ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆಂಧ್ರ ಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರು ಸಿಎಂ ಮತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ
ಇವರ ಜೊತೆ 23 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದವರಲ್ಲಿ 30 ಟಿಡಿಪಿ ಹಾಗೂ ಮೂವರು ಜನಸೇನಾ ಪಕ್ಷದ ಶಾಸಕರಾಗಿದ್ದಾರೆ. ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸೇರಿ ಗರಿಷ್ಠ 26 ಮಂದಿ ಸಚಿವರಾಗಬಹುದು.
ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟದ ಸಹೋದ್ಯೋಗಿಗಳಾದ ಅಮಿತ್ ಶಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ ಸೇರಿದಂತೆ ಹಲವಾರು ನಾಯಕರು ಮತ್ತು ಪ್ರಮುಖರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಒಟ್ಟು 175 ವಿಧಾನಸಭೆ ಸದಸ್ಯರಲ್ಲಿ ಟಿಡಿಪಿ 135, ಜನಸೇನಾ 21 ಹಾಗೂ ವೈಎಸ್ ಆರ್ ಕಾಂಗ್ರೆಸ್ 11 ಸ್ಥಾನಗಳನ್ನು ಮಾತ್ರ ಗೆದ್ದಿತ್ತು.
