್ನು ಆಲಿಸುವುದು ಹಾಗೂ ಯುವಜನರಿಗಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳ ಪ್ರತಿಭಟನೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಈ ಯೋಜನೆ ರೂಪಿಸಲಾಗುತ್ತಿದೆ. ಪ್ರತಿಭಟನೆ ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದ್ದು, ಪ್ರತಿಪಕ್ಷಗಳು ಸಂಸತ್ತಿನಲ್ಲೂ ಈ ವಿಚಾರವನ್ನು ಪ್ರಸ್ತಾಪಿಸುತ್ತಿವೆ.

ಮೂಲಗಳ ಪ್ರಕಾರ, ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿಶ್ವವಿದ್ಯಾಲಯಗಳು ಮತ್ತು ಇತರ ಕೇಂದ್ರ ಸಚಿವರೊಂದಿಗೆ ಕಾರ್ಯಕ್ರಮದ ಸಮನ್ವಯದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಈ ಯೋಜನೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ಭಾರತದಲ್ಲಿ ಸುಮಾರು 1,300 ವಿಶ್ವವಿದ್ಯಾಲಯಗಳಿವೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ಅಂಕಿಅಂಶಗಳು ಹೇಳುತ್ತವೆ. ಇವುಗಳಲ್ಲಿ 57 ಕೇಂದ್ರ ವಿಶ್ವವಿದ್ಯಾಲಯಗಳು ಹಾಗೂ 522 ರಾಜ್ಯ ವಿಶ್ವವಿದ್ಯಾಲಯಗಳಿವೆ. ಉಳಿದವು ಡೀಮ್ಡ್ ವಿಶ್ವವಿದ್ಯಾಲಯಗಳು ಮತ್ತು ಖಾಸಗಿ ವಿಶ್ವವಿದ್ಯಾಲಯಗಳಾಗಿವೆ.

NEET ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆಗಳು ನಡೆದ ಬಳಿಕ ಸರ್ಕಾರ ಯುವಜನ ಸಂಪರ್ಕ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವಂತಿದೆ. ಜುಲೈ 20ರಂದು ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕೈಗೊಂಡ ಕ್ರಮ ತೀವ್ರ ರಾಜಕೀಯ ಪ್ರತಿಕ್ರಿಯೆಗೆ ಕಾರಣವಾಗಿತ್ತು. ಬಳಿಕ ಮುಂಗಾರು ಅಧಿವೇಶನದಲ್ಲೂ ಪ್ರತಿಪಕ್ಷಗಳು ಈ ವಿಚಾರವನ್ನು ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದ್ದವು.

ಉತ್ಪಾದನೆ, ಬಾಹ್ಯಾಕಾಶ, ಪರಮಾಣು ಶಕ್ತಿ ಮತ್ತು ಸೆಮಿಕಂಡಕ್ಟರ್‌ ಕ್ಷೇತ್ರಗಳಂತಹ ವಲಯಗಳಲ್ಲಿ ಯುವ ಭಾರತೀಯರಿಗೆ ಲಭ್ಯವಿರುವ ಉದ್ಯೋಗ ಹಾಗೂ ಅವಕಾಶಗಳ ಬಗ್ಗೆ  ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಸ್ತಾಪಿಸಿದ್ದರು.

ಇದನ್ನೂ ಓದಿ: ʼನಾವು Gen Zʼ ಎನ್ನುವುದು ʼನನ್ನಪ್ಪ ಯಾರು ಗೊತ್ತಾ?ʼ ಆಗದಿರಲಿ: ಸಿಎಂ ಒಮರ್ ಅಬ್ದುಲ್ಲಾ

ಈಗ ಪ್ರಸ್ತಾಪಿಸಿರುವ ‘ಒಂದು ದಿನ, ಒಂದು ವಿಶ್ವವಿದ್ಯಾಲಯ’ ಕಾರ್ಯಕ್ರಮದ ಮೂಲಕ ಈ ಸಂಪರ್ಕವನ್ನು ಮತ್ತಷ್ಟು ನೇರಗೊಳಿಸಲು ಸರ್ಕಾರ ಮುಂದಾಗಿದೆ. ಸಚಿವರು ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆಗಳಿಗೇ ಭೇಟಿ ನೀಡಿ ಅವರೊಂದಿಗೆ ಮುಖಾಮುಖಿಯಾಗಿ ಸಂವಾದ ನಡೆಸುವ ಮೂಲಕ ಯುವಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸಲಿದೆ ಎನ್ನಲಾಗಿದೆ.

ದೇಶಾದ್ಯಂತ ದೊಡ್ಡ ಯುವಜನ ಚಳವಳಿ ರೂಪುಗೊಳ್ಳಲು ಕಾರಣವಾದ ವಿಚಾರಗಳ ಬಗ್ಗೆ ಸರ್ಕಾರದ ನಡೆ ಈಗ ಪ್ರಶ್ನೆಗೊಳಗಾಗಿದೆ. ಯುವಜನರನ್ನು ಹೀಯಾಳಿಸಿದ್ದು, ಅವರನ್ನು ‘ಕಾಕ್ರೋಚ್’ ಎಂದು ಕರೆದಿದ್ದೇ ಈ ಚಳವಳಿಗೆ ಕಾರಣವಾಗಿತ್ತು. ಪ್ರತಿಭಟನೆ ವೇಳೆಯೂ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗದ ಆರೋಪಗಳು ಕೇಳಿಬಂದಾಗ, ಸರ್ಕಾರದ ಪರವಾಗಿಯಾಗಲೀ, ಪ್ರಧಾನಿ ಮೋದಿಯವರಿಂದಾಗಲೀ ಆ ಕ್ರಮದ ಬಗ್ಗೆ ಸಮರ್ಪಕ ಸ್ಪಷ್ಟನೆ ಅಥವಾ ಖಂಡನೆ ವ್ಯಕ್ತವಾಗಲಿಲ್ಲ. ಬದಲಿಗೆ ಪ್ರತಿಭಟನಾಕಾರರನ್ನೇ ದೂಷಿಸಲಾಯಿತು. ಬಿಜೆಪಿ ನಾಯಕರೇ ಜೆನ್‌ ಝೀಗಳನ್ನ ʼಗಟರ್‌ʼ, ʼಜವಾಬ್ದಾರಿ ಇಲ್ಲದವರುʼ ಎಂದೆಲ್ಲ ಜರೆದರು. ಇದು ಬಿಜೆಪಿ ವಿರುದ್ಧದ ಯುವಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದೆ. ಈಗ ಯುವಜನರೊಂದಿಗೆ ನೇರ ಸಂಪರ್ಕಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ದಿನಕ್ಕೊಂದು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಈ ಹೊಸ ಪ್ರಯತ್ನ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...