ಛತ್ತೀಸ್‌ಗಢ | ಹತ್ಯೆಗೀಡಾದ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಿಎಂ

Date:

ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ.

- Advertisement -

ಛತ್ತೀಸ್‌ಗಢದ ಪತ್ರಕರ್ತ ಮುಖೇಶ್ ಚಂದ್ರಕರ್ (33) ಅವರು ಜನವರಿ 1ರಂದು ನಾಪತ್ತೆಯಾಗಿದ್ದರು. ಜನವರಿ 3ರಂದು ಬಿಜಾಪುರ ಪಟ್ಟಣದಲ್ಲಿ ರಸ್ತೆ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಜಮೀನಿನಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಮುಖೇಶ್‌ ಅವರನ್ನು ಗುತ್ತಿಗೆದಾರ ಸುರೇಶ್‌ ಚಂದ್ರಕರ್‌ ಅವರೆ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಅವರನ್ನು ಜನವರಿ 5ರಂದು ಹೈದ್ರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಆರೋಪಿ ಸುರೇಶ್ ಅವರ ಸಹೋದರ ರಿತೇಶ್ ಮತ್ತು ದಿನೇಶ್ ಹಾಗೂ ಕೆಲಸಗಳ ಮೇಲ್ವಿಚಾರಕ ಮಹೇಂದ್ರ ರಾಮ್ಟೆಕೆ ಎಂಬವರನ್ನೂ ಬಂಧಿಸಲಾಗಿದೆ.

ಆರೋಪಿ ಸುರೇಶ್ ಚಂದ್ರಕರ್, ಹತ್ಯೆಗೀಡಾದ ಪತ್ರಕರ್ತನ ಸಂಬಂಧಿ ಎಂದು ಹೇಳಲಾಗಿದೆ. ಬಿಜಾಪುರದಲ್ಲಿ ಸುರೇಶ್‌ ನಡೆಸುತ್ತಿದ್ದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖೇಶ್‌ ವರದಿ ಪ್ರಕಟಿಸಿದ್ದರು. ಆ ಕಾರಣಕ್ಕಾಗಿ, ಅವರನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದುಬಂದಿರುವುದಾಗಿ ವರದಿಯಾಗಿದೆ.

“ಮೃತ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡಲಾಗುವುದು. ಪತ್ರಕರ್ತರಿಗಾಗಿ ಕಟ್ಟಡ ನಿರ್ಮಿಸಲಾಗುವುದು. ಆ ಕಟ್ಟಡಕ್ಕೆ ಮುಖೇಶ್ ಅವರ ಹೆಸರಿಡಲಾಗುವುದು” ಎಂದು ಮುಖ್ಯಮಂತ್ರಿ ಸಾಯಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ಮತದಾರರ ಪಟ್ಟಿ ಪರಿಷ್ಕರಣೆ ಸಾಫ್ಟ್‌ವೇರ್‌ನಲ್ಲಿ 4 ಬದಲಾವಣೆ; ಮಹಾರಾಷ್ಟ್ರದ ಮನವಿಗೆ ಕೊನೆಗೂ ಒಪ್ಪಿದ ಚುನಾವಣಾ ಆಯೋಗ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಹೆಚ್ಚಿನ...

ಒಬ್ಬ ರಾವಣ ಮತ್ತೊಬ್ಬ ರಾವಣನ ಮೇಲೆ ಬಾಣ ಬಿಡುವ ನಾಟಕ: ಮೋದಿ ವಿರುದ್ಧ ಧೃವ್ ರಾಠಿ ವ್ಯಂಗ್ಯ

ದೆಹಲಿಯಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾವಣನ...

ಭಾರತೀಯರೊಂದಿಗೆ ಗರ್ಬಾ ಹೆಜ್ಜೆ ಹಾಕಿದ ನ್ಯೂಯಾರ್ಕ್‌ ಮೇಯರ್‌ ಜೋಹ್ರಾನ್ ಮಮ್ದಾನಿ

ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ಅವರು ನವರಾತ್ರಿ ಆಚರಣೆಯಲ್ಲಿ ಭಾರತೀಯರೊಂದಿಗೆ...