ಬಿಜೆಪಿ ಸಂಸದರೊರ್ವರ ಬೆಂಗಾವಲು ವಾಹನವು ಬೈಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಪೋಡ್‌ಗಾಂವ್ ಜಿಲ್ಲೆಯಲ್ಲಿ ನಡೆದಿದೆ.
ಪೋಡ್‌ಗಾಂವ್‌ನಲ್ಲಿ ಬಿಜೆಪಿ ಸಂಸದ ಭೋಜರಾಜ್ ನಾಗ್ ಅವರ ಬೆಂಗಾವಲು ಪಡೆಯಲ್ಲಿದ್ದ ವಾಹನವು ಮೋಟಾರ್‌ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕೇರಳ ಮುಖ್ಯಮಂತ್ರಿ ತೆರಳುತ್ತಿದ್ದ ಕಾರು – ಬೆಂಗಾವಲು ವಾಹನಗಳ ಮಧ್ಯೆ ಸರಣಿ ಅಪಘಾತ
ರಾಯ್‌ಪುರದಿಂದ ದಕ್ಷಿಣಕ್ಕೆ ಸುಮಾರು 180 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯಲ್ಲಿ ತಡರಾತ್ರಿ ಈ ಅಪಘಾತ ನಡೆದಿದೆ. ಸಂಸದ ಭೋಜರಾಜ್ ನಾಗ್ ಅವರು ಕಂಕೇರ್‌ನ ಭಾನುಪ್ರತಾಪುರದಿಂದ ಅಂತಾಗಢದಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
“ರಸ್ತೆಯಲ್ಲಿದ್ದ ದನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಕಂಕೇರ್ ಸಂಸದರ ಬೆಂಗಾವಲು ವಾಹನವು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿದ್ದ ಮೂವರು ವ್ಯಕ್ತಿಗಳು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಯ ಸಮಯದಲ್ಲಿ ಮೂವರೂ ಸಾವನ್ನಪ್ಪಿದ್ದಾರೆ” ಎಂದು ಕಂಕೇರ್ ಜಿಲ್ಲಾ ಪೊಲೀಸ್ ಮುಖ್ಯಸ್ಥೆ ಇಂದಿರಾ ಕಲ್ಯಾಣ್ ಎಲೆಸೆಲಾ ತಿಳಿಸಿದ್ದಾರೆ.
“ಬೈಕ್ ವಿರುದ್ದ ದಿಕ್ಕಿನಿಂದ ಬರುತ್ತಿತ್ತು. ಬೈಕ್‌ಗೆ ಡಿಕ್ಕಿ ಹೊಡೆದ ಎಸ್‌ಯುವಿಯ ಮುಂದಿದ್ದ ಮತ್ತೊಂದು ವಾಹನದಲ್ಲಿ ಸಂಸದರು ಇದ್ದರು. ಮೃತರನ್ನು ತಮೇಶ್ವರ್ ದೇಹಾರಿ, ಗಿರ್ಧಾರಿ ಸಾಮ್ರಾತ್ ಮತ್ತು ಕುಮೇಶ್ವರ ಸಾಮ್ರಾತ್ ಎಂದು ಗುರುತಿಸಲಾಗಿದೆ” ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
