ಕ್ಯಾಮೆರಾ ಆ್ಯಂಗಲ್‌ ಅಲ್ಲ, ಹೃದಯದ ಆ್ಯಂಗಲ್‌ ಬದಲಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಟಾಂಗ್

Date:

ಇನ್‌ಸ್ಟಾಗ್ರಾಂ ವಿಡಿಯೊಗಳಲ್ಲಿ ಕ್ಯಾಮೆರಾ ಆ್ಯಂಗಲ್‌ ಬದಲಿಸಿದರೆ ಸಾಲದು, ಹೃದಯದ ಆ್ಯಂಗಲ್‌ ಬದಲಾಗಬೇಕು. ಆಗ ಮಾತ್ರ ನೀವು ಈ ದೇಶದ ಯುವಕರ ವಿಶ್ವಾಸವನ್ನು ಗಳಿಸಲು ಸಾಧ್ಯ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement -

ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ-2026 ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ಶಿಕ್ಷಣ ವ್ಯವಸ್ಥೆಯ ಕುರಿತು ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

“ಪ್ರಧಾನಿ ಬದಲಿಸಬೇಕಿರುವುದು ಕ್ಯಾಮೆರಾ ಆ್ಯಂಗಲ್‌ ಅಲ್ಲ, ‘ಹೃದಯದ ಆ್ಯಂಗಲ್‌’. ಈ ತಲೆಮಾರಿನ ಯುವಕರು ಸುಳ್ಳನ್ನು ಗುರುತಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರ ವಿಶ್ವಾಸ ಗೆಲ್ಲಬೇಕಾದರೆ ಸತ್ಯದ ಪರವಾಗಿ ನಿಲ್ಲಬೇಕು. ನಿಮ್ಮ ಸರ್ಕಾರದ ಅವಧಿಯಲ್ಲಿ ಈ ತಲೆಮಾರಿಗೆ ಗಂಭೀರ ಅನ್ಯಾಯವಾಗಿದೆ. ವಿದ್ಯಾರ್ಥಿಗಳನ್ನು ರಸ್ತೆಗಳಿಂದ ತೆರವುಗೊಳಿಸಬಹುದು. ಆದರೆ ಅವರು ಎತ್ತಿರುವ ಪ್ರಶ್ನೆಗಳನ್ನು ಅಳಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ದೆಹಲಿ ಜಂತರ್‌ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಅಶ್ರುವಾಯು, ಲಾಠಿಚಾರ್ಜ್‌, ಪೆಲೆಟ್‌ ಗನ್‌ ಹಾಗೂ ಎಕೆ-47 ಬಳಸುವ ಅಗತ್ಯವೇನಿತ್ತು ಎಂದು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಪ್ರಶ್ನಿಸಿದ ಅವರು, ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್‌ ಗನ್‌ ಬಳಕೆಗೆ ಅನುಮತಿ ನೀಡಿದ್ದು ಯಾರು ಎಂಬುದಕ್ಕೆ ಗೃಹ ಸಚಿವರು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಸೋಮವಾರ ಸಂಸತ್‌ ಆವರಣದಲ್ಲಿ ಬಿಜೆಪಿ ನಾಯಕರು ಹಾರ ಹಾಕಿ ಸ್ವಾಗತ ಕೋರಿದ್ದನ್ನು ಟೀಕಿಸಿದ ಪ್ರಿಯಾಂಕಾ, “ಒಬ್ಬ ಸೂಪರ್‌ಸ್ಟಾರ್‌ಗೆ ನೀಡುವ ರೀತಿಯಲ್ಲಿ ಅವರಿಗೆ ಸ್ವಾಗತ ನೀಡಲಾಯಿತು. ಅದೇ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ನೊಂದ ವಿದ್ಯಾರ್ಥಿನಿಯೊಬ್ಬಳ ಕುಟುಂಬ ಆತ್ಮಹತ್ಯೆಯ ದುಃಖದಲ್ಲಿತ್ತು. ದೇಶದ ಕೋಟ್ಯಂತರ ವಿದ್ಯಾರ್ಥಿಗಳಿಗೆ ನಿಮ್ಮ ಸರ್ಕಾರ ಯಾವ ಸಂದೇಶ ನೀಡಿದೆ? ಇದರಲ್ಲಿ ಸಂಭ್ರಮಿಸುವಂತಹದ್ದು ಏನಿದೆ?” ಎಂದು ಪ್ರಶ್ನಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದು, ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಇದರಿಂದ ಬಾಧಿತರಾಗಿದ್ದಾರೆ. ಆದರೂ ಶಿಕ್ಷಣ ಮಾಫಿಯಾದ ಒಬ್ಬ ವ್ಯಕ್ತಿಗೂ ಅಸ್ತಿತ್ವದಲ್ಲಿರುವ ಕಾನೂನಿನಡಿ ಇದುವರೆಗೆ ಶಿಕ್ಷೆಯಾಗಿಲ್ಲ. ಈಗ ತರಲಾಗಿರುವ ತಿದ್ದುಪಡಿ ಮಸೂದೆಯಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಯಾವುದೇ ಪರಿಣಾಮಕಾರಿ ಕ್ರಮಗಳಿಲ್ಲ. ಇಂತಹ ಮಸೂದೆಯಿಂದ ದೇಶದ ಯುವಕರ ವಿಶ್ವಾಸವನ್ನು ಹೇಗೆ ಮರುಸ್ಥಾಪಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ಇದೇ ವೇಳೆ, ಶಿಕ್ಷಣ ವ್ಯವಸ್ಥೆಯಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದವರನ್ನು ಮಾತ್ರ ನೇಮಕ ಮಾಡುವ ಬದಲು ಅರ್ಹತೆ, ಶಿಕ್ಷಣ, ಪ್ರಗತಿಪರ ಚಿಂತನೆ ಮತ್ತು ವಿಶಾಲ ಮನೋಭಾವ ಹೊಂದಿರುವ ವ್ಯಕ್ತಿಗಳಿಗೆ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕಾ ಸಲಹೆ ನೀಡಿದರು.

