ಶರ್ಟ್‌ ಗುಂಡಿಯೇ ಕ್ಯಾಮೆರಾ, ಕಿವಿಯಲ್ಲಿತ್ತು ಇಯರ್‌ಬಡ್‌: ಪರೀಕ್ಷಾ ಕೊಠಡಿಯಲ್ಲಿ ಬಯಲಾದ ‘ಚಾಟ್‌ಜಿಪಿಟಿ’ ಕಳ್ಳಾಟ

Date:

ಕೇಂದ್ರ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಗೆ ನಕಲು ಮಾಡಲು ನೆರವಾಗುತ್ತಿದ್ದ ಬೃಹತ್ ಹೈಟೆಕ್ ಜಾಲವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಅಚ್ಚರಿಯೆಂದರೆ, ಈ ಬೃಹತ್ ಜಾಲದ ರೂವಾರಿ ಸ್ವತಃ ಓರ್ವ ಸರ್ಕಾರಿ ಉದ್ಯೋಗಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿ ಒಟ್ಟು ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮೇ 26ರಂದು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ನೇಮಕಾತಿ ಪರೀಕ್ಷೆಯ ವೇಳೆ ಇಬ್ಬರು ಅಭ್ಯರ್ಥಿಗಳು ನಕಲು ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಆರು ‘ಕೆಳಹಂತದ ಗುಮಾಸ್ತ’ (LDC) ಹುದ್ದೆಗಳ ಭರ್ತಿಗಾಗಿ ನಡೆದಿದ್ದ ಈ ಪರೀಕ್ಷೆಯಲ್ಲಿ ಸುಮಾರು 256 ಅಭ್ಯರ್ಥಿಗಳು ಭಾಗವಹಿಸಿದ್ದರು. ಸಿಕ್ಕಿಬಿದ್ದ ಇಬ್ಬರು ಅಭ್ಯರ್ಥಿಗಳನ್ನು ವಿಚಾರಣೆಗೆ ಒಳಪಡಿಸಿ ತನಿಖೆ ಆರಂಭಿಸಿದಾಗ, ಇದೊಂದು ಬೃಹತ್ ಸಂಘಟಿತ ಜಾಲ ಎಂಬುದು ಬಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಪ್ರಕರಣದ ಪ್ರಮುಖ ರೂವಾರಿ ಸೋನು ಕುಮಾರ್ ಸೇರಿದಂತೆ ಹೇಮಂತ್ ಶರ್ಮಾ, ರಮೇಶ್ ಕುಮಾರ್, ರಿಂಕು ಶರ್ಮಾ, ವೇದಪ್ರಕಾಶ್, ಅಕ್ಷಯ್, ಸನ್ನಿ ಮತ್ತು ದೀಪಕ್ ಎಂಬ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಈ ಜಾಲದ ಮಾಸ್ಟರ್‌ಮೈಂಡ್ ಎನ್ನಲಾದ ಸೋನು ಕುಮಾರ್, 2022ರಿಂದ ಚಂಡೀಗಢದಲ್ಲಿ ಅಗ್ನಿಶಾಮಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾನೆ. ಬಂಧಿತರಲ್ಲಿ ಕೆಲವರು ಅಭ್ಯರ್ಥಿಗಳಾಗಿ ಪರೀಕ್ಷೆ ಬರೆದಿದ್ದರೆ, ಇನ್ನು ಕೆಲವರು ನಕಲು ಮಾಡಲು ವ್ಯವಸ್ಥೆ ಕಲ್ಪಿಸುವ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಬಂಧಿತರಲ್ಲಿ ಒಬ್ಬಾತ ಉದ್ಯೋಗದ ಸಂದರ್ಶನಕ್ಕೂ ಹಾಜರಾಗುವ ಹಂತದಲ್ಲಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಈ ಗ್ಯಾಂಗ್ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ನೇಮಕಾತಿ ಪ್ರಕ್ರಿಯೆಗಳ ಮೇಲೆ ಕಣ್ಣಿಡುತ್ತಿತ್ತು. ನಂತರ ಉದ್ಯೋಗಾಕಾಂಕ್ಷಿಗಳನ್ನು ನೇರವಾಗಿ ಸಂಪರ್ಕಿಸಿ, ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ತೇರ್ಗಡೆ ಮಾಡಿಸುವ ಭರವಸೆ ನೀಡಿ ತಲಾ ₹8 ಲಕ್ಷದಿಂದ ₹12 ಲಕ್ಷದವರೆಗೆ ಹಣ ವಸೂಲಿ ಮಾಡುತ್ತಿತ್ತು.
ಮುಖ್ಯವಾಗಿ ಲಿಖಿತ ಮತ್ತು ಕೌಶಲ್ಯ ಪರೀಕ್ಷೆಗಳೆರಡೂ ಇರುವ ‘ಗ್ರೂಪ್ ಡಿ’ ಹುದ್ದೆಗಳೇ ಇವರ ಪ್ರಮುಖ ಟಾರ್ಗೆಟ್ ಆಗಿದ್ದವು. ಇದೇ ತಂತ್ರವನ್ನು ಬಳಸಿಕೊಂಡು ಈ ಜಾಲವು ಹಲವು ರಾಜ್ಯಗಳಲ್ಲಿ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಗಿಟ್ಟಿಸಲು ನೆರವಾಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸೇವೆ ಬಳಸಿಕೊಂಡ 10 ರಿಂದ 12 ಅಭ್ಯರ್ಥಿಗಳನ್ನು ತನಿಖಾಧಿಕಾರಿಗಳು ಈಗಾಗಲೇ ಗುರುತಿಸಿದ್ದು, ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಗ್ಯಾಂಗ್‌ನ ಸದಸ್ಯರು ಅಭ್ಯರ್ಥಿಗಳಿಗೆ ಗುಪ್ತ ಕ್ಯಾಮೆರಾಗಳು, ಜಿಎಸ್‌ಎಂ ಸಾಧನಗಳು, ನ್ಯಾನೋ ಇಯರ್‌ಬಡ್‌ಗಳು ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಿದ ಮೊಬೈಲ್ ಫೋನ್‌ಗಳನ್ನು ಒದಗಿಸುತ್ತಿದ್ದರು. ಯಾರಿಗೂ ಅನುಮಾನ ಬಾರದಂತೆ ಅಭ್ಯರ್ಥಿಗಳ ಶರ್ಟ್‌ನ ಗುಂಡಿಗಳ (ಬಟನ್) ಬಳಿ ಸಣ್ಣ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿತ್ತು. ಪರೀಕ್ಷೆಯ ವೇಳೆ ಈ ಕ್ಯಾಮೆರಾಗಳ ಮೂಲಕ ಪ್ರಶ್ನೆಪತ್ರಿಕೆಯ ಚಿತ್ರಗಳನ್ನು ಸೆರೆಹಿಡಿದು ಪರೀಕ್ಷಾ ಕೇಂದ್ರದ ಹೊರಗಿರುವ ಸಹಚರನಿಗೆ ರವಾನಿಸಲಾಗುತ್ತಿತ್ತು. ಹೊರಗಿದ್ದ ಆ ಸಹಚರ ಎಐ ತಂತ್ರಾಂಶವಾದ ‘ಚಾಟ್‌ಜಿಪಿಟಿ’ ಬಳಸಿಕೊಂಡು ಉತ್ತರಗಳನ್ನು ಹುಡುಕಿ, ನ್ಯಾನೋ ಇಯರ್‌ಬಡ್‌ಗಳ ಮೂಲಕ ಅಭ್ಯರ್ಥಿಗಳಿಗೆ ಹೇಳುತ್ತಿದ್ದನು. ಮೊಬೈಲ್ ಸ್ಕ್ರೀನ್ ಆಫ್ ಆಗಿದ್ದರೂ ಚಿತ್ರಗಳನ್ನು ಸೆರೆಹಿಡಿಯುವ ಮತ್ತು ರಿಮೋಟ್ ಮೂಲಕ ನಿಯಂತ್ರಿಸಬಲ್ಲ ವಿಶೇಷ ಆ್ಯಪ್‌ಗಳಿದ್ದ ಮೊಬೈಲ್‌ಗಳನ್ನು ಸಹ ಅಭ್ಯರ್ಥಿಗಳಿಗೆ ನೀಡಲಾಗಿತ್ತು.

