ವಿದೇಶಾಂಗ ನೀತಿ ಬದಲಿಸಿ, ಇತರ ದೇಶಗಳಿಂದ LPG ತರಿಸಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

Date:

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಎಲ್‌ಪಿಜಿ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ವಿದೇಶಾಂಗ ನೀತಿಗಳಲ್ಲಿ ಬದಲಾವಣೆ ತಂದು, ಅನಿಲ ಲಭ್ಯವಿರುವ ಇತರ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅನಿಲ ಲಭ್ಯವಿಲ್ಲದಿದ್ದರೂ ಲಭ್ಯವಿದೆ ಎಂದು ಸುಳ್ಳು ಹೇಳುವುದು ಸರಿಯಲ್ಲ. ಎಲ್ಲಿ ತಪ್ಪಾಗಿದೆಯೋ ಅದನ್ನು ಸರಿಪಡಿಸಿಕೊಳ್ಳಬೇಕು. ಇದೊಂದು ದೊಡ್ಡ ಬಿಕ್ಕಟ್ಟು, ಇದನ್ನು ಸರಿಯಾಗಿ ನಿಭಾಯಿಸದಿದ್ದರೆ ಇಡೀ ದೇಶ ಸಂಕಷ್ಟಕ್ಕೆ ಸಿಲುಕಲಿದೆ. ಇದು ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಈಗಾಗಲೇ ಅನಿಲದ ಅಭಾವದಿಂದಾಗಿ ಸಣ್ಣ ಹೋಟೆಲ್‌ಗಳು ಮತ್ತು ಅನೇಕ ಕಾರ್ಖಾನೆಗಳು ಮುಚ್ಚಲ್ಪಟ್ಟಿದ್ದು, ಸಾಮಾನ್ಯ ಜನರ ಜೀವನದ ಮೇಲೆ ಹೊಡೆತ ಬಿದ್ದಿದೆ. ಭಾರತವು ಇತರ ದೇಶಗಳೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗ ಪರ್ಯಾಯ ಮಾರ್ಗಗಳ ಮೂಲಕ ಅನಿಲವನ್ನು ಸಂಗ್ರಹಿಸಲು ಮುಂದಾಗಬೇಕು. ಯುದ್ಧ ಮುಂದುವರಿಯುತ್ತಿರುವುದರಿಂದ ಭವಿಷ್ಯದಲ್ಲಿ ಎಲ್‌ಪಿಜಿ ಕೊರತೆಯು ದೊಡ್ಡ ಸಮಸ್ಯೆಯಾಗಿ ಪರಿಣಮಿಸಲಿದೆ, ಆದ್ದರಿಂದ ನಾವು ಮುಂದಿನ ಕ್ರಮಗಳ ಬಗ್ಗೆ ಈಗಲೇ ಯೋಚಿಸಬೇಕು” ಎಂದಿದ್ದಾರೆ.

“ಇದೇ ಕಾರಣಕ್ಕೆ ನಾನು ಸಂಸತ್ತಿನಲ್ಲಿ ನಿಯಮ 176ರ ಅಡಿಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲು ಸಮಯ ಕೋರಿದ್ದೆ. ಸದನದ ಸದಸ್ಯರೆಲ್ಲರೂ ಈ ಬಗ್ಗೆ ಚರ್ಚಿಸಿ ದೇಶದ ಹಿತದೃಷ್ಟಿಯಿಂದ ಯಾವುದು ಒಳ್ಳೆಯದು ಎಂಬ ಅಭಿಪ್ರಾಯ ನೀಡುತ್ತಿದ್ದರು. ಆದರೆ, ಸರ್ಕಾರವು ನಿಯಮ 176ಕ್ಕೆ ಯಾವುದೇ ಗೌರವ ನೀಡಲಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ತಾವು ಈ ವಿಷಯದ ಬಗ್ಗೆ ಎರಡು ಬಾರಿ ಮಾತನಾಡಿದ್ದರೂ, ಸರ್ಕಾರ ಮಾತ್ರ ಕೇಳಿಸಿಕೊಳ್ಳಲು ಸಿದ್ಧವಿಲ್ಲ ಎಂದು ಖರ್ಗೆ ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ,...