ಪಾಟ್ನಾದಲ್ಲಿ ಮಕ್ಕಳ ಹತ್ಯೆ; ಪ್ರತಿಭಟನೆಗೆ ಹೆದರಿ ಆರೋಗ್ಯ ಸಚಿವ ಪರಾರಿ

Date:

Advertisements

ಬಿಹಾರದ ಪಾಟ್ನಾದಲ್ಲಿ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯಿಂದಾಗಿ ಜನರು ಆಕ್ರೋಶಗೊಂಡಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಟ್ನಾದ ಅಟಲ್ ಪಥ್‌ನಲ್ಲಿ ಆಕ್ರೋಶಿತ ಜನರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ವೇಳೆ, ಅಟಲ್ ಪಥ್‌ನಲ್ಲಿ ತೆರಳುತ್ತಿದ್ದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರ ಕಾರನ್ನೂ ಪ್ರತಿಭಟನಾಕಾರರು ಅಡ್ಡಹಗಟ್ಟಿದ್ದಾರೆ. ಪ್ರತಿಭಟನೆಗೆ ಹೆದರಿದ ಮಂಗಲ್ ಪಾಂಡೆ ಸ್ಥಳದಿಂದ ಕಾಲು ಕಿತ್ತಿದ್ದು, ಅವರ ಕಾರಿನ ಮೇಲೆ ಜನರು ಕಲ್ಲು ತೂರಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆ ಮತ್ತು ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ವಿಪಕ್ಷ ನಾಯಕ ತೇಜಸ್ವಿ ಯಾದವ್, ಘಟನೆಗೆ ಸಂಬಂಧಿಸಿದಂತೆ ಬಿಹಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ತೇಜಸ್ವಿ ಯಾದವ್, “ಕಳೆದ ಕೆಲವು ದಿನಗಳಲ್ಲಿ, ಬಿಹಾರದ ರಾಜಧಾನಿ ಪಾಟ್ನಾದಲ್ಲಿ 5-6 ಮಕ್ಕಳು ಹತ್ಯೆಗೀಡಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ನಾಶವಾಗಿದೆ. ಸರ್ಕಾರ-ಆಡಳಿತವು ವಿಚಾರಣೆ ನಡೆಸುವಲ್ಲಿ ಮತ್ತು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ನಿನ್ನೆಯಷ್ಟೇ, ಪಟೇಲ್ ನಗರದಲ್ಲಿ ಇಬ್ಬರು ಮಕ್ಕಳ ಹತ್ಯೆಯಾಗಿದ್ದು, ಆಕ್ರೋಶಗೊಂಡ ಜನರು ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಪಾಂಡೆ ಜೀ, ನೀವು ಎಷ್ಟು ಸೂಕ್ಷ್ಮವಲ್ಲದ, ದುರಹಂಕಾರಿ ಮತ್ತು ಗಣ್ಯ ಸಚಿವರೆಂದರೆ, ಸಂತ್ರಸ್ತ ಕುಟುಂಬಗಳೊಂದಿಗೆ ಮಾತನಾಡುವುದೂ ಅವಮಾನವೆಂದು ಭಾವಿಸಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಪಾಟ್ನಾದ ಪಟಲಿಪುತ್ರ ಪ್ರದೇಶದಲ್ಲಿ ವಾಸಿಸುವ ಸಹೋದರ ಮತ್ತು ಸಹೋದರಿಯನ್ನು ಪೊಲೀಸರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಸೋಮವಾರ ಸಂಜಕೆ ಪ್ರತಿಭಟನೆಗಿಳಿದಿದ್ದರು. ಪ್ರತಿಭಟನಾನಿರತ ಜನರನ್ನು ತಡೆಯಲು ಪೊಲೀಸರು ಬಂದಾಗ, ಅವರ ಮೇಲೂ ದಾಳಿ ನಡೆದಿದೆ. ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ...

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

Download Eedina App Android / iOS

X