ತನಿಖೆಯ ವೇಳೆ 7 ಮೊಬೈಲ್ ಫೋನ್‌ಗಳು, 4 ಜಿಎಸ್‌ಎಂ (GSM) ಸಾಧನಗಳು, ಹಲವು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು, ಒಂದು ಟ್ಯಾಬ್ಲೆಟ್ ಮತ್ತು ಆರೋಪಿಗಳು ಬಳಸುತ್ತಿದ್ದ ಟಾಟಾ ನೆಕ್ಸಾನ್ ಕಾರನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ಸಾಧನಗಳನ್ನು ವಿಧಿವಿಜ್ಞಾನ ತಜ್ಞರ (ಫೋರೆನ್ಸಿಕ್) ಪರಿಶೀಲನೆಗೆ ಕಳುಹಿಸಲಾಗಿದೆ. ಈ ಜಾಲದ ಮೂಲಕ ಇನ್ನು ಎಷ್ಟು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಮತ್ತು ಎಷ್ಟು ಮಂದಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮತ್ತಷ್ಟು ಬಂಧನವಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ...

33 ಲಕ್ಷ ಮತದಾರರಿಗೆ ನೋಟಿಸ್: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಮರಾಠಾ ಸಮುದಾಯದ ಸಮಗ್ರ ಸಮೀಕ್ಷೆಗೆ ಡಿಜಿಟಲ್ ಆ್ಯಪ್

ಕರ್ನಾಟಕದಲ್ಲಿರುವ ಮರಾಠಾ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳನ್ನು...