ಚಂದ್ರಯಾನ 3: ವಿಕ್ರಮ್, ಪ್ರಗ್ಯಾನ್‌ನಿಂದ ಇನ್ನೂ ಯಾವುದೇ ಸಿಗ್ನಲ್ ಬಂದಿಲ್ಲ ಎಂದ ಇಸ್ರೋ

Date:

ಚಂದ್ರನ ದಕ್ಷಿಣ ಧ್ರುವದಲ್ಲಿ ನಿಂತಿರುವ ಚಂದ್ರಯಾನ 3 ಯೋಜನೆಯ ಭಾಗವಾದ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಗ್ಯಾನ್‌ ರೋವರ್‌ಗಳಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.

- Advertisement -

ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಗ್ಯಾನ್‌ ರೋವರ್‌ಗಳಿಂದ ಈ ಕ್ಷಣದವರೆಗೂ ಯಾವುದೇ ಸಿಗ್ನಲ್‌ಗಳು ಬಂದಿಲ್ಲ, ಸಂಪರ್ಕವನ್ನು ಮರುಸ್ಥಾಪಿಸಲು ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್‌ ಮತ್ತು ಕಮಾಂಡ್‌ ಸೆಂಟರ್‌ನಿಂದ ಈಗಾಗಲೇ ವಿಕ್ರಮ್‌ ಲ್ಯಾಂಡರ್‌ ಹಾಗೂ ಪ್ರಗ್ಯಾನ್‌ ರೋವರ್‌ಗೆ ತನ್ನ ಕಮಾಂಡ್‌ಅನ್ನು ನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿರುವ ಇವೆರಡಕ್ಕೂ ಕಮಾಂಡ್‌ ತಲುಪಿದೆಯೇ, ಅವು ಎಚ್ಚರಗೊಂಡ ಸ್ಥಿತಿಯಲ್ಲಿವೆಯೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ಈವರೆಗೂ ಅವರಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ. ಸಂಪರ್ಕ ಸಾಧಿಸುವ ಎಲ್ಲ ಪ್ರಯತ್ನಗಳು ಮುಂದುವರಿಯಲಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಯುಪಿಯ ಸರ್ಕಾರ ಒಬಿಸಿ ಕೋಟಾ ಸೇರಿಸದಿರುವುದಕ್ಕೆ ವಿಷಾದವಿದೆ: ರಾಹುಲ್‌ ಗಾಂಧಿ

14 ದಿನಗಳ ರಾತ್ರಿಯ ನಂತರ, ಸೂರ್ಯನ ಬೆಳಕು ಮತ್ತೊಮ್ಮೆ ಚಂದ್ರನ ದಕ್ಷಿಣ ಧ್ರುವವನ್ನು ತಲುಪಲು ಪ್ರಾರಂಭಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಸ್ಲೀಪ್ ಮೋಡ್‌ನಲ್ಲಿ ಇರಿಸಲಾದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಎಚ್ಚರಗೊಳಿಸುವ ಭರವಸೆಯನ್ನು ಇಸ್ರೋ ಹಂದಿತ್ತು. ಸೆಪ್ಟೆಂಬರ್ 4 ರಂದು ಇಸ್ರೋ ಲ್ಯಾಂಡರ್ ಅನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಿತ್ತು. ಮೊದಲು ಸೆಪ್ಟೆಂಬರ್ 2 ರಂದು ರೋವರ್ ಅನ್ನು ಸ್ಲೀಪ್ ಮೋಡ್‌ಗೆ ಹಾಕಲಾಯಿತು. ಇಸ್ರೋ ಲ್ಯಾಂಡರ್-ರೋವರ್‌ನ ರಿಸೀವರ್‌ಗಳನ್ನು ಚಾಲ್ತಿಯಲ್ಲಿ ಇರಿಸಿದೆ.

ಒಂದು ವೇಳೆ ವಿಕ್ರಮ್ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್ ಸಿಗ್ನಲ್ ಕಳಿಸದೇ ಇದ್ದಲ್ಲಿ, ಭಾರತದ ಬಹುನಿರೀಕ್ಷಿತ ಚಂದ್ರಯಾನ-3 ಯೋಜನೆ ಇಲ್ಲಿಗೆ ಕೊನೆಯಾಗಲಿದೆ ಎಂದು ಇಸ್ರೋ ಈ ಮೊದಲೇ ತಿಳಿಸಿತ್ತು.

ಚಂದ್ರಯಾನ-3 ಅನ್ನು 14 ಜುಲೈ 2023 ರಂದು ಮಧ್ಯಾಹ್ನ 2.35 ಕ್ಕೆ ಉಡಾವಣೆ ಮಾಡಲಾಗಿತ್ತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಲ್‌ಟಿಎಂ 3 ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಕಳುಹಿಸಲಾಯಿತು. ಆಗಸ್ಟ್ 23 ರಂದು, ಅದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಿತು. ಈ ಮೂಲಕ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್‌ಅನ್ನು ಇಳಿಸಿದ ಮೊದಲ ದೇಶ ಎನಿಸಿಕೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...