‘ನನ್ನಿಂದ ಸಮರ್ಥಿಸಿಕೊಳ್ಳಲಾಗದು’ – ಎಎಪಿ ತೊರೆದು ಕಾಂಗ್ರೆಸ್ ಸೇರಿದ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್

Date:

ಆಮ್ ಆದ್ಮಿ ಪಾರ್ಟಿಯ (ಆಪ್) ಹಿರಿಯ ನಾಯಕಿ ಹಾಗೂ ರಾಷ್ಟ್ರೀಯ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಅವರು ಶನಿವಾರ ಎಎಪಿಗೆ ರಾಜೀನಾಮೆ ನೀಡಿ, ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ದಶಕಕ್ಕೂ ಹೆಚ್ಚು ಕಾಲ ‘ಆಪ್’ ಜೊತೆ ಗುರುತಿಸಿಕೊಂಡಿದ್ದ ಅವರು, ಪಕ್ಷವು ತನ್ನ ಮೂಲ ತತ್ವಗಳನ್ನು ಬಿಟ್ಟುಕೊಟ್ಟಿದೆ. ನನಗೆ ಇನ್ನಷ್ಟು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

- Advertisement -

ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕಾ ಕಕ್ಕರ್, “ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲದ ವಿಷಯಗಳನ್ನು ಇನ್ನು ಮುಂದೆ ನನ್ನಿಂದ ಸಮರ್ಥಿಸಿಕೊಳ್ಳಲಾಗದು” ಎಂದು ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಇದನ್ನೂ ಓದಿ: ದೆಹಲಿಯಲ್ಲಿ ಎಎಪಿ ವಿಭಜನೆ?: ಪಕ್ಷ ತೊರೆದು ಹೊಸ ಪಕ್ಷ ಕಟ್ಟಲು ಮುಂದಾದ 15 ಕೌನ್ಸಿಲರ್‌ಗಳು

ಎಎಪಿಯ ಆಂತರಿಕ ನಿರ್ಧಾರಗಳು ಮತ್ತು ಕಾರ್ಯಶೈಲಿಯನ್ನು ಪ್ರಶ್ನಿಸಿದ ಅವರು, ಆಪ್‌ನ ಉನ್ನತ ನಾಯಕತ್ವವು ತನ್ನ ಕಾರ್ಯಕರ್ತರನ್ನು ಮತ್ತು ತತ್ವಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವ ಮತ್ತು ರಾಜಕೀಯ ಶೈಲಿಯನ್ನು ಪ್ರಶಂಸಿಸಿದ ಕಕ್ಕರ್, “ದೇಶದ ರಾಜಕೀಯದಲ್ಲಿ ರಾಹುಲ್ ಗಾಂಧಿ ಅತ್ಯಂತ ಪ್ರಾಮಾಣಿಕ ನಾಯಕ” ಎಂದು ಅಭಿಪ್ರಾಯಿಸಿದ್ದಾರೆ.

ಪ್ರಿಯಾಂಕಾ ಕಕ್ಕರ್ ಯಾರು?

ವಕೀಲೆಯಾಗಿರುವ ಪ್ರಿಯಾಂಕಾ ಕಕ್ಕರ್ ಅವರು ಅಮೆರಿಕದ ‘ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ’ದಿಂದ ಕಾನೂನು ಸ್ನಾತಕೋತ್ತರ (LLM) ಪದವಿ ಪಡೆದಿದ್ದಾರೆ. 2013ರಲ್ಲಿ ಆಪ್ ಸೇರಿದ್ದ ಇವರು, 2021 ರಿಂದ 2023 ರವರೆಗೆ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು. 2023ರ ಏಪ್ರಿಲ್‌ನಲ್ಲಿ ಅವರನ್ನು ಆಪ್‌ನ ರಾಷ್ಟ್ರೀಯ ಮುಖ್ಯ ವಕ್ತಾರೆಯಾಗಿ ನೇಮಿಸಲಾಗಿತ್ತು. ಇದೀಗ ದೆಹಲಿಯಲ್ಲಿ ಎಎಪಿಯ ಪ್ರಮುಖ ಮುಖಗಳಲ್ಲಿ ಒಂದಾಗಿದ್ದ ಪ್ರಿಯಾಂಕಾ ಕಕ್ಕರ್ ಅವರ ಈ ನಿರ್ಗಮನ ಹಾಗೂ ಕಾಂಗ್ರೆಸ್ ಸೇರ್ಪಡೆಯು ದೆಹಲಿ ಮತ್ತು ರಾಷ್ಟ್ರ ರಾಜಕೀಯದಲ್ಲಿ ಆಪ್‌ಗೆ ದೊಡ್ಡ ಆಘಾತವನ್ನುಂಟುಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...

ಅವಳ ಕಣ್ಣೋಟ | ಲಿಪ್‌ಸ್ಟಿಕ್‌ನ ಬಣ್ಣದ ಕೆಳಗೆ ಹುದುಗಿದ ಕನಸುಗಳು

ಭಾರತೀಯ ಚಿತ್ರರಂಗಕ್ಕೆ ಮಹಿಳೆಯ ಆಸೆ, ಲೈಂಗಿಕತೆ, ದಾಂಪತ್ಯದೊಳಗಿನ ಅಸಮಾನತೆ ಮತ್ತು ಸ್ವಾತಂತ್ರ್ಯದ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...