ಛತ್ತೀಸ್‌ಗಢ | ಸರಪಂಚ್‌ಗೆ ‘ಮತ’ ಹಾಕಿಲ್ಲವೆಂದು ಕುಟುಂಬದ ಮನೆ ಧ್ವಂಸ, ಬಹಿಷ್ಕಾರ

Date:

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸರಪಂಚ್‌ವೊಬ್ಬ ತನಗೆ ಮತ ಹಾಕಿರಲಿಲ್ಲ ಎಂಬ ಕಾರಣಕ್ಕೆ ಕುಟುಂಬವೊಂದರ ಮನೆಯನ್ನು ಧ್ವಂಸಗೊಳಿಸಿ, ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಗದಾಮೋಡ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸರಪಂಚ್ ತಮಗೆ ನಾವು ಮತ ಹಾಕಿಲ್ಲ ಎಂಬ ಕಾರಣಕ್ಕೆ, ನಮ್ಮ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಅವರ ನಿರ್ದೇಶನದ ಮೇರೆಗೆ ತಮಗೆ ಸಾಮಾಜಿಕ ಬಹಿಷ್ಕರ ವಿಧಿಸಲಾಗಿದ್ದು, ತಮ್ಮ ಮನೆಯನ್ನು ಕೊಡವಿದ್ದಾರೆ ಎಂದು ಸಂತ್ರಸ್ತ ಕುಟುಂಬವು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಂತ್ರಸ್ತ ಕುಟುಂಬ ಮತ್ತು ಸರಪಂಚ್ ಇಬ್ಬರೂ ಸತ್ನಾಮಿ ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ. ಸಂತ್ರಸ್ತ ಕುಟುಂಬದ ಸದಸ್ಯೆ ವಿಜಯ ಲಕ್ಷ್ಮಿ ಮನ್ಹಾರೆ ಅವರು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್, ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ. ತಮಗೆ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.

“ನಮ್ಮದು 10 ಸದಸ್ಯರ ಕುಟುಂಬ. ಕಳೆದ 25 ವರ್ಷಗಳಿಂದ ವಾಸಿಸುತ್ತಿದ್ದ ನಮ್ಮ ಮನೆಯನ್ನು ಸರಪಂಚ್ ಮಹಾಜನ್ ಮನ್ಹಾರೆ ಅವರ ಸೂಚನೆಯ ಮೇರೆಗೆ ತಹಶೀಲ್ದಾರ್ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಉಸ್ತುವಾರಿಯಲ್ಲಿ ಧ್ವಂಸಗೊಳಿಸಿದ್ದಾರೆ. ಸರಪಂಚ್ ಆದೇಶವನ್ನು ಪ್ರಶ್ನಿಸಲು ನಮಗೆ ಅವಕಾಶವನ್ನೂ ನೀಡಲಿಲ್ಲ” ಎಂದು ವಿಜಯ ಲಕ್ಷ್ಮಿ ಮನ್ಹಾರೆ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

“ಈ ಹಿಂದೆಯೂ, ಮನೆ ಖಾಲಿ ಮಾಡುವಂತೆ ಸರಪಂಚ್ ನೋಟಿಸ್ ನೀಡಿದ್ದರು. ಆದರೆ, ಅವರ ನೋಟಿಸ್ ವಿರುದ್ಧ ನವಗಢ ತಹಶೀಲ್ದಾರ್ ಮತ್ತು ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ, ಅವರು ನಮ್ಮ ದೂರು ಸ್ವೀಕರಿಸಲಿಲ್ಲ. ಅಧಿಕಾರಿಗಳು ಸರಪಂಚ್‌ಗೆ ಸಹಕಾರ ನೀಡುತ್ತಿದ್ದಾರೆ. ಶಾಲೆಯಲ್ಲಿ ನಮ್ಮ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿಯಲ್ಲಿ ಊಟವೂ ದೊರೆಯಂತೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಬೆಮೆತಾರ ಜಿಲ್ಲಾಧಿಕಾರಿ ರಣವೀರ್ ಶರ್ಮಾ, “ಗ್ರಾಮಸಭೆಯು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಿರುವ ಕಟ್ಟಡವನ್ನು ಕೆಡವಲು ಅಧಿಕಾರ ಹೊಂದಿದೆ. ಆದಾಗ್ಯೂ, ಈ ಘಟನೆಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸಂತ್ರಸ್ತ ಕುಟುಂಬಕ್ಕೆ ಸಾಮಾಜಿಕವಾಗಿ ಬಹಿಷ್ಕರಿಸಿದ್ದರೆ, ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...