ಇಸ್ಲಾಮ್‌ಪುರ ಶ್ರೀರಾಮಪುರವೆಂದು ಬದಲಾವಣೆ: ಹಿಂದೂಗಳು ಸೇರಿ ಸ್ಥಳೀಯರ ವಿರೋಧ

Date:

ರಾಜಸ್ಥಾನದ ಜುಂಜುನು ಜಿಲ್ಲೆಯ ವ್ಯಾಪ್ತಿಗೆ ಬರುವ ಇಸ್ಲಾಮ್‌ಪುರ ಗ್ರಾಮದ ಹೆಸರನ್ನು ‘ಶ್ರೀರಾಮಪುರ’ ಎಂದು ಮರುನಾಮಕರಣ ಮಾಡಲು ಸರ್ಕಾರ ಮುಂದಾಗಿರುವ ಕ್ರಮಕ್ಕೆ ಸ್ಥಳೀಯ ಮಟ್ಟದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ ನಿರ್ಧಾರವನ್ನು ಕೇವಲ ಮುಸ್ಲಿಂ ಸಮುದಾಯ ಮಾತ್ರವಲ್ಲದೆ, ಗ್ರಾಮದ ಬಹುಸಂಖ್ಯಾತ ಹಿಂದೂ ನಿವಾಸಿಗಳೂ ಸೇರಿ ಒಟ್ಟಾಗಿ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರು ಬೀದಿಗಿಳಿದು 15 ಕಿ.ಮೀ. ಪಾದಯಾತ್ರೆ ನಡೆಸಿದ್ದಾರೆ.

- Advertisement -

ಇಸ್ಲಾಮ್‌ಪುರದಲ್ಲಿ ದಶಕಗಳಿಂದಲೂ ಎರಡೂ ಸಮುದಾಯಗಳು ಅತ್ಯಂತ ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಇದೀಗ ಬಿಜೆಪಿಯ ರಾಜಕೀಯ ಲಾಭಕ್ಕಾಗಿ ಗ್ರಾಮದ ಹೆಸರನ್ನು ಬದಲಾಯಿಸಿ ಸೌಹಾರ್ದತೆಯನ್ನು ಕೆಡಿಸಲು ಯತ್ನಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆಸರು ಬದಲಾಯಿಸುವ ಪ್ರಸ್ತಾಪದ ವಿರುದ್ಧ ಗ್ರಾಮಸ್ಥರು ಒಟ್ಟಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಇದನ್ನೂ ಓದಿ: ಮನರೇಗಾ ಹೆಸರು ಬದಲಾವಣೆ ವಿರುದ್ಧ ಅಭಿಯಾನ: ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಘೋಷಣೆ

ಹಾಗೆಯೇ ಇಸ್ಲಾಮ್‌ಪುರ ಎಂಬ ಹೆಸರು ಈ ಭಾಗದ ಇತಿಹಾಸ ಮತ್ತು ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿದೆ. ಇದನ್ನು ಬದಲಾಯಿಸುವುದರಿಂದ ಗ್ರಾಮದ ಮೂಲ ಗುರುತು ನಾಶವಾಗುತ್ತದೆ. ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈ ಹೆಸರು ಬದಲಾವಣೆ ಪ್ರಕ್ರಿಯೆಯು ಅನಗತ್ಯವಾಗಿ ಕೋಮು ಧ್ರುವೀಕರಣಕ್ಕೆ ಕಾರಣವಾಗಬಹುದು ಎಂದು ಸ್ಥಳೀಯ ಹಿಂದೂಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ “ನಮಗೆ ಗ್ರಾಮದ ಹೆಸರು ಬದಲಾಗುವುದು ಬೇಡ, ಬದಲಿಗೆ ರಸ್ತೆ, ಕುಡಿಯುವ ನೀರು, ಶಾಲೆ ಮತ್ತು ಆಸ್ಪತ್ರೆಗಳಂತಹ ಮೂಲಸೌಕರ್ಯಗಳ ಅಭಿವೃದ್ಧಿಯಾಗಬೇಕು” ಎಂದು ಸ್ಥಳೀಯ ಯುವಕರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ದೈನಿಕ್ ಭಾಸ್ಕರ್ ಮತ್ತು ರಾಜಸ್ಥಾನ್ ಪತ್ರಿಕಾ ಎಂಬ ಸ್ಥಳೀಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಗ್ರಾಮದ ಸರಪಂಚ್ ಅಮೀನ್ ಮಣಿಯಾರ್, “ನಮ್ಮ ಊರಿನ ಹೆಸರಿನಿಂದ ನಮಗೆ ಯಾವುದೇ ಸಮಸ್ಯೆಯಿಲ್ಲ. ಶ್ರೀರಾಮನ ಹೆಸರನ್ನು ನಾವು ಗೌರವಿಸುತ್ತೇವೆ, ಆದರೆ ರಾಜಕೀಯ ಕಾರಣಗಳಿಗಾಗಿ ನಮ್ಮ ಊರಿನ ಹಳೆಯ ಹೆಸರನ್ನು ಬದಲಾಯಿಸಿ ಸೌಹಾರ್ದತೆ ಹಾಳು ಮಾಡುವುದನ್ನು ನಾವು ಒಪ್ಪುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಿಂದ ಊರುಗಳ ಹೆಸರು ಬದಲಾವಣೆ ರಾಜಕೀಯ

