ಸಂಸತ್ತಿನಲ್ಲಿ ಪಂಜಾಬ್ ಸಮಸ್ಯೆಗಳನ್ನು ಎತ್ತಿಲ್ಲ ಎಂದ ಎಎಪಿಗೆ ದಾಖಲೆ ನೀಡಿದ ರಾಘವ್ ಚಡ್ಡಾ!

Date:

ಆಮ್ ಆದ್ಮಿ ಪಕ್ಷ (ಎಎಪಿ) ಒಳಗಿನ ರಾಜಕೀಯ ತಿಕ್ಕಾಟ ಹೆಚ್ಚಾಗುತ್ತಿದೆ. ಈಗಾಗಲೇ ರಾಘವ್ ಚಡ್ಡಾ ಅವರನ್ನು ಎಎಪಿ ಬದಿಗೊತ್ತಿದೆ. ಚಡ್ಡಾ ಸಂಸತ್ತಿನಲ್ಲಿ ಪಂಜಾಬ್ ಸಂಬಂಧಿತ ಸಮಸ್ಯೆಗಳನ್ನು ಎತ್ತಿಲ್ಲ ಎಂದು ಹೇಳಿಕೊಂಡಿದೆ. ಈ ಆರೋಪ ಮಾಡಿದ ಎಎಪಿಗೆ ರಾಘವ್ ಚಡ್ಡಾ ದಾಖಲೆಗಳ ಸಹಿತ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಚಡ್ಡಾ, “ರಾಘವ್ ಚಡ್ಡಾ ಪಂಜಾಬ್‌ನ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಎತ್ತುವಲ್ಲಿ ವಿಫಲರಾಗಿದ್ದಾರೆ ಹೇಳುವ ಮೂಲಕ ನಾನು ಈ ವಿಡಿಯೋಗಳನ್ನು ಬಿಡುಗಡೆಗೊಳಿಸುವಂತೆ ಮಾಡಿದ ಎಎಪಿಯ ನನ್ನ ಸಹೋದ್ಯೋಗಿಗಳಿಗೆ, ಇಲ್ಲಿ ಒಂದು ಸಣ್ಣ ಟ್ರೇಲರ್ ಇದೆ. (ಸಿನಿಮಾ ಇನ್ನೂ ಬಾಕಿ ಇದೆ) ಪಿಕ್ಚರ್ ಅಭಿ ಬಾಕಿ ಹೈ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮುಂದುವರೆದ ಅಮಾನತು ಸರಣಿ: ಈ ಬಾರಿ ಎಎಪಿಯ ರಾಘವ್‌ ಚಡ್ಡಾ ಸರದಿ

“ಪಂಜಾಬ್ ನನಗೆ ಬರೀ ಮಾತನಾಡುವ ವಿಷಯವಲ್ಲ. ಅದು ನನ್ನ ಮನೆ, ನನ್ನ ಕರ್ತವ್ಯ, ನನ್ನ ಮಣ್ಣು, ನನ್ನ ಆತ್ಮ” ಎಂದೂ ಚಡ್ಡಾ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷದ ‘ಉಪನಾಯಕ’ ಸ್ಥಾನದಿಂದ ವಜಾಗೊಳಿಸಲಾಗಿದೆ. ಸಂಸತ್ತಿನಲ್ಲಿ ಅವರಿಗೆ ಮಾತನಾಡಲು ಅವಕಾಶ ನೀಡದಂತೆ ಪಕ್ಷವು ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಎಪಿಯಲ್ಲಿ ಸಮಸ್ಯೆಗಳ ಬಗ್ಗೆ ಅತಿ ಉತ್ತಮವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತುತ್ತಿದ್ದವರು ರಾಘವ್ ಚಡ್ಡಾ. ಆದರೆ ಅವರನ್ನೇ ರಾಜ್ಯಸಭೆಯಲ್ಲಿ ಮೌನಗೊಳಿಸುವುದು ರಾಜಕೀಯವಾಗಿ ತೀವ್ರ ವಿವಾದವನ್ನು ಸೃಷ್ಟಿಸಿದೆ.

ಇನ್ನೊಂದೆಡೆ ಚಡ್ಡಾ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧದ ಟೀಕಾತ್ಮಕ ಪೋಸ್ಟ್‌ಗಳನ್ನು ತಮ್ಮ ಸಾಮಾಜಿಕ ಜಾಲತಾಣದಿಂದ ಅಳಿಸಿ ಹಾಕಿದ್ದಾರೆ. ರಾಜಿ ಮಾಡಿಕೊಂಡಿದ್ದಾರೆ. ಮೋದಿಯವರಿಗೆ ಹೆದರುತ್ತಾರೆ ಎಂದು ಎಎಪಿಯ ಇತರ ನಾಯಕರು ಆರೋಪಿಸಿದ್ದಾರೆ. ಆದರೆ ಈ ಎಲ್ಲ ಆರೋಪಗಳನ್ನು ಚಡ್ಡಾ ನಿರಾಕರಿಸಿದ್ದಾರೆ. ಇದು ಸಂಘಟಿತ ದಾಳಿ ಎಂದು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...