ಫಾರ್ಮಸಿ ಆಫೀಸರ್ ಪರೀಕ್ಷೆಯಲ್ಲಿ ಬೃಹತ್ ಕಾಪಿ ದಂಧೆ; 35 ಜನರ ಬಂಧನ

Date:

ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದ್ದ ಅಂತರರಾಜ್ಯ ಕಾಪಿ ದಂಧೆಯನ್ನು ಪಂಜಾಬ್ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಕಾಪಿ ದಂಧೆಯಲ್ಲಿ ತೊಡಗಿದ್ದ ಸುಮಾರು 35 ಮಂದಿಯನ್ನು ಬಂಧಿಸಿದ್ದಾರೆ.

- Advertisement -

ಪಂಜಾಬ್‌ನ ಫರೀದ್‌ಕೋಟ್‌ನಲ್ಲಿರುವ ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು (BFUHS) ಭಾನುವಾರ ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಿದೆ. ಒಟ್ಟು 454 ಹುದ್ದೆಗಳ ಭರ್ತಿಗೆ ನಡೆದ ಈ ಪರೀಕ್ಷೆಗೆ ಸುಮಾರು 7,000 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷೆಯ ಪಾರದರ್ಶಕತೆ ಕಾಯ್ದುಕೊಳ್ಳಲು ಫರೀದ್‌ಕೋಟ್, ಕೋಟ್‌ಕಪುರಾ ಹಾಗೂ ಫಿರೋಜ್‌ಪುರದ 18 ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣಾ ತಂಡಗಳನ್ನು ನಿಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ತಪಾಸಣೆಯ ಸಮಯದಲ್ಲಿ ಈ ಬೃಹತ್ ದಂಧೆ ಬೆಳಕಿಗೆ ಬಂದಿದೆ. ಪೊಲೀಸರು 7 ಪ್ರಮುಖ ಸಂಚುಕೋರರು ಮತ್ತು 28 ಪರೀಕ್ಷಾರ್ಥಿಗಳು ಸೇರಿದಂತೆ ಒಟ್ಟು 35 ಜನರನ್ನು ಬಂಧಿಸಿದ್ದಾರೆ. ಬಂಧಿತ ಅಭ್ಯರ್ಥಿಗಳು ತಮ್ಮ ಪಗಡಿ (ತಲೆಪಾವುಡ), ಸಾಕ್ಸ್ ಹಾಗೂ ಒಳ ಉಡುಪುಗಳಲ್ಲಿ ಕಣ್ಣಿಗೆ ಕಾಣಿಸದಂತಹ ಅತ್ಯಂತ ಸೂಕ್ಷ್ಮ ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತಂದಿದ್ದರು ಎಂದು ಆರೋಪಿಸಲಾಗಿದೆ.

ಈ ದಂಧೆಯ ಕಾರ್ಯಾಚರಣೆ ಅತ್ಯಂತ ಸಂಘಟಿತವಾಗಿತ್ತು. ಪರೀಕ್ಷೆ ಪ್ರಾರಂಭವಾದ ತಕ್ಷಣ ಫಿರೋಜ್‌ಪುರದ ಕೇಂದ್ರದಲ್ಲಿದ್ದ ಆಯುಷ್ ಎಂಬ ಅಭ್ಯರ್ಥಿಯು ಪೆನ್ ಕ್ಯಾಮೆರಾ ಬಳಸಿ ಪ್ರಶ್ನೆ ಪತ್ರಿಕೆಯನ್ನು ಸ್ಕ್ಯಾನ್ ಮಾಡಿ, ಹರಿಯಾಣದ ಭಿವಾನಿಯಲ್ಲಿದ್ದ ತನ್ನ ಸಹಚರ ಸಾಜನ್‌ಗೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಿದ್ದನು. ಆತ ಅದನ್ನು ತಕ್ಷಣವೇ ಫರೀದ್‌ಕೋಟ್‌ನ ಹೋಟೆಲ್‌ ಒಂದರ ಬಳಿ ತಾತ್ಕಾಲಿಕ ಕಂಟ್ರೋಲ್ ರೂಮ್ ನಿರ್ಮಿಸಿಕೊಂಡಿದ್ದ ದೀಪಕ್ ಎಂಬಾತನಿಗೆ ರವಾನಿಸಿದನು. ಅಲ್ಲಿಂದ ಮುಖ್ಯ ಆರೋಪಿಗಳಾದ ಮಂಜೀತ್ ಸಿಂಗ್ ಮತ್ತು ದೀಪಕ್, ಪರೀಕ್ಷಾ ಹಾಲ್‌ನಲ್ಲಿದ್ದ ಅಭ್ಯರ್ಥಿಗಳಿಗೆ ಮೈಕ್ರೋ ವೈರ್‌ಲೆಸ್ ಸಾಧನಗಳ ಮೂಲಕ ನೇರವಾಗಿ ಸೂಕ್ತ ಉತ್ತರಗಳನ್ನು ಹೇಳಿಕೊಡುತ್ತಿದ್ದರು ಎಂದು ವರದಿಯಾಗಿದೆ.

ಫಾಜಿಲ್ಕಾದ ಸಂತ್ ಕಬೀರ್ ಪಾಲಿಟೆಕ್ನಿಕ್ ಕಾಲೇಜಿನ ಉದ್ಯೋಗಿ ಗುರುಮೀತ್ ಸಿಂಗ್ ಈ ಇಡೀ ದಂಧೆಯ ಸೂತ್ರಧಾರಿಯಾಗಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವ ಭರವಸೆ ನೀಡಿ ಪ್ರತಿಯೊಬ್ಬ ಅಭ್ಯರ್ಥಿಯಿಂದ 3.5 ಲಕ್ಷದಿಂದ 13 ಲಕ್ಷ ರೂ.ವರೆಗೆ ಭಾರಿ ಹಣ ವಸೂಲಿ ಮಾಡಿದ್ದನೆಂದು ಪೊಲೀಸರು ವಿವರಿಸಿದ್ದಾರೆ.

ಇದು ಪರೀಕ್ಷೆಗೆ ಮುನ್ನ ನಡೆದ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲ, ಬದಲಿಗೆ ಪರೀಕ್ಷೆ ಆರಂಭವಾದ ನಂತರ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಿ ನೈಜ ಸಮಯದಲ್ಲಿ ನಡೆಸಿದ ಅಕ್ರಮವಾಗಿದೆ ಎಂದು ಪೊಲೀಸರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...