ಈ ಹಿಂದೆಯೂ ಬಿಜೆಪಿ ಸ್ಥಳೀಯವಾಗಿ ಹಿಂದೂ ಮುಸ್ಲಿಮರ ನಡುವೆ ಉದ್ವಿಗ್ನತೆ ಸೃಷ್ಟಿಸಿ, ಊರುಗಳ ಹೆಸರನ್ನು ಬದಲಾವಣೆ ಮಾಡಿದೆ. ಅಲಹಾಬಾದ್ ಅನ್ನು ಪ್ರಯಾಗ್‌ರಾಜ್ ಎಂದು, ಫೈಜಾಬಾದ್ ಅನ್ನು ಅಯೋಧ್ಯೆ ಎಂದು ಬದಲಾಯಿಸಿದೆ. ಮೊಘಲ್‌ಸರಾಯ್ ರೈಲ್ವೆ ನಿಲ್ದಾಣವನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನಗರವೆಂದು, ಔರಂಗಾಬಾದ್ ಅನ್ನು ಛತ್ರಪತಿ ಸಂಭಾಜಿನಗರ, ಉಸ್ಮಾನಾಬಾದ್ ಅನ್ನು ಧಾರಾಶಿವ್, ಹೊಸಂಗಾಬಾದ್ ಅನ್ನು ನರ್ಮದಾಪುರಂ ಹೀಗೆ ಮೊಘಲ್ ಆಡಳಿತದಿಂದಲೂ ಇದ್ದ ಹೆಸರನ್ನೂ ಬದಲಾಯಿಸಿಕೊಳ್ಳುತ್ತಾ ಬಂದಿದೆ. ಗುಜರಾತ್‌ನ ಅಹಮದಾಬಾದ್ ಅನ್ನು ‘ಕರ್ಣಾವತಿ’ ಎಂದೂ, ತೆಲಂಗಾಣದ ಹೈದರಾಬಾದ್ ಅನ್ನು ‘ಭಾಗ್ಯನಗರ’ ಎಂದೂ ಬದಲಾಯಿಸುವ ಚರ್ಚೆಯೂ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ ಗೋವಾದ 97 ಅರ್ಹರ ಹೆಸರು!

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ...

ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅತಿ ದೊಡ್ಡ ದೇಶದ್ರೋಹಿ ಎಂಬುದು ಬಹಿರಂಗವಾಗಿದೆ....

ಗ್ಯಾನೇಶ್‌ ಕುಮಾ‌ರ್ – ಮೇಧಾ ರೂಪಂ: ತಪ್ಪು ಕಾರಣಗಳಿಗಾಗಿ ಸುದ್ದಿಯ ಸುಳಿಯಲ್ಲಿ ಐಎಎಸ್ ಅಪ್ಪ-ಮಗಳ ಜೋಡಿ

ಉನ್ನತ ಸಾಂವಿಧಾನಿಕ ಹಾಗೂ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿರುವ ಐಎಎಸ್ ಅಧಿಕಾರಿಗಳಾದ ಅಪ್ಪ–ಮಗಳ...