ಜೂ.12 ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ

Date:

Advertisements

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಆದರೆ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಜೂ.8 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿಂದ ನಾಯ್ಡು ಅವರು ಪ್ರಮಾಣ ವಚನ ದಿನಾಂಕವನ್ನು ಮುಂದೂಡಿದ್ದಾರೆ. ನರೇಂದ್ರ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, 17ನೇ ಲೋಕಸಭೆಯನ್ನು ರಾಷ್ಟ್ರಪತಿ ಅವರು ವಿಸರ್ಜಿಸಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಪಕ್ಷ ಟಿಡಿಪಿ ಅಭೂತಪೂರ್ವ ಯಶಸ್ಸು ಗಳಿಸಿದ್ದು, ಲೋಕಸಭೆಯಲ್ಲೂ 16 ಸ್ಥಾನ ಗೆಲ್ಲುವುದರೊಂದಿಗೆ ಎನ್‌ಡಿಎ ಒಕ್ಕೂಟದಲ್ಲಿ ಕಿಂಗ್‌ ಮೇಕರ್‌ಗಳಲ್ಲಿ ಪ್ರಮುಖ ಪಕ್ಷವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ಬಿಜೆಪಿ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗಳನ್ನು ಗಳಿಸುವಲ್ಲಿ ವಿಫಲವಾದ ಕಾರಣ ಟಿಡಿಪಿ ಹಾಗೂ ಜೆಡಿಯು ಕೇಂದ್ರದ ನೂತನ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾತ್ರವಹಿಸಲಿವೆ. ಸುದ್ದಿಗಾರರೊಂದಿಗೆ ಮಾತನಾಡಿದ್ದ ಚಂದ್ರಬಾಬು ನಾಯ್ಡು ತಾವು ಎನ್‌ಡಿಎದಲ್ಲಿ ಉಳಿಯುವುದಾಗಿ ತಿಳಿಸಿದ್ದರು.

175 ಸದಸ್ಯ ಬಲದ ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ತೆಲುಗು ದೇಶಂ ಪಕ್ಷ 135 ಸ್ಥಾನದೊಂದಿಗೆ ಅಭೂತಪೂರ್ವ ಜಯ ಸಾಧಿಸಿದರೆ, ಪವನ್‌ ಕಲ್ಯಾಣ್ ನೇತೃತ್ವದ ಮಿತ್ರಪಕ್ಷ ಜನಸೇನಾ 21 ಸ್ಥಾನಗಳಲ್ಲಿ ಗೆಲುವುಗಳಿಸಿದೆ. ಬಿಜೆಪಿ 8 ಸ್ಥಾನಗಳನ್ನು ಪಡೆದರೆ, ಆಡಳಿತರೂಢ ವೈಎಸ್‌ಆರ್‌ಸಿಪಿ ಕೇವಲ 11 ಸ್ಥಾನಗಳಲ್ಲಿ ಜಯಗಳಿಸಿತ್ತು.

ಹೊಸ ಸರ್ಕಾರದಲ್ಲಿ ಚಂದ್ರಬಾಬು ನಾಯ್ಡು ಲೋಕಸಭೆಯ ಸ್ಪೀಕರ್‌ ಸ್ಥಾನ ಸೇರಿದಂತೆ ಪ್ರಮುಖ ಖಾತೆಗಳನ್ನು ಕೇಳುವ ಸಾಧ್ಯತೆಯಿದೆ. ಮೂಲಗಳಂತೆ 7 ಸಂಪುಟ ದರ್ಜೆ ಹಾಗೂ ಒಂದು ರಾಜ್ಯ ಖಾತೆಗಳನ್ನು ತಮ್ಮ ಪಕ್ಷಕ್ಕೆ ನೀಡುವಂತೆ ಕೇಳುವ ಸಾಧ್ಯತೆಯಿದೆ. ಇವುಗಳಲ್ಲಿ ರಸ್ತೆ ಸಾರಿಗೆ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ನಗರಾಭಿವೃದ್ಧಿ ಸೇರಿವೆ. ಜನಸೇನಾ ಕೂಡ ಐಟಿ, ಶಿಕ್ಷಣ ಮತ್ತು ರಾಜ್ಯ ಖಾತೆಯ ಹಣಕಾಸು ಖಾತೆ ನೀಡುವಂತೆ ಪಟ್ಟು ಹಿಡಿಯಲಿದೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X