ಚಾರ್ ಧಾಮ್ ಯಾತ್ರೆ: 16 ದಿನಗಳಲ್ಲಿ 58 ಯಾತ್ರಿಕರು ಸಾವು

Date:

ವಿಶ್ವವಿಖ್ಯಾತ ಚಾರ್ ಧಾಮ್ ಯಾತ್ರೆ ಆರಂಭವಾದ ಈ 16 ದಿನಗಳಲ್ಲಿ 58 ಯಾತ್ರಿಕರು ಸಾವನ್ನಪ್ಪಿದ್ದು ಈ ಪೈಕಿ ಹೆಚ್ಚಿನ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಕ್ತರ ಆರೋಗ್ಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಹೆಚ್ಚು ಕಟ್ಟುನಿಟ್ಟಾಗಿ ಸ್ಕ್ರೀನಿಂಗ್ ನಡೆಸುತ್ತಿದೆ ಎಂದು ಉತ್ತರಾಖಂಡದ ಆರೋಗ್ಯ ಇಲಾಖೆ ತಿಳಿಸಿದೆ.

ಚಾರ್ ಧಾಮ್ ಯಾತ್ರೆ ಆರಂಭವಾದ 16 ದಿನಗಳಲ್ಲಿ, 50 ವರ್ಷಕ್ಕಿಂತ ಮೇಲ್ಪಟ್ಟ 40 ಯಾತ್ರಿಗಳು ಸೇರಿ ಒಟ್ಟು 58 ಯಾತ್ರಿಕರು ಮೃತಪಟ್ಟಿದ್ದಾರೆ. ಈ ಪೈಕಿ ಹೃದಯಾಘಾತ ಮತ್ತು ಪಲ್ಮನರಿ ಎಡಿಮಾ ಕಾರಣ 47 ಯಾತ್ರಿಕರು ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ?  ಚಾರ್‌ ಧಾಮ್ ಯಾತ್ರೆ| ಯಾತ್ರಿಕರ ಸಂಖ್ಯೆ ದುಪ್ಪಟ್ಟು; ಮೊದಲ ಐದು ದಿನಗಳಲ್ಲಿ 11 ಸಾವು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಮಾಹಿತಿ ನೀಡಿದ ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ, “52 ಯಾತ್ರಾರ್ಥಿಗಳ ಸಾವನ್ನು ದೃಢಪಡಿಸಿದ್ದಾರೆ. ಮೃತರ ಪೈಕಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಯಾತ್ರಾ ಮಾರ್ಗದಲ್ಲಿ ನಿಯಮಿತವಾಗಿ ಯಾತ್ರಾರ್ಥಿಗಳ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

2023ರಲ್ಲಿ, ಚಾರ್‌ಧಾಮ್ ಯಾತ್ರೆಯಲ್ಲಿ ಸಾವಿನ ಸಂಖ್ಯೆ 250ಕ್ಕೆ ಏರಿಕೆಯಾಗಿದ್ದು ಪ್ರತಿ ಲಕ್ಷಕ್ಕೆ 4.5 ಅನುಪಾತದಲ್ಲಿತ್ತು. 2022ರಲ್ಲಿ ಸಾವಿನ ಅನುಪಾತವು ಪ್ರತಿ ಲಕ್ಷಕ್ಕೆ 7.5 ಆಗಿತ್ತು. ಇನ್ನು ಯಾತ್ರಿಕರ ಸಂಖ್ಯೆ ದುಪ್ಪಟ್ಟಾದ ಕಾರಣದಿಂದಾಗಿ ಮೊದಲ ಐದು ದಿನಗಳಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಯನಾಡ್‌ನಲ್ಲಿ ಪ್ರಿಯಾಂಕಾ ಸ್ಪರ್ಧೆ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೇಲಿ

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ...

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ...

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...