ಇದನ್ನೂ ಓದಿ: ಸಿಜೆಪಿ ಪ್ರತಿಭಟನಾ ಸ್ಥಳದಲ್ಲಿ ಕಲ್ಲು ತುಂಬಿದ್ದ ಲಾರಿ: ದೆಹಲಿ ಪೊಲೀಸರ ಕಥೆಯಲ್ಲಿನ ಹುಳುಕು ಬಯಲು

ಲೋಕಸಭೆಯಲ್ಲಿ “ಕ್ಯಾಮೆರಾ ಆ್ಯಂಗಲ್‌ ಅಲ್ಲ, ಹೃದಯದ ಆ್ಯಂಗಲ್‌ ಬದಲಾಗಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಈ ಹೇಳಿಕೆ ಹೊಸದೇನಲ್ಲ. ಕಳೆದ ಒಂದು ದಶಕದಿಂದ ಪ್ರಧಾನಿ ಮೋದಿ ಅವರ “56 ಇಂಚಿನ ಎದೆ” ಎಂದು ಬೀಗುವುದನ್ನು ಪ್ರಶ್ನಿಸುತ್ತಲೇ ಬಂದಿದ್ದಾರೆ.

2014ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ತಮ್ಮ ನಾಯಕತ್ವ, ಧೈರ್ಯ ಮತ್ತು ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ “56 ಇಂಚಿನ ಎದೆ” ಎಂಬ ಪದಪ್ರಯೋಗವನ್ನು ರಾಜಕೀಯವಾಗಿ ಜನಪ್ರಿಯಗೊಳಿಸಿದ್ದರು. ಆ ಹೇಳಿಕೆ ಬಿಜೆಪಿ ಚುನಾವಣಾ ಪ್ರಚಾರದ ಪ್ರಮುಖ ಸಂಕೇತವಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ 2014ರ ಏಪ್ರಿಲ್‌ನಲ್ಲಿ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಪ್ರಿಯಾಂಕಾ ಗಾಂಧಿ, “ದೇಶವನ್ನು ನಡೆಸಲು 56 ಇಂಚಿನ ಎದೆ ಬೇಕಾಗಿಲ್ಲ; ದೊಡ್ಡ ಹೃದಯ ಬೇಕು. ಜನರ ಕಷ್ಟಗಳನ್ನು ಅರ್ಥಮಾಡಿಕೊಳ್ಳುವ ಸಂವೇದನೆ ಬೇಕು” ಎಂದು ತಿರುಗೇಟು ನೀಡಿದ್ದರು.

ಬಳಿಕ 2019ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲೂ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಇದೇ ವಿಷಯವನ್ನು ಮತ್ತೆ ಪ್ರಸ್ತಾಪಿಸಿದ್ದರು. “ನೀವು 56 ಇಂಚಿನ ಎದೆಯ ಬಗ್ಗೆ ಹೆಮ್ಮೆಪಡುತ್ತೀರಿ. ಆದರೆ ನಿಮ್ಮ ಹೃದಯ ಎಲ್ಲಿದೆ? ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಯುವಕರು ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ, ಮಹಿಳೆಯರು ಸುರಕ್ಷಿತರಾಗಿಲ್ಲ. ಅವರ ನೋವನ್ನು ಅರ್ಥಮಾಡಿಕೊಳ್ಳುವ ಹೃದಯ ನಿಮ್ಮಲ್ಲಿ ಕಾಣುತ್ತಿಲ್ಲ” ಎಂದು ಟೀಕಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪರಿಸರ ನಿಯಮ ಉಲ್ಲಂಘನೆ: 8 ಕಾರ್ಖಾನೆಗಳ ಬಂದ್‌ಗೆ ನಿರ್ಧಾರ

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳ...

ಔರಾದ್‌ | ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಔರಾದ್ ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಅಂಗಡಿ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...