ಬಿಜೆಪಿ ಸಂಸದರ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ; ಮೂವರ ಸಾವು

Date:

ಬಿಜೆಪಿ ಸಂಸದರೊರ್ವರ ಬೆಂಗಾವಲು ವಾಹನವು ಬೈಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಪೋಡ್‌ಗಾಂವ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಪೋಡ್‌ಗಾಂವ್‌ನಲ್ಲಿ ಬಿಜೆಪಿ ಸಂಸದ ಭೋಜರಾಜ್ ನಾಗ್ ಅವರ ಬೆಂಗಾವಲು ಪಡೆಯಲ್ಲಿದ್ದ ವಾಹನವು ಮೋಟಾರ್‌ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಕೇರಳ ಮುಖ್ಯಮಂತ್ರಿ ತೆರಳುತ್ತಿದ್ದ ಕಾರು – ಬೆಂಗಾವಲು ವಾಹನಗಳ ಮಧ್ಯೆ ಸರಣಿ ಅಪಘಾತ

ರಾಯ್‌ಪುರದಿಂದ ದಕ್ಷಿಣಕ್ಕೆ ಸುಮಾರು 180 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯಲ್ಲಿ ತಡರಾತ್ರಿ ಈ ಅಪಘಾತ ನಡೆದಿದೆ. ಸಂಸದ ಭೋಜರಾಜ್ ನಾಗ್ ಅವರು ಕಂಕೇರ್‌ನ ಭಾನುಪ್ರತಾಪುರದಿಂದ ಅಂತಾಗಢದಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

“ರಸ್ತೆಯಲ್ಲಿದ್ದ ದನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಕಂಕೇರ್ ಸಂಸದರ ಬೆಂಗಾವಲು ವಾಹನವು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿದ್ದ ಮೂವರು ವ್ಯಕ್ತಿಗಳು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಯ ಸಮಯದಲ್ಲಿ ಮೂವರೂ ಸಾವನ್ನಪ್ಪಿದ್ದಾರೆ” ಎಂದು ಕಂಕೇರ್ ಜಿಲ್ಲಾ ಪೊಲೀಸ್ ಮುಖ್ಯಸ್ಥೆ ಇಂದಿರಾ ಕಲ್ಯಾಣ್ ಎಲೆಸೆಲಾ ತಿಳಿಸಿದ್ದಾರೆ.

“ಬೈಕ್ ವಿರುದ್ದ ದಿಕ್ಕಿನಿಂದ ಬರುತ್ತಿತ್ತು. ಬೈಕ್‌ಗೆ ಡಿಕ್ಕಿ ಹೊಡೆದ ಎಸ್‌ಯುವಿಯ ಮುಂದಿದ್ದ ಮತ್ತೊಂದು ವಾಹನದಲ್ಲಿ ಸಂಸದರು ಇದ್ದರು. ಮೃತರನ್ನು ತಮೇಶ್ವರ್ ದೇಹಾರಿ, ಗಿರ್ಧಾರಿ ಸಾಮ್ರಾತ್ ಮತ್ತು ಕುಮೇಶ್ವರ ಸಾಮ್ರಾತ್ ಎಂದು ಗುರುತಿಸಲಾಗಿದೆ” ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...