ಛತ್ತೀಸ್‌ಗಢ ಮಾವೋವಾದಿ ದಾಳಿ: 29 ಜನರ ಹತ್ಯೆ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

Date:

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಭೀಕರ ಮಾರಣಹೋಮ ನಡೆದ 13 ವರ್ಷಗಳ ಬಳಿಕ, ಅಪರಾಧಿಗಳೆಂದು ಸಾಬೀತಾದ ಎಲ್ಲ 10 ಮಾವೋವಾದಿ ನಾಯಕರಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

- Advertisement -

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಜಗದಾಳಪುರದಲ್ಲಿರುವ ವಿಶೇಷ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶರಾದ ಅಭಯ್ ಸಿಂಗ್ ರಜಪೂತ್ ಅವರು ಈ ಕಠಿಣ ತೀರ್ಪನ್ನು ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಇದನ್ನೂ ಓದಿ: ಗುಂಡಿನ ಚಕಮಕಿ | ಮಾವೋವಾದಿ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

2013ರ ಮೇ 25ರಂದು ಬಸ್ತಾರ್ ಜಿಲ್ಲೆಯ ಝೀರಂ ಕಣಿವೆಯಲ್ಲಿ ಕಾಂಗ್ರೆಸ್ ಪಕ್ಷದ ‘ಪರಿವರ್ತನ ಯಾತ್ರೆ’ಯ ರ‍್ಯಾಲಿ ಮುಗಿಸಿ ಹಿಂತಿರುಗುತ್ತಿದ್ದ ನಾಯಕರ ಕಾನ್‌ವಾಯ್‌ ಮೇಲೆ ನೂರಾರು ನಕ್ಸಲರು ಹೊಂಚುದಾಳಿ ನಡೆಸಿದ್ದರು. ಈ ಭೀಕರ ದಾಳಿಯಲ್ಲಿ ಛತ್ತೀಸ್‌ಗಢ ಕಾಂಗ್ರೆಸ್ ಘಟಕದ ಅಧ್ಯಕ್ಷ ನಂದಕುಮಾರ್ ಪಟೇಲ್, ಅವರ ಪುತ್ರ ದಿನೇಶ್ ಪಟೇಲ್, ಮಾಜಿ ಕೇಂದ್ರ ಸಚಿವ ವಿದ್ಯಾಚರಣ್ ಶುಕ್ಲಾ, ಹಿರಿಯ ನಾಯಕ ಮಹೇಂದ್ರ ಕರ್ಮಾ ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ದಾರುಣವಾಗಿ ಹತ್ಯೆಯಾಗಿದ್ದರು.

ದಾಳಿಯ ಬಳಿಕ ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್‌ಐಎ, ಮಾವೋವಾದಿ ಸಂಘಟನೆಯ ಪ್ರಮುಖ ಕಾರ್ಯಕರ್ತರು ಸೇರಿದಂತೆ 10 ಜನರನ್ನು ಬಂಧಿಸಿ ದೋಷಾರೋಪಣೆ ಸಲ್ಲಿಸಿತ್ತು. ನ್ಯಾಯಾಲಯದಲ್ಲಿ ನಡೆದ ಸುದೀರ್ಘ ವಿಚಾರಣೆ ಮತ್ತು ಸಲ್ಲಿಕೆಯಾದ ಪ್ರಬಲ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಧೀಶರು, ಪ್ರಕರಣವನ್ನು “ಅತ್ಯಂತ ಅಪರೂಪದಲ್ಲಿ ಅಪರೂಪದ ಪ್ರಕರಣ” ಎಂದು ಪರಿಗಣಿಸಿ ಎಲ್ಲಾ 10 ಜನರಿಗೂ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...