ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ನಡುವೆ ಸರಣಿ ಅಪಘಾತ

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳ (ಕಾನ್ವಾಯ್) ಸರಣಿ ಅಪಘಾತ ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ಈ ಅಪಘಾತದಲ್ಲಿ ಐದು ವಾಹನಗಳು ಹಾಗೂ ಒಂದು ಆಂಬ್ಯುಲೆನ್ಸ್ ಜಖಂಗೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ರಾಹುಲ್ ಗಾಂಧಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಸುಲ್ತಾನ್‌ಪುರ ಜಿಲ್ಲೆಯ ಹಲಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 91ನೇ ಕಿಲೋಮೀಟರ್ ಬಳಿ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ದೆಹಲಿಯಿಂದ ಲಖನೌಗೆ ಆಗಮಿಸಿದ್ದ ರಾಹುಲ್ ಗಾಂಧಿ, ಅಲ್ಲಿಂದ ಸುಲ್ತಾನ್‌ಪುರದ ಎಂಪಿ-ಎಂಎಲ್‌ಎ ನ್ಯಾಯಾಲಯದಲ್ಲಿ ನಡೆಯಲಿದ್ದ ವಿಚಾರಣೆಗೆ ಹಾಜರಾಗಲು ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಾಗುತ್ತಿದ್ದ ಬೆಂಗಾವಲು ವಾಹನಗಳ ಪೈಕಿ ಮುಂಭಾಗದ ವಾಹನ ದಿಢೀರ್ ಬ್ರೇಕ್ ಹಾಕಿದೆ ಎನ್ನಲಾಗಿದೆ. ಇದರಿಂದ ಹಿಂದಿನಿಂದ ಬರುತ್ತಿದ್ದ ವಾಹನಗಳು ನಿಯಂತ್ರಣ ಕಳೆದುಕೊಂಡು ಒಂದಕ್ಕೊಂದು ಡಿಕ್ಕಿಯಾಗಿವೆ. ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಐದು ವಾಹನಗಳು ಹಾಗೂ ಒಂದು ಆಂಬ್ಯುಲೆನ್ಸ್‌ಗೆ ಸಣ್ಣ ಪುಟ್ಟ ಹಾನಿಯಾಗಿದೆ.

Advertisements

2018ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಡೆದ ರ್ಯಾಲಿಯಲ್ಲಿ ಗಾಂಧಿಯವರು ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪಕ್ಕೆ ಈ ಪ್ರಕರಣ ಸಂಬಂಧಿಸಿದೆ. ಸುಲ್ತಾನ್‌ಪುರದ ಜಿಲ್ಲಾ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷರೂ ಆಗಿರುವ ಸ್ಥಳೀಯ ಬಿಜೆಪಿ ರಾಜಕಾರಣಿ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಗಾಂಧಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ: ರಾಹುಲ್‌ಗೆ ಲಖನೌ ಕೋರ್ಟ್ ನೀಡಿದ್ದ ಸಮನ್ಸ್‌ಗೆ ಸುಪ್ರೀಂ ತಡೆ

2023ರಲ್ಲಿ ರಾಹುಲ್‌ ಗಾಂಧಿ ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. ನ್ಯಾಯಾಲಯವು ಈ ಹಿಂದೆ ಅಕ್ಟೋಬರ್ 13 ರಂದು ತನ್ನ ತೀರ್ಪನ್ನು ಪ್ರಕಟಿಸಲು ನಿಗದಿಪಡಿಸಿತ್ತು, ನಂತರ ಅದನ್ನು ಅಕ್ಟೋಬರ್ 26ಕ್ಕೆ ನಿಗದಿಪಡಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಕ್ರಿಯೆಯಲ್ಲಿ ಬಳಸಿದ ಸಾಫ್ಟ್‌ವೇರ್ ಮಾಹಿತಿ ಬಹಿರಂಗಕ್ಕೆ ಚುನಾವಣಾ ಆಯೋಗ ನಕಾರ

ಮತದಾರರ ಪಟ್ಟಿಯಲ್ಲಿನ ದೋಷಗಳು ಹಾಗೂ ಅಸಂಗತತೆಗಳನ್ನು ಪತ್ತೆಹಚ್ಚಲು ವಿಶೇಷ ತೀವ್ರ ಪರಿಷ್ಕರಣೆ...

ಉರಿದು ಬೂದಿಯಾದ ಹಿಟ್ಲರ್‌ನ ಅತಿಥಿ ಗೃಹ

ನಾಜಿ ಆಡಳಿತದ ಇತಿಹಾಸದ ಕರಾಳ ನೆನಪನ್ನು ಹೊಂದಿದ್ದ ಅಡಾಲ್ಫ್ ಹಿಟ್ಲರ್‌ನ ಅತಿಥಿ...

ಸುಳ್ಳು ಅಫಿಡವಿಟ್‌ ವಿರುದ್ಧ ಮತದಾರರೇ ದೂರು ಸಲ್ಲಿಸಬಹುದು, ಇಸಿ ಅನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸುವ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದರೆ,...

RSS ಸಿದ್ಧಾಂತವನ್ನು ಕಳಚಿ‌ ಹಾಕುವ ತನಕ‌ ಭಾರತದಲ್ಲಿ ಶಾಂತಿ‌ ಅಸಾಧ್ಯ: ಮಲ್ಲಿಕಾರ್ಜುನ ಖರ್ಗೆ

ಭಾರತದಲ್ಲಿ RSS ಸಿದ್ಧಾಂತವನ್ನು ಸಂಪೂರ್ಣವಾಗಿ ಕಳಚಿ ಹಾಕುವವರೆಗೆ ದೇಶದಲ್ಲಿ ನೈಜ ಶಾಂತಿ...