ಛತ್ತೀಸ್‌ಗಢ | ಹಿಂಸಾಚಾರಕ್ಕೆ ತಿರುಗಿದ ತಮ್ನಾರ್‌ ಕಲ್ಲಿದ್ದಲು ಗಣಿಗಾರಿಕೆ ವಿರೋಧಿ ಹೋರಾಟ; ವಾಹನಗಳಿಗೆ ಬೆಂಕಿ

Date:

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆ ವಿರುದ್ಧ ಶನಿವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ ಭದ್ರತಾ ಪಡೆಗಳೊಂದಿಗೆ ಪ್ರತಿಭಟನಾಕಾರರು ಘರ್ಷಣೆ ನಡೆಸಿದ್ದಾರೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರಿಗೆ ಗಾಯಗಳಾಗಿವೆ.

- Advertisement -

ಕಲ್ಲಿದ್ದಲು ಸಾಗಿಸುತ್ತಿದ್ದ ಭಾರೀ ವಾಹನವೊಂದು ಸೈಕಲ್ ಸವಾರಿ ಮಾಡುತ್ತಿದ್ದ ಸ್ಥಳೀಯ ಗ್ರಾಮಸ್ಥನಿಗೆ ಡಿಕ್ಕಿ ಹೊಡೆದಿದ್ದು, ಆತ ಲಾರಿಯ ಕೆಳಗೆ ನಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ, ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ಶನಿವಾರ ಪ್ರತಿಭಟನೆಗಳು ಭುಗಿಲೆದ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ...

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ ಘನತೆ-ಗಾಂಧೀಜಿ ಪ್ರತಿಪಾದಿಸಿದ ಈ ಮೂರು ಮೌಲ್ಯಗಳು ಇಂದಿನ ಅಸಮಾನತೆಯ ಸಮಾಜದಲ್ಲಿ ಹೆಚ್ಚು ಪ್ರಸ್ತುತವಾಗಿವೆ. ಆದರೆ ಅವುಗಳನ್ನು ವೈಯಕ್ತಿಕ ಬದುಕು, ಸಾಮಾಜಿಕ...

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ...

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ ತೊಳಲಾಡುತ್ತಿರುವ ಹೊತ್ತಿನಲ್ಲಿ, ಭಾರತದ ಆರ್ಥಿಕತೆಯ ನಿಜವಾದ ಸ್ಥಿತಿಗತಿ ಏನು? ನಾವು ಸಾಗುತ್ತಿರುವ ಹಾದಿ ನಮ್ಮನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಬಲ್ಲದೇ? ಈ...

ಇಸ್ರೇಲ್ ಪ್ರಧಾನಿ ಪಟ್ಟಕ್ಕೇರಲು ಗಾಡಿ ಐಸೆನ್ಕೋಟ್ ಮಾಡಿಕೊಳ್ಳಬೇಕಾದ ಪ್ರಮುಖ...

ಇಸ್ರೇಲ್‌ನ ಚುನಾವಣೆ ಮುಗಿದ್ದು, ಅತಂತ್ರ ಪರಿಸ್ಥಿತಿ ಇದೆ. ಹೊಸ ಸರ್ಕಾರ ರಚನೆಗೆ ಮಾಜಿ ಸೇನಾ ಮುಖ್ಯಸ್ಥ, ನ್ಯಾಷನಲ್ ಯೂನಿಟಿ ಪಕ್ಷದ ನಾಯಕ ಗಾಡಿ ಐಸೆನ್ಕೋಟ್ ಅವರನ್ನು ಅಧ್ಯಕ್ಷರು ಆಹ್ವಾನಿಸಿದ್ದಾರೆ. ಆದರೆ, ಅವರ ಪಕ್ಷವು...

ಶನಿವಾರ ಬೆಳಗ್ಗೆ ಆರಂಭಗೊಂಡ ಪ್ರತಿಭಟನೆ ಮಧ್ನಾಹ್ನದ ವೇಳೆಗೆ ಹಿಂಸಾಚಾರಕ್ಕೆ ತಿರುಗಿತು. ಸಂಜೆಯವರೆಗೂ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿತ್ತು. ವಾಹನಗಳಿಗೆ ಬೆಂಕಿ ಹಚ್ಚುವಿಕೆ, ಕಲ್ಲು ತೂರಾಟ ಹಾಗೂ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ.

ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾದ ರಾಧೇಶ್ಯಾಮ್ ಶರ್ಮಾ ಸೇರಿದಂತೆ ಸುಮಾರು 35–40 ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ತಮ್ನಾರ್ ಪ್ರದೇಶದ 14 ಹಳ್ಳಿಗಳ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಗೇರ್ ಪೆಲ್ಮಾದಲ್ಲಿ ಖಾಸಗಿ ಕಂಪನಿಯ ಕಲ್ಲಿದ್ದಲು ಗಣಿಗಾರಿಕೆಗಾಗಿ ‘ಪರಿಸರ ಸಾರ್ವಜನಿಕ ವಿಚಾರಣೆ’ಯ ನಕಲಿ ವರದಿಯನ್ನು ಸಿದ್ದಪಡಿಸಿ, ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಗಣಿಗಾರಿಕೆ ವಿರುದ್ಧ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಸ್ಥಳೀಯ ಗ್ರಾಮಸ್ಥನ ಸವಿನ ಬಳಿಕ, ಪ್ರತಿಭಟನೆ ಉದ್ವಿಗ್ನಗೊಂಡಿದೆ.

ಈ ಲೇಖನ ಓದಿದ್ದೀರಾ?: ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’ ಮತ್ತು ತಮಿಳುನಾಡಿನ ರಾಜಕಾರಣ

“ಗ್ರಾಮಸ್ಥರು ಭದ್ರತಾ ಪಡೆಗಳ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ತೂರಿದ್ದಾರೆ. ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ. ಪ್ರದೇಶದಲ್ಲಿ ಬಿಗಿಬಂದೋಬಸ್ತ್‌ಗಾಗಿ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಗ್ರಾಮವನ್ನು ನಿರ್ಬಂಧಿಸಲಾಗಿದೆ” ಎಂದು ಬಿಲಾಸ್ಪುರ್ ವಲಯ ಐಜಿಪಿ ಸಂಜೀವ್ ಶುಕ್ಲಾ ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಘಟನೆಯನ್ನು ‘ಛತ್ತೀಸ್‌ಗಢ ಬಚಾವೋ ಆಂದೋಲನ’ವು ದುರದೃಷ್ಟಕರವೆಂದು ಕರೆದಿದೆ. ಘಟನೆಗೆ ರಾಜ್ಯ ಸರ್ಕಾರವನ್ನು ದೂಷಿಸಿದೆ. “ಹಸ್ದಿಯೊದಿಂದ ಅಮೇರಾವರೆಗೆ ಅರಣ್ಯ ಪ್ರದೇಶಗಳಲ್ಲಿ ರಾಜ್ಯಾದ್ಯಂತ ಗಣಿಗಾರಿಕೆಗಳು ನಡೆಯುತ್ತಿವೆ. ಅವುಗಳ ವಿರುದ್ಧ ನಡೆಯುತ್ತಿರುವ ಶಾಂತಿಯುತ, ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಸರ್ಕಾರಗಳು ಪೊಲೀಸ್ ಬಲವನ್ನು ಪ್ರಯೋಗಿಸುತ್ತಿವೆ. ಆದಿವಾಸಿ ಮತ್ತು ರೈತರ ಜೀವನೋಪಾಯವನ್ನು ಬಲಿಕೊಟ್ಟು ಛತ್ತೀಸ್‌ಗಢವನ್ನು ‘ಕಾರ್ಪೊರೇಟ್ ಲೂಟಿ’ಗೆ ಒಡ್ಡುತ್ತಿವೆ” ಎಂದು ಆರೋಪಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ದೇಶದ ರೈತರು ಒಗ್ಗಟ್ಟಾಗಿ ಹೋರಾಡಬೇಕು; ಬೃಂದಾ ಕಾರಟ್‌

ಜನವಿರೋಧಿ, ರೈತವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ದೇಶದ ರೈತರು ಒಗ್ಗಟ್ಟಾಗಿ ಹೋರಾಟ...

ಶಿವಸೇನೆ ಪಕ್ಷಾಂತರದ ವದಂತಿಗಳ ನಡುವೆ ಪುಣೆಯಲ್ಲಿ ಅಮಿತ್ ಶಾ-ಏಕನಾಥ್ ಶಿಂದೆ ಭೇಟಿ

ಶಿವಸೇನೆಯಲ್ಲಿನ (ಉದ್ಧವ್ ಬಣ) ಪಕ್ಷಾಂತರದ ವದಂತಿಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮಹಾರಾಷ್ಟ್ರ ಉಪಮುಖ್ಯಮಂತ್ರಿ...

ಮುಂಬೈ-ಗೋವಾ ಹೆದ್ದಾರಿ ಕಾಮಗಾರಿ ವಿಳಂಬ: ಪ್ರಭಾವಿಗಳ ನಂಟು, ₹2,000 ಕೋಟಿ ಅಧಿಕ ಹೊರೆ!

 ಕರಾವಳಿ ಭಾಗದ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿರೀಕ್ಷೆಯೊಂದಿಗೆ ಆರಂಭವಾದ 592...

ಲೋಕಸಭೆಯ ಚಳಿಗಾಲದ ಅಧಿವೇಶನ; ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆಗೆ ಬಿಜೆಪಿ ತಯಾರಿ

ಕೇಂದ್ರ ಬಿಜೆಪಿ ಸರ್ಕಾರವು ಮುಂಬರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಸತ್ತಿನ ವಿಶೇಷ...