ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್ ಆ. 30ರಂದು ಬಿಜೆಪಿ ಸೇರ್ಪಡೆ

Date:

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಆಗಸ್ಟ್ 30ರಂದು ರಾಂಚಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

- Advertisement -

ಸೋರೆನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಯ ನಂತರ ಈ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ಗೆ ಹಿನ್ನಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮಾಡಿರುವ ಹಿಮಂತ ಬಿಸ್ವಾ ಶರ್ಮಾ, “ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ ಚಂಪೈ ಸೊರೇನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಲ್ಪ ಸಮಯದ ಹಿಂದೆ ಭೇಟಿಯಾದರು. ಚಂಪೈ ಸೊರೇನ್ ಅವರು ಅಧಿಕೃತವಾಗಿ ಆಗಸ್ಟ್ 30ರಂದು ರಾಂಚಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಹಿಂದೆ ಶರ್ಮಾ ಅವರು ಸೋಮವಾರ ರಾಂಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಚಂಪೈ ಅವರು ಬಿಜೆಪಿಗೆ ಸೇರಬೇಕೆಂದು ತಾನು ಬಯಸುವುದಾಗಿ ಹೇಳಿದ್ದರು.

“ಚಂಪೈ ಸೋರೆನ್ ಬಿಜೆಪಿ ಸೇರಬೇಕೆಂದು ನಾನು ಬಯಸುತ್ತೇನೆ. ಈಗ ಅವರು ದೆಹಲಿಯಲ್ಲಿದ್ದಾರೆ . ನೋಡೋಣ, ಅವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತೇನೆ. ನಾನು ಅವರೊಂದಿಗೆ ಕಳೆದ 5-6 ತಿಂಗಳಿಂದ ಮಾತುಕತೆ ನಡೆಸುತ್ತಿದ್ದೆ. ಆದರೆ ಅದು ರಾಜಕೀಯವಾಗಿರಲಿಲ್ಲ. ಆದರೆ ಈಗ ಕೆಲವು ರಾಜಕೀಯ ವಿಚಾರ ಮಾತನಾಡುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಚಂಪೈ ಸೊರೇನ್ ಪ್ರಸ್ತುತ ಹೇಮಂತ್ ಸೊರೆನ್ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೂ ಜೆಎಂಎಂ ಮತ್ತು ತನ್ನ ಸಚಿವ ಸ್ಥಾನ ಎರಡಕ್ಕೂ ರಾಜೀನಾಮೆ ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...